Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಮೃಗಾಲಯ ಲೋಗೋ ಬಿಡುಗಡೆ

ಕಲಬುರಗಿ ಮೃಗಾಲಯ ಲೋಗೋ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ9 May 2026 8:50 PM IST
share
ಕಲಬುರಗಿ ಮೃಗಾಲಯ ಲೋಗೋ ಬಿಡುಗಡೆ
ಮೇ 12ರಂದು ಲೋಕಾರ್ಪಣೆ,ತಿಂಗಳೊಳಗೆ ಮೃಗಾಲಯಕ್ಕೆ ಸಿಂಹ ಆಗಮನ : ಪ್ರಿಯಾಂಕ್ ಖರ್ಗೆ

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಮಾಡಬೂಳ ಗ್ರಾಮದಲ್ಲಿ ಸುಮಾರು 43 ಎಕರೆ ಪ್ರದೇಶದ ವಿಸ್ತೀರ್ಣದಲ್ಲಿ 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಕಲಬುರಗಿ ಮೃಗಾಲಯವನ್ನು ಇದೇ ಮೇ 12ಕ್ಕೆ ಲೋಕಾರ್ಪಣೆ ಮಾಡಲಾಗುವುದು ಎಂದು ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ಕಲಬುರಗಿ ನಗರದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕೃತಿಕ ಸಂಘದ ಕಚೇರಿಯಲ್ಲಿ ಕಲಬುರಗಿ ಮೃಗಾಲಯದ ಲೋಗೊ ಬಿಡುಗಡೆ ಮಾಡಿ ಮಾತನಾಡಿದ ಅವರು, ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಸೆಕ್ಷನ್ 38(1) ಅಡಿಯಲ್ಲಿ ಮೃಗಾಲಯ ಸ್ಥಾಪನೆಗೆ ಕೇಂದ್ರ ಮೃಗಾಲಯ ಪ್ರಾಧಿಕಾರದಿಂದ ಮತ್ತು ದೆಹಲಿಯ ಸೆಂಟ್ರಲ್ ಝೂ ಅಥಾರಿಟಿಯಿಂದ ಅನುಮತಿ ದೊರೆತಿರುವ ಹಿನ್ನೆಲೆಯಿಂದ ವಿವಿಧ ಸ್ಥಳದಿಂದ ಕಲಬುರಗಿ ಮೃಗಾಲಯಕ್ಕೆ ಪ್ರಾಣಿಗಳ ಸ್ಥಳಾಂತರ ಪ್ರಕ್ರಿಯೆ ನಡೆದಿದೆ ಎಂದರು.

ಹುಲಿ, ಸಿಂಹ ಸೇರಿದಂತೆ ಅನೇಕ ಪ್ರಾಣಿಗಳ ವೀಕ್ಷಣೆಗೆ ಈ ಭಾಗದಲ್ಲಿ ಅವಕಾಶ ಇರಲಿಲ್ಲ. ಹಿಂದೆ ತಾವು ಪ್ರವಾಸೋದ್ಯಮ ಸಚಿವನಾಗಿದ್ದಾಗ ಮಾಡಬೂಳ ಮೃಗಾಲಯ ಮಂಜೂರು ಮಾಡಿದೆ. ಇದೀಗ ಸದರಿ ಕಾಮಗಾರಿಗೆ ವೇಗ ನೀಡಿದ ಫಲವಾಗಿ ಮೃಗಾಲಯ ಲೋಕಾರ್ಪಣೆ ಹಂತಕ್ಕೆ ಬಂದಿದೆ. ಇದರಿಂದ ಪ್ರದೇಶದ ಮಕ್ಕಳು, ಸಾರ್ವಜನಿಕರು ಪ್ರಾಣಿಗಳ ವೀಕ್ಷಣೆಗೆ ದೂರದ ಉರಿಗೆ ಹೋಗುವುದು ತಪ್ಪಿದಲ್ಲದೆ ಸ್ಥಳೀಯವಾಗಿ ಪ್ರವಾಸೋದ್ಯಮ ಚೇತರಿಕೆಗೂ ಇದು ಕಾರಣವಾಗಲಿದೆ ಎಂದರು.

