Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ಯುವಕರು ಉದ್ಯೋಗ...

Kalaburagi | ಯುವಕರು ಉದ್ಯೋಗ ಅರಸುವವರಲ್ಲ, ಉದ್ಯೋಗ ಸೃಷ್ಟಿಸುವವರಾಗಲಿ: ಶಿಕರ್ ಮುಘಾ

ವಾರ್ತಾಭಾರತಿವಾರ್ತಾಭಾರತಿ12 Jun 2026 7:30 PM IST
share
Kalaburagi | ಯುವಕರು ಉದ್ಯೋಗ ಅರಸುವವರಲ್ಲ, ಉದ್ಯೋಗ ಸೃಷ್ಟಿಸುವವರಾಗಲಿ: ಶಿಕರ್ ಮುಘಾ

ಕಲಬುರಗಿ: ವಿಶ್ವವಿದ್ಯಾಲಯಗಳು ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳಿಂದ ಹೊರಬರುವ ಯುವ ಪ್ರತಿಭೆಗಳು ತಮ್ಮಲ್ಲಿರುವ ಉದ್ಯಮಶೀಲತಾ ಕೌಶಲ್ಯಗಳನ್ನು ಗುರುತಿಸಿ ಬೆಳೆಸಿಕೊಂಡರೆ ವೈಯಕ್ತಿಕ ಯಶಸ್ಸಿನ ಜೊತೆಗೆ ದೇಶದ ಅಭಿವೃದ್ಧಿಗೂ ಮಹತ್ವದ ಕೊಡುಗೆ ನೀಡಬಹುದು ಎಂದು ಪ್ರೊಬೇಷನರಿ ಐಎಎಸ್ ಅಧಿಕಾರಿ ಶಿಕರ್ ಮುಘಾ ಹೇಳಿದರು.

ನಗರದ ಶರಣಬಸವ ವಿಶ್ವವಿದ್ಯಾಲಯದ ದೊಡ್ಡಪ್ಪ ಅಪ್ಪ ಸಭಾ ಮಂಟಪದಲ್ಲಿ ಇಸಿಇ ವಿಭಾಗದ ತರಬೇತಿ ಮತ್ತು ಉದ್ಯೋಗ ನೇಮಕಾತಿ ಘಟಕವು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಹಯೋಗದಲ್ಲಿ ಆಯೋಜಿಸಿದ್ದ ಪ್ಲೇಸ್‌ಮೆಂಟ್ ಡ್ರೈವ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಯುವಕರು ಕೇವಲ ಉದ್ಯೋಗಕ್ಕಾಗಿ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಿಯೂ ರೂಪುಗೊಳ್ಳಬೇಕು. ಸಮಾಜದ ಉತ್ಪಾದಕ ಪಾಲುದಾರರಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಗುರಿಗಳ ಸಾಧನೆಯಲ್ಲಿ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.

ತಮ್ಮ ವೈಯಕ್ತಿಕ ಅನುಭವ ಹಂಚಿಕೊಂಡ ಅವರು, ಇಂಜಿನಿಯರಿಂಗ್ ಶಿಕ್ಷಣ ಪೂರ್ಣಗೊಳಿಸಿದ ಬಳಿಕ ಇಂಟರ್ನ್‌ಶಿಪ್ ಅವಧಿಯಲ್ಲಿ ಪಡೆದ ಅನುಭವವೇ ನಾಗರಿಕ ಸೇವೆಗಳತ್ತ ತಮ್ಮನ್ನು ಸೆಳೆದಿತು ಎಂದು ಹೇಳಿದರು. ತಮ್ಮ ಹಲವಾರು ಸ್ನೇಹಿತರು ಯಶಸ್ವಿ ಉದ್ಯಮಿಗಳಾಗಿ ಬೆಳೆದು ಸಾವಿರಾರು ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಿರುವುದನ್ನು ಉಲ್ಲೇಖಿಸಿದ ಅವರು, ವಿದ್ಯಾರ್ಥಿಗಳು ತಮ್ಮೊಳಗಿನ ಉದ್ಯಮಶೀಲ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ವಿದ್ಯಾವಂತ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಈ ಪ್ರದೇಶದಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ನಿಟ್ಟಿನಲ್ಲಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಹೀರೋ ಮೋಟಾರ್ಸ್ ಸಂಸ್ಥೆಯ ಪ್ರಧಾನ ವಿತರಕ ಕೃಷ್ಣಾಜಿ ಕುಲಕರ್ಣಿ ಹಾಗೂ ರೆನಾಲ್ಟ್ ಮತ್ತು ಐಷರ್ ಹೆವಿ ವೆಹಿಕಲ್ಸ್ ಸಂಸ್ಥೆಗಳ ಪ್ರಧಾನ ವಿತರಕ ದೊಡ್ಡಪ್ಪ ನಿಷ್ಠಿ ತಮ್ಮ ಉದ್ಯಮಶೀಲ ಪಯಣದ ಅನುಭವಗಳನ್ನು ಹಂಚಿಕೊಂಡರು.

ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಮಾತನಾಡಿ, ಪ್ಲೇಸ್‌ಮೆಂಟ್ ಡ್ರೈವ್ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳ ಹೊಸ ದಾರಿಗಳನ್ನು ತೆರೆಯಲಿದ್ದು, ಯಶಸ್ವಿ ಉದ್ಯಮಿಗಳಾಗಲು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶರಣಬಸವ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅನಿಲಕುಮಾರ ಬಿಡವೆ ವಹಿಸಿದ್ದರು. ಕುಲಸಚಿವೆ ಡಾ.ಲಕ್ಷ್ಮಿ ಪಾಟೀಲ್ ಮಾಕಾ, ಡೀನ್ ಡಾ. ಶಿವಕುಮಾರ ಜವಳಿಗಿ, ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್‌ನ ಕಲಬುರಗಿ ಕ್ಲಸ್ಟರ್ ಮುಖ್ಯಸ್ಥ ಸುಜಯ್ ಮುದ್ಗಲ್, ವಿಶ್ವವಿದ್ಯಾಲಯದ ನಿರ್ದೇಶಕ ಪ್ರೊ.ವಿ.ಡಿ.ಮೈತ್ರಿ, ಸುಭಾ ಮಹತಾ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

ಪ್ಲೇಸ್‌ಮೆಂಟ್ ಡ್ರೈವ್‌ನಲ್ಲಿ ಸಾಫ್ಟ್‌ವೇರ್, ಹಾರ್ಡ್‌ವೇರ್, ಆಟೋಮೊಬೈಲ್ ಸೇರಿದಂತೆ ವಿವಿಧ ಕ್ಷೇತ್ರಗಳ ಪ್ರಮುಖ ಕಂಪನಿಗಳು ಮತ್ತು ಅವುಗಳ ಪ್ರತಿನಿಧಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶಗಳ ಕುರಿತು ಮಾಹಿತಿ ನೀಡಿದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X