Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. Kalaburagi | ದುಷ್ಚಟಗಳಿಂದ ದೂರವಿದ್ದು...

Kalaburagi | ದುಷ್ಚಟಗಳಿಂದ ದೂರವಿದ್ದು ದೇಶದ ಅಭಿವೃದ್ಧಿಗೆ ಯುವಜನರು ಕೊಡುಗೆ ನೀಡಲಿ : ಬಿ.ಕೆ.ಕವಿತಾ

ವಾರ್ತಾಭಾರತಿವಾರ್ತಾಭಾರತಿ12 Aug 2026 5:48 PM IST
share
Kalaburagi | ದುಷ್ಚಟಗಳಿಂದ ದೂರವಿದ್ದು ದೇಶದ ಅಭಿವೃದ್ಧಿಗೆ ಯುವಜನರು ಕೊಡುಗೆ ನೀಡಲಿ : ಬಿ.ಕೆ.ಕವಿತಾ

ಕಲಬುರಗಿ : ಭಾರತವು ವಿಶ್ವದಲ್ಲೇ ಅತಿ ದೊಡ್ಡ ಯುವಜನಸಂಖ್ಯೆ ಹೊಂದಿರುವ ರಾಷ್ಟ್ರಗಳಲ್ಲಿ ಒಂದಾಗಿದೆ. ಯುವಜನರು ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗುವುದರ ಜೊತೆಗೆ ಯಾವುದೇ ದುಷ್ಚಟಗಳಿಗೆ ದಾಸರಾಗದೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಲಬುರಗಿ ಸಂಚಾಲಕಿ ಸಿಸ್ಟರ್ ಬಿ.ಕೆ. ಕವಿತಾ ಕರೆ ನೀಡಿದರು.

ನಗರದ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಡಾ. ಅಂಬೇಡ್ಕರ್ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಕೇಂದ್ರ ಮತ್ತು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಕಲಬುರಗಿ ಶಾಖೆಯ ಸಹಯೋಗದಲ್ಲಿ ಆಯೋಜಿಸಿದ್ದ ‘ನಶಾಮುಕ್ತ ಭಾರತ ಅಭಿಯಾನ’ ಹಾಗೂ ‘ಮಿಷನ್ ಸ್ಪಂದನ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಯುವಜನರು ದುಷ್ಚಟಗಳಿಂದ ದೂರವಿದ್ದು, ಉತ್ತಮ ಜೀವನಶೈಲಿಯನ್ನು ರೂಢಿಸಿಕೊಳ್ಳಬೇಕು. ದೇಹ ಮತ್ತು ಮನಸ್ಸಿನ ಆರೋಗ್ಯವನ್ನು ಕಾಪಾಡಿಕೊಂಡು ಶಿಸ್ತುಬದ್ಧ ಜೀವನ ನಡೆಸಿದಾಗ ಮಾತ್ರ ಕುಟುಂಬ, ಸಮಾಜ ಹಾಗೂ ದೇಶಕ್ಕೆ ಅಮೂಲ್ಯ ಸಂಪತ್ತಾಗಲು ಸಾಧ್ಯ ಎಂದು ಹೇಳಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಜೀವನದ ಮಹತ್ವದ ಕುರಿತು ಅರಿವು ಮೂಡಿಸಲಾಯಿತು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ವ್ಯಸನಮುಕ್ತ ಪ್ರತಿಜ್ಞೆ ಬೋಧಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಅಂಬೇಡ್ಕರ್ ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಪ್ಪ ಎಂ. ಕಾಂತ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಶಿಸ್ತು, ಸಂಯಮ ಹಾಗೂ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯ. ದುಷ್ಚಟಗಳಿಂದ ದೂರವಿದ್ದು ಶಿಕ್ಷಣ ಹಾಗೂ ವ್ಯಕ್ತಿತ್ವ ವಿಕಸನದತ್ತ ಗಮನಹರಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ವೇದಿಕೆಯಲ್ಲಿ ಕಾಲೇಜಿನ ಐಕ್ಯುಎಸಿ ಸಂಚಾಲಕ ಡಾ. ಸಿದ್ದಾರ್ಥ ಮದನಕರ ಉಪಸ್ಥಿತರಿದ್ದರು. ಪ್ರಾಧ್ಯಾಪಕ ಡಾ. ಅರುಣ್ ಜೋಳದಕೂಡ್ಲಿಗಿ ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು. ಡಾ. ವಸಂತ ನಾಶಿ ವಂದಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಪ್ರಾಧ್ಯಾಪಕರಾದ ಡಾ. ನಿರ್ಮಲ ಸಿರಗಾಪುರ, ಡಾ. ಗಾಂಧೀಜಿ ಮೊಳಕೇರಿ, ಡಾ. ಹರ್ಷವರ್ಧನ್, ಡಾ. ಸುದರ್ಶನ ಮದನಕರ, ಡಾ. ಅರುಣ್ ಕುಮಾರ್, ಡಾ. ಶಿವಕುಮಾರ, ಡಾ. ಕರಿಬಸಪ್ಪ, ಶ್ರೀಮತಿ ಕೌಶಲ್ಯ, ಡಾ. ದತ್ತೂರಾಯ, ರಾಜಶೇಖರ್, ಸಂಜೀವ ಪಾಟೀಲ್, ಶೃತಿ ಹಾಗೂ ಲಕ್ಷ್ಮಿಬಾಯಿ ಸೇರಿದಂತೆ ಕಾಲೇಜಿನ ಬೋಧಕ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X