ಹೊಸ ಮೃಗಾಲಯದಲ್ಲಿ ನಿಶಾಚರ ಪ್ರಾಣಿಗಳಿಗೆ 6, ಭಾರತೀಯ ಪಕ್ಷಿಗಳಿಗೆ 10, ಸಣ್ಣ ಪಕ್ಷಿಗಳಿಗೆ 6, ಫೀಸಂಟ್‌ಗಳಿಗೆ 6, ಸಸ್ತನಿಗಳಿಗೆ 10, ಪ್ರೈಮೇಟ್‌ಗಳಿಗೆ 4 ಶಾಖಾಹಾರಿ ಪ್ರಾಣಿಗಳಿಗೆ 6 ಹಾಗೂ ಉಭಯಚರ/ ಸರೀಸೃಪ ಪ್ರಾಣಿಗಳಿಗೆ 8 ಸೇರಿ ಒಟ್ಟು 56 ಜಾತಿಯ ಪ್ರಾಣಿಗಳಿಗೆ ಆವರಣಗಳು ನಿರ್ಮಾಣವಾಗಲಿದ್ದು, ಆಮೆ, ಘರಿಯಾಲ್, ಮೊಸಳೆ, ಚುಕ್ಕೆ ಜಿಂಕೆ, ಗೋಲ್ಡನ್ ಜಾಕಲ್, ಹುಲಿ, ಸಿಂಹ, ಸ್ತೋತ್ ಕರಡಿ, ಜೀಬ್ರಾ, ಬಬೂನ್, ಲಂಗೂರು ಹಾಗೂ ವಿವಿಧ ಪಕ್ಷಿಗಳಿಗಾಗಿ ಒಟ್ಟು 23 ಆವರಣಗಳು ಈಗಾಗಲೆ ಪೂರ್ಣಗೊಂಡಿವೆ ಎಂದರು.

ಮೃಗಾಲಯಕ್ಕೆ ಆಗಮಿಸುವ ಸಾರ್ವಜನಿಕರಿಗೆ ಕುಡಿಯುವ ನೀರು, ಶೌಚಾಲಯ, ಶೆಡ್‌ಗಳು, ಬೆಂಚ್‌ಗಳು, ಉದ್ಯಾನ, ಮಕ್ಕಳ ಆಟದ ಪ್ರದೇಶ ಹೀಗೆ ಮೂಲಸೌಲಭ್ಯ ಕಲ್ಪಿಸಲಾಗಿದೆ. ಇದಲ್ಲದೆ ಮೃಗಾಲಯಕ್ಕೆ ಸುತ್ತ ಕಲ್ಲಿನ ಗೋಡೆ ಹಾಗೂ ಮುಳ್ಳು ತಂತಿ ಬೇಲಿ ನಿರ್ಮಾಣ ಮಾಡಿ ರಕ್ಷಿಸಲಾಗಿದೆ. ಟಿಕೇಟ್ ಕೌಂಟರ್ ಸಹಿತ ಪ್ರವೇಶದ್ವಾರ, ಮೃಗಾಲಯವನ್ನು ಮುಖ್ಯ ಹೆದ್ದಾರಿಗೆ ಸಂಪರ್ಕಿಸುವ 20 ಮೀಟರ್ ಅಗಲದ ರಸ್ತೆ, 2.5 ಕಿ.ಮೀ ಸೇವಾ ರಸ್ತೆ ಹಾಗೂ 1.3 ಕಿ.ಮೀ ಪೇಮ್ಸ್ ಪ್ರವಾಸಿಗರ ಮಾರ್ಗ, ವಾಹನ ನಿಲುಗಡೆ ವ್ಯವಸ್ಥೆ, ಭೂಗತ ಒಳಚರಂಡಿ ವ್ಯವಸ್ಥೆ, ವಿದ್ಯುತ್ ಸಂಪರ್ಕ ಪೂರ್ಣಗೊಂಡಿದೆ. ಆಸ್ಪತ್ರೆ ಹಾಗೂ ಅಡುಗೆಮನೆ ಕಟ್ಟಡಗಳು ಅಗತ್ಯ ಔಷಧಿ ಮತ್ತು ಸ್ಟೆಚರ್, ಫ್ರೀಜರ್ ಮುಂತಾದ ಉಪಕರಣಗಳೊಂದಿಗೆ ಸಜ್ಜುಗೊಳಿಸಿದೆ. ಮರಣೋತ್ತರ ಪರೀಕ್ಷಾ ಕೊಠಡಿ, ಪ್ರಾಣಿಗಳ ಅವಶೇಷ ವಿಲೇವಾರಿ ಘಟಕ ಹಾಗೂ ಕ್ಯಾರಂಟೈನ್ ಕೊಠಡಿ, ಆಡಳಿತ ಕಟ್ಟಡ ಹೀಗೆ ಎಲ್ಲಾ ರೀತಿಯಿಂದ ಮೂಲಸೌಕರ್ಯ ಇಲ್ಲಿ ಕಲ್ಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ತಿಂಗಳೊಳಗೆ ಸಿಂಹ ಸೇರ್ಪಡೆ :

