Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯ ಪೀಡೆನಾಶಕ ಪರೀಕ್ಷಾ...

ಕಲಬುರಗಿಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ NABL ಮಾನ್ಯತೆ

ReshmaReshma31 Jan 2026 11:20 PM IST
share
ಕಲಬುರಗಿಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ NABL ಮಾನ್ಯತೆ

ಕಲಬುರಗಿ : ಗುಣಮಟ್ಟ ಮತ್ತು ನಿಖರ ಪೀಡೆನಾಶಕ ಪರೀಕ್ಷಾ ವಿಧಾನಗಳನ್ನು ಅನುಸರಿಸುತ್ತಿರುವುದಕ್ಕಾಗಿ ಕಲಬುರಗಿಯ ರಾಜ್ಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ (SPTL) ರಾಷ್ಟ್ರೀಯ ಪರೀಕ್ಷೆ ಮತ್ತು ಮಾಪನಾಂಕ ನಿರ್ಣಯ ಪ್ರಯೋಗಾಲಯ ಮಂಡಳಿ (NABL)ಯಿಂದ ISO/IEC 17025 ಅಂತರರಾಷ್ಟ್ರೀಯ ಮಾನ್ಯತೆ ಲಭಿಸಿದೆ. ಈ ಮೂಲಕ ಪ್ರಯೋಗಾಲಯದ ಪರೀಕ್ಷಾ ವರದಿಗಳಿಗೆ ಅಂತರರಾಷ್ಟ್ರೀಯ ಮಾನ್ಯತೆ ದೊರೆತಂತಾಗಿದೆ.

ISO/IEC 17025 ಮಾನ್ಯತೆ ಪಡೆಯುವ ಮೂಲಕ ಕಲಬುರಗಿ ರಾಜ್ಯ ಪೀಡೆನಾಶಕ ಪರೀಕ್ಷಾ ಪ್ರಯೋಗಾಲಯವು ಮಹತ್ವದ ಮೈಲಿಗಲ್ಲು ಸಾಧಿಸಿದ್ದು, ಕೃಷಿ ಗುಣಮಟ್ಟ ಭರವಸೆ ಮತ್ತು ತಾಂತ್ರಿಕ ಶ್ರೇಷ್ಠತೆಯನ್ನು ಬಲಪಡಿಸುವತ್ತ ದೊಡ್ಡ ಹೆಜ್ಜೆ ಇಟ್ಟಿದೆ. ಎನ್.ಎ.ಬಿ.ಎಲ್. ಮಾನ್ಯತೆಯು ಪ್ರಯೋಗಾಲಯದ ವಿಶ್ವಾಸಾರ್ಹತೆ, ನಿಖರತೆ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲ್ಪಟ್ಟ ಕೀಟನಾಶಕ ಪರೀಕ್ಷಾ ಸೇವೆಗಳ ಬದ್ಧತೆಯನ್ನು ದೃಢಪಡಿಸುತ್ತದೆ.

ಈ ಮಾನ್ಯತೆಯಿಂದ ಕಲಬುರಗಿ, ಯಾದಗಿರಿ, ಬೀದರ್‌ ಹಾಗೂ ವಿಜಯಪುರ ಜಿಲ್ಲೆಗಳ ರೈತರು, ಕೃಷಿ ಇನ್‌ಪುಟ್ ಪೂರೈಕೆದಾರರು ಮತ್ತು ಇತರ ಪಾಲುದಾರರಿಗೆ ಗುಣಮಟ್ಟದ ಪೀಡೆನಾಶಕಗಳ ಭರವಸೆ ದೊರೆಯಲಿದ್ದು, ಸುಸ್ಥಿರ ಕೃಷಿಗೆ ಉತ್ತೇಜನ ಸಿಗಲಿದೆ. ಇದರಿಂದ ಒಟ್ಟಾರೆ ಕಲ್ಯಾಣ ಕರ್ನಾಟಕ ಪ್ರದೇಶದ ಕೃಷಿ ವಲಯದ ಗುಣಮಟ್ಟ ಬಲಪಡಿಸುವಲ್ಲಿ ಈ ಪ್ರಯೋಗಾಲಯ ಮಹತ್ವದ ಪಾತ್ರ ವಹಿಸಲಿದೆ.

