Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಮಂಗಲಗಿಯಲ್ಲಿ 11 ಅಡಿ ಅಶ್ವಾರೋಢ...

ಕಾಳಗಿ | ಮಂಗಲಗಿಯಲ್ಲಿ 11 ಅಡಿ ಅಶ್ವಾರೋಢ ಬಸವೇಶ್ವರ ಮೂರ್ತಿ ಅನಾವರಣ

ವಾರ್ತಾಭಾರತಿವಾರ್ತಾಭಾರತಿ7 July 2026 6:11 PM IST
share
ಕಾಳಗಿ | ಮಂಗಲಗಿಯಲ್ಲಿ 11 ಅಡಿ ಅಶ್ವಾರೋಢ ಬಸವೇಶ್ವರ ಮೂರ್ತಿ ಅನಾವರಣ
ಬಸವಣ್ಣರ ತತ್ವ-ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ: ಡಾ.ಉಮೇಶ್ ಜಾಧವ್

ಕಾಳಗಿ: ತಾಲೂಕಿನ ಮಂಗಲಗಿ ಗ್ರಾಮದಲ್ಲಿ ಬಸವೇಶ್ವರ ಅಶ್ವಾರೋಢ ಮೂರ್ತಿ ಸಮಿತಿಯಿಂದ ಪ್ರತಿಷ್ಠಾಪಿಸಲಾದ 11 ಅಡಿ ಎತ್ತರದ ಅಶ್ವಾರೋಢ ಬಸವೇಶ್ವರ ಮೂರ್ತಿಯನ್ನು ಕಲಬುರಗಿ ಮಾಜಿ ಸಂಸದ ಡಾ. ಉಮೇಶ್ ಜಾಧವ್ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಯಕಯೋಗಿ ಬಸವಣ್ಣ ಅವರು ಅನುಭವ ಮಂಟಪದ ಮೂಲಕ ವಿಶ್ವದಲ್ಲೇ ಮೊದಲ ಬಾರಿಗೆ ಪ್ರಜಾಪ್ರಭುತ್ವದ ಪರಿಕಲ್ಪನೆಗೆ ಅಡಿಪಾಯ ಹಾಕಿದ ಮಹಾನ್ ಚಿಂತಕರಾಗಿದ್ದಾರೆ. ಬಸವಣ್ಣರ ಜೀವನ, ಆದರ್ಶ ಹಾಗೂ ತತ್ವಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಂಡು ಅವರು ತೋರಿದ ಮಾರ್ಗದಲ್ಲಿ ಸಾಗಬೇಕು ಎಂದು ಕರೆ ನೀಡಿದರು.

ಬಸವಕಲ್ಯಾಣ ಮಹಾಮನೆಯ ಪೂಜ್ಯ ಬಸವಪ್ರಭು ಮಹಾಸ್ವಾಮಿಗಳು ಮಾತನಾಡಿ, ಬಸವಣ್ಣರು ಜಾತಿ-ಭೇದವಿಲ್ಲದ ಸಮಾನತೆಯ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಸಾಂಸ್ಕೃತಿಕ ನಾಯಕರು. ಅವರ ವಚನಗಳಲ್ಲಿರುವ ತತ್ವಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಹೇಳಿದರು.

ಆಳಂದದ ಪೂಜ್ಯ ವಿಶ್ವನಾಥ ಕೋರಣೇಶ್ವರ ಮಹಾಸ್ವಾಮಿಗಳು, ಬಸವಣ್ಣರು ಸಮಾಜವನ್ನು ಜಾತಿ ವ್ಯವಸ್ಥೆಯಿಂದ ಮುಕ್ತಗೊಳಿಸಿ ಸಮಾನತೆಯ ಬದುಕಿಗೆ ಒತ್ತು ನೀಡಿದರು. ಅವರ ಸಾಮಾಜಿಕ ಸುಧಾರಣಾ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ಅಭಿಪ್ರಾಯಪಟ್ಟರು.

ಶರಣ ಸಾಹಿತಿ ಡಾ. ನೀಲಾಂಬಿಕಾ ಪೊಲೀಸ್ ಪಾಟೀಲ ಮಾತನಾಡಿ, ವಿಶ್ವ ಅಜ್ಞಾನದ ಕತ್ತಲಲ್ಲಿದ್ದ ಕಾಲದಲ್ಲಿ ಬಸವಣ್ಣರು ಸರಳ ಕನ್ನಡದ ವಚನಗಳ ಮೂಲಕ ಸಾಮಾಜಿಕ ಕ್ರಾಂತಿಗೆ ನಾಂದಿ ಹಾಡಿದರು ಎಂದು ಹೇಳಿದರು.

