Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಅಂಬಿಗರ ಚೌಡಯ್ಯ ಭಾವಚಿತ್ರ...

ಕಾಳಗಿ | ಅಂಬಿಗರ ಚೌಡಯ್ಯ ಭಾವಚಿತ್ರ ಅವಮಾನ ಖಂಡಿಸಿ ರಸ್ತೆ ಬಂದ್, ಟಯರ್ ಸುಟ್ಟು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ3 Sept 2026 5:38 PM IST
share
ಕಾಳಗಿ | ಅಂಬಿಗರ ಚೌಡಯ್ಯ ಭಾವಚಿತ್ರ ಅವಮಾನ ಖಂಡಿಸಿ ರಸ್ತೆ ಬಂದ್, ಟಯರ್ ಸುಟ್ಟು ಪ್ರತಿಭಟನೆ

ಕಾಳಗಿ: ಪಟ್ಟಣದ ಚಿಂಚೋಳಿ–ಕಲಬುರಗಿ ರಾಜ್ಯ ಹೆದ್ದಾರಿಯ ಹೊಸ ಬಸ್ ನಿಲ್ದಾಣ ರಸ್ತೆಯ ವಿಭಜಕದಲ್ಲಿದ್ದ ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರವನ್ನು ಹರಿದು ಅವಮಾನ ಮಾಡಿದ ಘಟನೆಯನ್ನು ಖಂಡಿಸಿ ಕೋಲಿ ಸಮಾಜದ ಮುಖಂಡರು ಗುರುವಾರ ಬೃಹತ್ ಪ್ರತಿಭಟನೆ ನಡೆಸಿದರು.

ಕೋಲಿ ಸಮಾಜದ ನೇತೃತ್ವದಲ್ಲಿ ಚಿಂಚೋಳಿ–ಕಲಬುರಗಿ ರಾಜ್ಯ ಹೆದ್ದಾರಿಯನ್ನು ಬಂದ್ ಮಾಡಿ ಟಯರ್ ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಕೋಲಿ ಸಮಾಜದ ಅಧ್ಯಕ್ಷ ಜಗನ್ನಾಥ ತೇಲಿ, ಯುವ ಘಟಕದ ಅಧ್ಯಕ್ಷ ಪ್ರವೀಣ್ ನಾಮದಾರ, ಶಿವಕುಮಾರ್ ಕಮಕನೂರ, ಸಿದ್ದು ಕೇಶ್ವಾರ, ಭೀಮರಾಯ ಮಲಘಾಣ, ಗುಂಡಪ್ಪ ಕರೆಮನೊರ, ಮಲ್ಲಿಕಾರ್ಜುನ ಮರಗುತ್ತಿ ಹಾಗೂ ನಾಗಣ್ಣ ಕಮಕನೂರ, ನಿಜಶರಣ ಅಂಬಿಗರ ಚೌಡಯ್ಯ ಅವರ ಭಾವಚಿತ್ರದ ಫಲಕ ಹರಿದು ಹಾಕಿರುವ ದುಷ್ಕೃತ್ಯ ಖಂಡನೀಯವಾಗಿದ್ದು, ಇಡೀ ಸಮಾಜದ ಭಾವನೆಗಳಿಗೆ ಧಕ್ಕೆ ಉಂಟುಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಭಾವಚಿತ್ರವನ್ನು ಅವಮಾನಿಸಿದ ಕಿಡಿಗೇಡಿಗಳನ್ನು ಕೂಡಲೇ ಪತ್ತೆಹಚ್ಚಿ ಬಂಧಿಸಬೇಕು. ಸಮಾಜದಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದಕ್ಕೆ ಧಕ್ಕೆ ತರುವ ಇಂತಹ ಘಟನೆಗಳು ಮರುಕಳಿಸದಂತೆ ಶರಣರ ವೃತ್ತಗಳಲ್ಲಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯ ವೇಳೆ ನಿಜಶರಣ ಅಂಬಿಗರ ಚೌಡಯ್ಯ ಅವರ ಫಲಕಕ್ಕೆ ಹೊಸ ಭಾವಚಿತ್ರವನ್ನು ಅಳವಡಿಸಿ, ಕಿಡಿಗೇಡಿಗಳನ್ನು ಬಂಧಿಸುವುದರ ಜೊತೆಗೆ ಈ ವೃತ್ತವನ್ನು ‘ಅಂಬಿಗರ ಚೌಡಯ್ಯ ವೃತ್ತ’ ಎಂದು ಘೋಷಿಸಬೇಕು ಎಂದು ತಹಶೀಲ್ದಾರ್ ಪೃಥ್ವಿರಾಜ್ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.

ಸುಮಾರು ಎರಡು ಗಂಟೆಗಳ ಕಾಲ ಮಾನವ ಸರಪಳಿ ರಚಿಸಿ ಟೈಯರ್ ಸುಟ್ಟು ಪ್ರತಿಭಟನೆ ನಡೆಸಿದ ಪರಿಣಾಮ ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದ್ದು, ನೂರಾರು ವಾಹನಗಳು ಸಾಲುಗಟ್ಟಿ ನಿಂತವು. ಇದರಿಂದ ಸಾರ್ವಜನಿಕರು ಪರದಾಡುವಂತಾಯಿತು.

ಪ್ರತಿಭಟನೆಯಲ್ಲಿ ರೋಹನ್ ರವಿರಾಜ ಕೊರವಿ, ಸಾಯಿಪ್ರಟಕಲ್ ರಟಕಲ್, ಶಿವರಾಯ‌ ಕೊಯಿ, ರತ್ಮಮ್ಮ ಡೊಣ್ಣೂರ, ಜಗನ್ನಾಥ ಚಂದನಕೇರಿ, ಪ್ರಭಾಕಾರ ರಟಕಲ್, ಕಿರಣ ನಾಮದಾರ, ನೀಲಕಂಠ ಚಿಮ್ಮಾಇದಲಾಯಿ, ಅರುಣ ನಾಮದಾರ, ರೇವಣಸಿದ್ಧ ಚೆಂಗಟಿ, ರೇವಣಸಿದ್ಧ ಪೂಜಾರಿ, ಅರ್ಜುನ, ಸುಂದರ ಸಾಗರ, ಮಲ್ಲಿಕಾರ್ಜುನ ಸಿಂಘೆ, ಭೀಮಾಶಂಕರ ಹಲಚೇರಾ, ಗೀರಿಶಕುಮಾರ ಕೇರಳ್ಳಿ, ಕಾಶಿನಾಥ ರಾಜಾಪೂರ, ಜಗನ್ನಾಥ ಮಗಿ, ಸುನೀಲಕುಮಾರ ಕಡಬೂರ, ಚಂದ್ರಕಾಂತ ಬಂಕಲಗಿ, ಪೀರಪ್ಪ‌ ನಾಟೀಕಾರ ಇದ್ದರು. ಪಿಎಸ್ಐ ತಿಮ್ಮಯ್ಯ ಬಿ.ಕೆ ಪೊಲೀಸ್ ಬಂದೋಬಸ್ತ್ ಮಾಡಿದರು.

Tags

Kalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X