ಕಲಬುರಗಿ ವಲಯ ಯುವಜನೋತ್ಸವ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಪ್ರಶಸ್ತಿ ವಿತರಣೆ

ಕಲಬುರಗಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ, ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯ ಕಲಬುರಗಿ (ಐಕ್ಯೂಎಸಿ) ಸಂಯುಕ್ತಾಶ್ರಯದಲ್ಲಿ ಎರಡು ದಿನಗಳ ಕಲಬುರಗಿ ವಲಯದ ಯುವಜನೋತ್ಸವನ್ನು ನಗರದ ವಿಶ್ವೇಶ್ವರಯ್ಯ ಭವನದಲ್ಲಿ ಆಚರಿಸಲಾಯಿತು.
ಈ ಕಾರ್ಯಕ್ರಮಕ್ಕೆ ಏಂಟು ಕಾನೂನು ಮಹಾವಿದ್ಯಾಲಯಗಳಿಂದ ಸುಮಾರು 200ಕ್ಕೂ ಹೆಚ್ಚಿನ ಸ್ಪರ್ಧಾಳುಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಯುವ ಜನೋತ್ಸವವನ್ನು ಯಶ್ವಸ್ವಿಗೊಳಿಸಿದರು.
ಶರಣಬಸವ ವಿಶ್ವವಿದ್ಯಾಲಯ ಕುಲಸಚಿವ ಡಾ. ಸಣ್ಣಬಸನಗೌಡ ಜಿ.ಡೋಳ್ಳೆಗೌಡ ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿ, ವಿದ್ಯಾರ್ಥಿಗಳು ಅಧ್ಯಯನದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ಸರಿಯಾದ ರೀತಿಯಲ್ಲಿ ಬೆಳೆಸಿಕೊಳ್ಳಬೇಕೆಂದು ಹೇಳಿದರು.
ಸಿದ್ಧಾರ್ಥ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಅತಿ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ಕಲಬುರಗಿ ವಲಯ ಯುವಜನೋತ್ಸವದ ಚಾಂಪಿಯನ್ ಆಗಿ ಹೊರ ಹೊಮ್ಮಿದರು. ಜೆ.ಎನ್ಆರ್ ಲಡ್ಡಾ ಕಾನೂನು ಮಹಾವಿದ್ಯಾಲಯ ಸೇಡಂ ರನ್ನರ್ ಅಪ್ ಆಯಿತು.
ವಿದ್ಯಾರ್ಥಿಗಳ ಸಾಧನೆಗೆ ಕರ್ನಾಟಕ ಪೀಪಲ್ಸ್ ಎಜುಕೇಶನ್ ಸೊಸೈಟಿಯ ಕಾರ್ಯದರ್ಶಿಗಳಾದ ಶಾಂತಪ್ಪ ಸೂರನ, ಆಡಳಿತಾಧಿಕಾರಿ ಡಾ.ಚಂದ್ರಶೇಖರ್ ಶೀಲವಂತ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಪ್ರಾಚಾರ್ಯ ಡಾ.ಚಂದ್ರಶೇಖರ ಎಸ್, ಕಾರ್ಯಕ್ರಮದ ಸಂಚಾಲಕರಾದ ಡಾ. ತಿಪ್ಪೆಸ್ವಾಮಿ, ಸಂಯೋಜನಾಧಿಕಾರಿಯಾದ ಮಹಾಂತೇಶ್ ಬಿದನೂರ್ ಮತ್ತು ಕಾಲೇಜಿನ ಎಲ್ಲಾ ಸಿಬ್ಬಂದಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.