ಕೀಟನಾಶಕ ಕಾಯ್ದೆ–1968ರ ಅಡಿಯಲ್ಲಿ ರೈತರಿಗೆ ಗುಣಮಟ್ಟದ ಪೀಡೆನಾಶಕಗಳನ್ನು ಖಚಿತಪಡಿಸುವ ಉದ್ದೇಶದಿಂದ 1997ರ ಏಪ್ರಿಲ್‌ನಲ್ಲಿ ಕಲಬುರಗಿಯಲ್ಲಿ ಸ್ಥಾಪಿಸಲಾದ ಈ ಪ್ರಯೋಗಾಲಯವು, ವಾರ್ಷಿಕವಾಗಿ 1,280 ಪೀಡೆನಾಶಕ ಮಾದರಿಗಳ ಪರೀಕ್ಷೆ ನಡೆಸುವ ಗುರಿ ಹೊಂದಿದೆ.

ಕಳೆದ ಆರು ತಿಂಗಳುಗಳಲ್ಲಿ ಜಿಲ್ಲಾಡಳಿತ ಮತ್ತು ಕೃಷಿ ಜಂಟಿ ನಿರ್ದೇಶಕರ ಮಾರ್ಗದರ್ಶನದಲ್ಲಿ ಪ್ರಯೋಗಾಲಯ ತಂಡವು ಉಪಕರಣಗಳ ಮಾಪನಾಂಕ ನಿರ್ಣಯ, ಸಿಬ್ಬಂದಿಗೆ ಸಮಗ್ರ ತರಬೇತಿ, ಕಠಿಣ ಗುಣಮಟ್ಟ ನಿರ್ವಹಣಾ ವ್ಯವಸ್ಥೆ ಹಾಗೂ ಅಂತರಿಕ ಲೆಕ್ಕಪರಿಶೋಧನೆಗಳ ಮೂಲಕ ಗಮನಾರ್ಹ ಸಮರ್ಪಣೆಯನ್ನು ಪ್ರದರ್ಶಿಸಿದೆ. ಇದರ ಫಲವಾಗಿ ಎನ್.ಎ.ಬಿ.ಎಲ್. ತಂಡವು ಪ್ರಯೋಗಾಲಯದ ತಾಂತ್ರಿಕ ಸಾಮರ್ಥ್ಯವನ್ನು ಪರಿಶೀಲಿಸಿ ISO/IEC 17025 ಮಾನದಂಡದ ಪ್ರಕಾರ ಪ್ರಮಾಣೀಕರಿಸಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಆರು ಎಸ್.ಪಿ.ಟಿ.ಎಲ್ ಪ್ರಯೋಗಾಲಯಗಳು ಎನ್.ಎ.ಬಿ.ಎಲ್ ಮಾನ್ಯತೆ ಪಡೆದಂತಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಮಾನ್ಯತೆ ಲಭಿಸಿರುವುದಕ್ಕೆ ಹರ್ಷ ವ್ಯಕ್ತಪಡಿಸಿ, ಮಾನ್ಯತಾ ಪ್ರಮಾಣಪತ್ರವನ್ನು ಪ್ರಯೋಗಾಲಯದ ಮುಖ್ಯಸ್ಥರಾಗಿರುವ ಉಪ ಕೃಷಿ ನಿರ್ದೇಶಕ ಜುಲ್ಫಿಖರ ಅಹೆಮದ್ ಅವರಿಗೆ ಔಪಚಾರಿಕವಾಗಿ ಹಸ್ತಾಂತರಿಸಿದರು. ಕಾರ್ಯಕ್ರಮದಲ್ಲಿ ಎಸ್.ಪಿ. ಅಡೂರು ಶ್ರೀನಿವಾಸಲು, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್, ಜಂಟಿ ಕೈಗಾರಿಕೆ ಕೇಂದ್ರದ ಜಂಟಿ ನಿರ್ದೇಶಕ ಅಬ್ದುಲ್ ಅಜೀಮ್ ಉಪಸ್ಥಿತರಿದ್ದರು.

Tags

Kalaburagi
share
Reshma
Reshma
Next Story
X