Kalaburagi | ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ವಿಜಯಕುಮಾರ್ ಬಾಬುರಾವ್
ಕಲಬುರಗಿ : ನಗರದ ಎಸ್.ಬಿ.ಕಾಲೇಜು ಸಮೀಪದ ರಾಮನಗರ ಪ್ರದೇಶದಲ್ಲಿ ಶುಕ್ರವಾರ ಸಂಜೆ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಮೃತನನ್ನು ರಾಮನಗರ ನಿವಾಸಿ ವಿಜಯಕುಮಾರ್ ಬಾಬುರಾವ್ (26) ಎಂದು ಗುರುತಿಸಲಾಗಿದೆ.
ವೈಯಕ್ತಿಕ ದ್ವೇಷದ ಹಿನ್ನೆಲೆ ರವಿ ಎಂಬಾತ ವಿಜಯಕುಮಾರ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ವಿಜಯಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹತ್ಯೆಗೆ ವೈಯಕ್ತಿಕ ದ್ವೇಷವೇ ಕಾರಣವಾಗಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಘಟನಾ ಸ್ಥಳಕ್ಕೆ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯ ಪತ್ತೆ ಹಾಗೂ ಘಟನೆಯ ಹಿನ್ನೆಲೆ ಕುರಿತು ತನಿಖೆ ಮುಂದುವರಿದಿದೆ.
Next Story




