Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ | ಗಣಿತವನ್ನು ಕಲಿಯಲು ಯುವ...

ಕಲಬುರಗಿ | ಗಣಿತವನ್ನು ಕಲಿಯಲು ಯುವ ಮನಸ್ಸುಗಳನ್ನು ಪ್ರೇರೇಪಿಸಬೇಕು : ಬಟ್ಟು ಸತ್ಯನಾರಾಯಣ

ವಾರ್ತಾಭಾರತಿವಾರ್ತಾಭಾರತಿ18 March 2025 7:40 PM IST
share
Photo of Program

ಕಲಬುರಗಿ: "ಗಣಿತವನ್ನು ಉತ್ಸಾಹದಿಂದ ಕಲಿಯಲು ಯುವ ಮನಸ್ಸುಗಳನ್ನು ಪ್ರೇರೇಪಿಸಬೇಕಾಗಿದೆ" ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಹೇಳಿದರು.

ಆಳಂದ ತಾಲೂಕಿನ ಕಡಗಂಚಿ ಬಳಿಯ ಸಿಯುಕೆಯಲ್ಲಿ ಗಣಿತ ವಿಭಾಗ ಆಯೋಜಿಸಿದ್ದ ಅಂತರರಾಷ್ಟ್ರೀಯ 2025ನೇ ಗಣಿತ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಸುರತ್ಕಲ್‌ನ ಎನ್‌ಐಟಿಯ ಪ್ರೊ.ಬಿ.ಆರ್.ಶಂಕರ್ ಅವರು "ಗಣಿತ, ಕಂಪ್ಯೂಟಿoಗ್, ಆಟಗಳು ಮತ್ತು ಒಂದು ಮಿಲಿಯನ್ ಡಾಲರ್ಸ್" ಕುರಿತು ಉಪನ್ಯಾಸ ನೀಡಿದರು. ಬ್ರಹ್ಮ ಗೋಪುರ, ನೈಟ್ಸ್ ಟೂರ್ ಸಮಸ್ಯೆ, ಮತ್ತು ಶತಮಾನಗಳಿಂದ ಗಣಿತಜ್ಞರನ್ನು ಕುತೂಹಲಕ್ಕೆ ಗುರಿ ಮಾಡಿದ ಇತರ ಗಣಿತದ ಪ್ರಸಿದ್ಧ ಒಗಟುಗಳನ್ನು ಕುರಿತು ಚರ್ಚಿಸಿದರು.

ಡಾ.ವಿದ್ಯಾಧರ್ ಉಪಾಧ್ಯ ಅವರು "ಜನರೇಟಿವ್ ಮಾಡೆಲ್ಸ್" ಕುರಿತಂತೆ ಮಹತ್ವದ ವಿಷಯಗಳನ್ನು ತಿಳಿಸಿದರು. "ಆಧುನಿಕ ಕೃತಕ ಬುದ್ಧಿಮತ್ತೆ ಮಾದರಿಗಳು ಸಂಭವನೀಯತೆ ವಿತರಣಾ ಮಾದರಿಗಳನ್ನು ಬಳಸಿಕೊಂಡು ಚಿತ್ರಗಳನ್ನು ಉತ್ಪಾದಿಸುತ್ತವೆ. ಗೌಸಿಯನ್ ವಿತರಣಾ ಪರಿಕಲ್ಪನೆಗಳು, ನರಮಂಡಲ ಜಾಲಗಳು ಮತ್ತು ಆಳವಾದ ಕಲಿಕೆಯ ವಿಧಾನಗಳಂತಹ ತಂತ್ರಜ್ಞಾನಗಳು ಇಂದಿನ ಜಗತ್ತಿನಲ್ಲಿ ಬಹಳ ಮುಖ್ಯ" ಎಂದು ವಿವರಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಸಂಘಟನಾ ಕಾರ್ಯದರ್ಶಿ ಡಾ.ಸುಮುಖ ಎಸ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಗಣಿತದ ಅರಿವನ್ನು ಉತ್ತೇಜಿಸುವ ಕಾರ್ಯಕ್ರಮದ ಉದ್ದೇಶಗಳನ್ನು ವಿವರಿಸಿದರು. ಗಣಿತ ವಿಭಾಗದ ಮುಖ್ಯಸ್ಥ ಮತ್ತು ಸಂಚಾಲಕ ಡಾ.ಜಿ.ಜನಾರ್ದನ ರೆಡ್ಡಿ ಸ್ವಾಗತಿಸಿದರು. ಭೌತ ವಿಜ್ಞಾನ ನಿಕಾಯದ ಡೀನ್ ಡಾ.ಭರತ್ ಕುಮಾರ್ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಡಾ.ಎನ್.ಸಂದೀಪ್, ಡಾ.ದೇವಿಕಾ, ಡಾ.ಮೇಘನಾ ಸೇರಿದಂತೆ ಇತರ ಗಣ್ಯ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಮಾರಂಭವು ವಿಜ್ಞಾನ ಮತ್ತು ಗಣಿತ ಕ್ಷೇತ್ರದಲ್ಲಿ ಹೊಸ ಚಿಂತನೆಗಳಿಗೆ ದಾರಿ ತೆರೆದಿತು ಎಂದು ಭಾಗವಹಿಸಿದ ವಿದ್ಯಾರ್ಥಿಗಳು ಅಭಿಪ್ರಾಯಪಟ್ಟರು. ಡಾ.ಸಮೀರ್ ಕರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X