ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

ಮರೆಪ್ಪ ಭೀಮರಾಯ
ಕಲಬುರಗಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ರವಿವಾರ ಮಧ್ಯರಾತ್ರಿ ಕೊಲೆ ಮಾಡಿರುವ ಘಟನೆ ನಗರದ ಹೀರಾಪುರ ಪ್ರದೇಶದಲ್ಲಿರುವ ಸ್ಮಶಾನ ಭೂಮಿಯಲ್ಲಿ ನಡೆದಿದೆ.
ಕಲಬುರಗಿಯ ಮೈನಾಳ ಗ್ರಾಮದ ಯುವಕ ಮರೆಪ್ಪ ಭೀಮರಾಯ ಕಟ್ಟಿಮನಿ (23) ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ.
ಪ್ರೀತಿಯ ವಿಚಾರದಲ್ಲಿ ಜಗಳವಾಗಿ ಯುವಕನ ಕೊಲೆಯಾಗಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದ್ದು, ಈ ಕುರಿತಂತೆ ಕಲಬುರಗಿ ನಗರದ ಪವನ್ ಹೀರಾಪುರ ಹಾಗೂ ಸಂಜು ಅಲಿಯಾಸ್ ಕರಿಯಾ ಎಂಬಾತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಡಾ.ಶರಣಪ್ಪ ಎಸ್.ಡಿ, ಡಿಸಿಪಿ ಕನಿಕಾ ಸಿಕ್ರಿವಾಲ್ ಸೇರಿದರೆ ಅಶೋಕನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





