Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ|ಆಳಂದದಲ್ಲಿ ಕಳಪೆ ರಸ್ತೆ...

ಕಲಬುರಗಿ|ಆಳಂದದಲ್ಲಿ ಕಳಪೆ ರಸ್ತೆ ಕಾಮಗಾರಿ ನಡೆಸಿ ಕೋಟ್ಯಾಂತರ ರೂ.ಲೂಟಿ : ಮಾಜಿ ಶಾಸಕ ಗುತ್ತೇದಾರ್‌ ದೂರು

ವಾರ್ತಾಭಾರತಿವಾರ್ತಾಭಾರತಿ29 Nov 2025 5:44 PM IST
share
ಕಲಬುರಗಿ|ಆಳಂದದಲ್ಲಿ ಕಳಪೆ ರಸ್ತೆ ಕಾಮಗಾರಿ ನಡೆಸಿ ಕೋಟ್ಯಾಂತರ ರೂ.ಲೂಟಿ : ಮಾಜಿ ಶಾಸಕ ಗುತ್ತೇದಾರ್‌ ದೂರು

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ (ಕೆಕೆಆರ್‍ಡಿಬಿ) ಯೋಜನೆಯಡಿಯಲ್ಲಿ ಕೈಗೊಳ್ಳುತ್ತಿರುವ ಅನೇಕ ಕಾಮಗಾರಿಗಳು ಕಳಪೆ ಮಟ್ಟದಲ್ಲಿ ನಿರ್ಮಿಸಿ ಸರಕಾರದ ಹಣ ಲೂಟಿ ಮಾಡುವ ಕೆಲಸ ಆಳಂದ ತಾಲೂಕಿನಲ್ಲಿ ನಡೆಯುತ್ತಿದ್ದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಮಾಜಿ ಶಾಸಕ ಸುಭಾಷ್ ಆರ್ ಗುತ್ತೇದಾರ ದೂರು ನೀಡಿದ್ದಾರೆ.

ಕಲಬುರಗಿ ಆಳಂದ ರಾಜ್ಯ ಹೆದ್ದಾರಿ ಎಸ್‍ಎಚ್ 10 ರಿಂದ ಎಲೆನಾವದಗಿ- ಕೊಡಲಹಂಗರಗಾ ಹತ್ತಿರದಿಂದ ಎಲೆನಾವದಗಿ ಗ್ರಾಮದ ರಸ್ತೆ 4.50 ಕಿ.ಮೀ ಕಾಮಗಾರಿ ಮುಗಿಯುವ ಹಂತದಲ್ಲಿ ಕಿತ್ತು ಹೋಗಿರುತ್ತದೆ. ಮನುಷ್ಯರಿಗೆ ನಡೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ. ದ್ವಿಚಕ್ರ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗುತ್ತಿದೆ. ಜನರು ಬಿದ್ದು ಕೈಕಾಲು ಮುರಿದು ಕೊಂಡಿರುತ್ತಾರೆ. ಅಧಿಕಾರಿಗಳಿಗೆ ಈ ಬಗ್ಗೆ ದೂರು ನೀಡಿದರೂ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಸುಭಾಷ್ ಆರ್ ಗುತ್ತೇದಾರ್‌ ಆರೋಪಿಸಿದ್ದಾರೆ.

4 ಕೋಟಿ ರೂಪಾಯಿ ವೆಚ್ಚ ಮಾಡಿ ರಸ್ತೆ ನಿರ್ಮಿಸಲಾಗಿದೆ. ನಾಲ್ಕು ತಿಂಗಳು ರಸ್ತೆ ಬಾಳಿಕೆ ಬಂದಿರುವುದಿಲ್ಲ. ಇದು ಯಾವ ವೈಜ್ಞಾನಿಕ ಪದ್ಧತಿ ಇರಬಹುದು. ಇಡೀ ರಸ್ತೆಯ ತುಂಬೆಲ್ಲ ಹುಡುಕಿದರು ಡಾಂಬರ್ ನೋಡಲು ಸಿಗುವುದಿಲ್ಲ. ಹೀಗಿರುವಾಗ ಯಾವ ಗುಣಮಟ್ಟದ ರಸ್ತೆ ನಿರ್ಮಿಸಿರಬೇಕು ಯೋಚನೆ ಮಾಡಬೇಕಾಗಿರುತ್ತದೆ. ಅಂದಾಜು ಪಟ್ಟಿಯಂತೆ ಕಾಮಗಾರಿ ಮಾಡಿಲ್ಲ. ಪಟ್ಟಿಯಲ್ಲಿನ ಯಾವ ನಿಯಮಗಳು ಕೂಡ ಪಾಲನೆಯಾಗಿಲ್ಲ ಸುಳ್ಳು ಲೆಕ್ಕ ತೋರಿಸಿ 4 ಕೋಟಿ. ರೂ. ಹಣ ಲೂಟಿ ಮಾಡಿರುತ್ತಾರೆ ಎಂದು ದೂರು ನೀಡಿದ್ದಾರೆ.