ಮುಂದಿನ ಒಂದು ತಿಂಗಳೊಳಗೆ ಮಾಡಬೂಳ ಮೃಗಾಲಯಕ್ಕೆ ಕಾಡಿನ ರಾಜ “ಸಿಂಹ” ಸೇರಿದಂತೆ ಸಾಂಬರ್, ರೆಡ್ ಜಂಗಲ್ ಫೌಲ್, ಪೈಥಾನ್ ಸ್ಥಳಾಂತರಿಸಲಾಗುತ್ತಿದೆ. 3 ತಿಂಗಳಲ್ಲಿ ಹುಲಿ, ಬಬೂನ್, ಸ್ತೋತ್ ಕರಡಿ, ಕಿಂಗ್ ಕೋಬ್ರಾ ಹಾಗೂ 6 ತಿಂಗಳಲ್ಲಿ ಜೀಬ್ರಾ, ಘರಿಯಾಲ್ ಹಾಗೂ ಇತರೆ ಪಕ್ಷಿ ಮತ್ತು ಸರೀಸೃಪ ಪ್ರಭೇಧಗಳು ಮೃಗಾಲಯಕ್ಕೆ ಸೇರಲಿವೆ ಎಂದರು.

ಬೆಳಿಗ್ಗೆ 9.30 ರಿಂದ ಸಂಜೆ 5.30 ವೀಕ್ಷಣೆಗೆ ಲಭ್ಯ :

ಮೃಗಾಲಯವು ಬೆಳಿಗ್ಗೆ 9.30 ರಿಂದ ಸಂಜೆ 5.30 ವರೆಗೆ ತೆರೆಯಲಿದ್ದು, ಪ್ರಾಣಿ-ಪಕ್ಷಿಗಳ ವೀಕ್ಷಣೆಗೆ ಲಭ್ಯವಾಗಿರಲಿದೆ. ಪ್ರತಿ ಮಂಗಳವಾರ ರಜೆ ಇರಲಿದೆ. 12 ವರ್ಷ ಮೇಲ್ಪಟ್ಟವರಿಗೆ 75 ರೂ., 12 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ 40 ರೂ. ಹಾಗೂ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ 25 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ. ಮೃಗಾಲಯದ ಟಿಕೆಟ್ ಕೌಂಟರ್‌ನಲ್ಲಿಯೆ ಟಿಕೆಟ್ ಪಡೆದು ವೀಕ್ಷಣೆ ಮಾಡಬಹುದಾಗಿದೆ ಎಂದರು.

ಕಾಫಿ ಟೇಬಕ್‌ ಪುಸ್ತಕ ಬಿಡುಗಡೆ :

ಜಿಲ್ಲೆಯ ಪ್ರವಾಸಿ ತಾಣಗಳನ್ನು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರಪಡಿಸುವ ನಿಟ್ಟಿನಲ್ಲಿ ಕಲಬುರಗಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ವಿಶೇಷ ಆಸಕ್ತಿ ವಹಿಸಿ ಇದೇ ಮೊದಲ ಬಾರಿಗೆ ಜಿಲ್ಲೆಯ ಕಲೆ, ಸಂಸ್ಕೃತಿ, ಪರಂಪರೆ ಮತ್ತು ಇತಿಹಾಸವನ್ನು ಬಿಂಬಿಸುವ ಮತ್ತು ಜಿಲ್ಲೆಯ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಇತರೆ ಪ್ರವಾಸಿ ತಾಣಗಳ ಕುರಿತ ಮಾಹಿತಿ ನೀಡುವ ಕಾಫಿ ಟೇಬಲ್ ಪುಸ್ತಕ ಹೊರತಂದಿದ್ದು, ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆ ಮಾಡಿದರು. ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕಿ ಬೇಬಿ ಮೊಗೇರಾ ಇದ್ದರು.

ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ, ವಿಧಾನ ಪರಿಷತ್ ಶಾಸಕ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಚಂದ್ರಿಕಾ ಪರಮೇಶ್ವರ, ಭೀಮರಾಯನಗುಡಿ ಕಾಡಾ ಅಧ್ಯಕ್ಷ ಬಾಬು ಹೊನ್ನನಾಯಕ್, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿ.ಸಿ.ಎಫ್ ಸುಮಿತ್ ಪಾಟೀಲ, ಇದ್ದರು.

Tags

Kalaburagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X