ಕಲಬುರಗಿ | ಶಾಸಕ ಯತ್ನಾಳ್ ಹೇಳಿಕೆಗೆ ಝೀಬಾ ತಬಸ್ಸುಮ್ ಖಂಡನೆ

ಕಲಬುರಗಿ: ವಿಜಯಪುರದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಸ್ಲಿಂ ಮಹಿಳೆಯರ ಮೇಲೆ ಮಾತ್ರವಲ್ಲದೆ ಎಲ್ಲಾ ಮಹಿಳೆಯರ ಸಮಾನತೆ ಹಕ್ಕು ಮತ್ತು ಘನತೆ ಕುಗ್ಗಿಸುವ ಹೇಳಿಕೆ ನೀಡಿರುವುದರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಅಖಿಲ ಭಾರತೀಯ ಉರ್ದು ಕಲ್ಯಾಣ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಝೀಬಾ ತಬಸ್ಸುಮ್ ಆಗ್ರಹಿಸಿದ್ದಾರೆ.
ವಿಜಯಪುರದ ಶಾಸಕ ಯತ್ನಾಳ್ ಸಮಾಜದಲ್ಲಿ ದ್ವೇಷ ಹರಡಿಸಿ ಸಮಾಜದಲ್ಲಿ ಹಿಂದೂ-ಮುಸ್ಲಿಂ ಏಕತೆಯನ್ನು ನಾಶ ಮಾಡುವ ಪಿತೂರಿ ಮಾಡುತ್ತಿದ್ದು, ಯಾವುದೇ ಕಾರಣಕ್ಕೂ ಕ್ಷಮಿಸಲು ಸಾಧ್ಯವಿಲ್ಲ. ಜವಾಬ್ದಾರಿಯುತ ವ್ಯಕ್ತಿ ಅವಮಾನಕರ ಹೇಳಿಕೆ ನೀಡಲು ಧೈರ್ಯ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಪತ್ರಿಕಾ ಪ್ರಕಟಣೆ ಮೂಲಕ ರಾಜ್ಯ ಸರಕಾರಕ್ಕೆ ಒತ್ತಾಯಿಸಿದ್ದಾರೆ.
Next Story