ಇದೇ ರೀತಿ ವಾಗ್ಧರಿ ರಿಪ್ಪನಪಲ್ಲಿ ಮುಖ್ಯ ರಸ್ತೆಯಿಂದ ಪಡಸಾವಳಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿಪಡಿಸುವ ಕಾಮಗಾರಿಗೆ 1ಕೋಟಿ( ಕೆಕೆಆರ್‍ಡಿಬಿ 2023-24ನೇ ಸಾಲಿನ) ರೂ. ವೆಚ್ಚ ಮಾಡಿರುತ್ತಾರೆ. ಈ ರಸ್ತೆಯೂ ಮಾಡಿದ 2 ತಿಂಗಳಲ್ಲೇ ಹಾಳಾಗಿ ಹೋಗಿರುತ್ತದೆ. ಇಲ್ಲಿಯೂ ಸರಕಾರದ ಬೊಕ್ಕಸಕ್ಕೆ 1 ಕೋಟಿ ನಷ್ಟವಾಗಿರುತ್ತದೆ ಎಂದು ದೂರಿದ್ದಾರೆ.

ಆಳಂದ ತಾಲೂಕಿನ ವಾಗ್ಧರಿ- ರಿಪ್ಪನಪಲ್ಲಿ ಮುಖ್ಯರಸ್ತೆಯಿಂದ ಪಡಸಾವಳಿ ರಸ್ತೆ ಕಾಮಗಾರಿಯು ಕರ್ನಾಟಕ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದವರಿಗೆ ವಹಿಸಿಕೊಟ್ಟಿದ್ದು, ಅದು ನಿಯಮಬಾಹಿರವಾಗಿ ಹಣ ಲೂಟಿ ಮಾಡಲೆಂದೇ ಚಿತ್ತಾಪೂರ ಉಪವಿಭಾಗದವರಿಗೆ ನೀಡಿರುತ್ತಾರೆ. ಆಳಂದ ಕಾಮಗಾರಿಯ ಬಿಲ್ಲನ್ನು ಎಇ, ಎಇಇ ಏಖIಆಐ ಚಿತ್ತಾಪೂರದವರು ದಾಖಲಿಸಿ ಹಣ ಲೂಟಿ ಮಾಡಿರುತ್ತಾರೆ. ಆಳಂದ ತಾಲೂಕು ಎಇಇ JEE KRIDL SUB DIVISION AFZALPUR ವ್ಯಾಪ್ತಿಗೆ ಬರುತ್ತದೆ. ಇಷ್ಟೆಲ್ಲ ನಡೆದರೂ ಜಿಲ್ಲಾಡಳಿತ ಮೌನವಾಗಿರಲು ಕಾರಣವೇನು? ಇದಕ್ಕೆ ಸರಕಾರವೇ ಉತ್ತರಿಸಬೇಕಾಗಿದೆ ಎಂದು ಹೇಳಿದ್ದಾರೆ.

ಆಳಂದ ತಾಲೂಕಿನಾದ್ಯಂತ ಕೆಕೆಆರ್‍ಡಿಬಿ ಅನುದಾನದ ಅನೇಕ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ನಿರ್ಮಿಸಿ ಕೋಟ್ಯಾಂತರ ರೂ.ಗಳನ್ನು ಲೂಟಿ ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಭಯವಿಲ್ಲದಂತಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದೆಲ್ಲವನ್ನು ಖಂಡಿಸಿ ಡಿ.4ರಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಚೇರಿ ಎದುರುಗಡೆ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ಸುಭಾಷ್ ಆರ್ ಗುತ್ತೇದಾರ್‌ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X