ಭರತನೂರದ ಪೂಜ್ಯ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ಮಂಗಲಗಿಯ ಡಾ. ಶಾಂತಸೋಮನಾಥ ಶಿವಾಚಾರ್ಯರು, ಸೇಡಂನ ಡಾ. ಸದಾಶಿವ ಮಹಾಸ್ವಾಮಿಗಳು ಹಾಗೂ ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಆರ್.ಜಿ. ಶೆಟಗಾರ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೇಳೆ ಅಶ್ವಾರೋಢ ಬಸವೇಶ್ವರ ಮೂರ್ತಿ ಸಮಿತಿ ಸದಸ್ಯರಿಗೆ ಜಾಗತಿಕ ಲಿಂಗಾಯತ ಮಹಾವೇದಿಕೆ ಹಾಗೂ ಕಾಳಗಿ ವೀರಶೈವ ಲಿಂಗಾಯತ ಸಮಾಜದ ವತಿಯಿಂದ ತಲಾ 21 ಸಾವಿರ ರೂ. ದೇಣಿಗೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಜಾಗತಿಕ ಲಿಂಗಾಯತ ಮಹಾಸಭೆ ರಾಜ್ಯ ಸಂಚಾಲಕ ರವೀಂದ್ರ ಶಾಬಾದಿ, ಬಸವೇಶ್ವರ ಮೂರ್ತಿ ಪ್ರತಿಷ್ಟಾಪನೆ ಸಮಿತಿ ಕೊಶಾಧ್ಯಕ್ಷ ನಾಗೇಂದ್ರ ದೇಶಮುಖ, ಕಾರ್ಯಧ್ಯಕ್ಷ ಸಂತೋಷ ಆರ್.ಪಾಟೀಲ, ಶರಣಗೌಡ ಪೊಲೀಸ್ ಪಾಟೀಲ, ಶಿವಶರಣಪ್ಪ‌ ಕಮಲಾಪೂರ, ಮಲ್ಲಿನಾಥ ಕೊಲಕುಂದಿ, ಶೇಖರ ಪಾಟೀಲ, ಮಲ್ಲಿನಾಥ ಪಾಟೀಲ, ಜಗನ್ನಾಥ ತೇಲಿ, ಪ್ರಶಾಂತ ಕದಮ, ಪುರುಷೋತ್ತಮ ಗುತ್ತೇದಾರ, ರಮೇಶ ಕಿಟ್ಟದ, ರಾಜಶೇಖರ ತಿಮ್ಮನಾಯಕ, ಮಾರುತಿ ಜಮಾದಾರ, ಸಂಗ್ರಾಮ ಉಚ್ಚೇದ ಕೊಟಗಾ, ರಾಮುಗೌಡ ಗೋಟೂರ, ಶರಣು ಚಂದಾ, ರೇವಣಸಿದ್ದ ಕಲಶೆಟ್ಟಿ, ನಾಗರಾಜ ಚಿಕ್ಕಮಠ, ಬಂಡು ಬೊಮ್ಮಣ್ಣಿ, ಸಂಗಾರೆಡ್ಡಿ ಕೌಳಾಸ ಈಶುಗೌಡ ಮಳಗಿ, ಮೋನಪ್ಪ ವಿಶ್ವಕರ್ಮ ಸೇರಿದಂತೆ ಅನೇಕರು ಇದ್ದರು.

ಸಂಗಣ್ಣ ವೀರಪ್ಪ ದೂಳಾಗುಂಡಿ ಸ್ವಾಗತಿಸಿದರು, ಬಸವೇಶ್ವರ ಮೂರ್ತಿ ಪ್ರತಿಷ್ಠಾಪನೆ ಸಮಿತಿ ಅಧ್ಯಕ್ಷ ನಿಂಬೆಣಪ್ಪ‌ ಕೋರವಾರ ಪ್ರಾಸ್ತಾವಿಕ ಮಾತನಾಡಿದರು, ಬಸವರಾಜ ದೂಳಗುಂಡಿ ನಿರೂಪಿಸಿ ವಂದಿಸಿದರು.




Tags

Kalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X