Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ವಿದ್ಯುತ್ ತಂತಿ ತಗುಲಿ ರೈತ...

ಕಾಳಗಿ | ವಿದ್ಯುತ್ ತಂತಿ ತಗುಲಿ ರೈತ ಮೃತ್ಯು ; ಜೆಸ್ಕಾಂ ಅಧಿಕಾರಿಗಳ‌ ನಿರ್ಲಕ್ಷ್ಯ ಆರೋಪ

ವಾರ್ತಾಭಾರತಿವಾರ್ತಾಭಾರತಿ6 Aug 2026 9:33 PM IST
share
ಕಾಳಗಿ | ವಿದ್ಯುತ್ ತಂತಿ ತಗುಲಿ ರೈತ ಮೃತ್ಯು ; ಜೆಸ್ಕಾಂ ಅಧಿಕಾರಿಗಳ‌ ನಿರ್ಲಕ್ಷ್ಯ ಆರೋಪ
ಜೆಸ್ಕಾಂ ಕಚೇರಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ

ಕಾಳಗಿ : ತಾಲೂಕಿನ ಗೋಟೂರ ಗ್ರಾಮದ ಹೊಲವೊಂದರಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದ ಪರಿಣಾಮ ರೈತ ಭೀಮಾಶಂಕರ ದೇವೀಂದ್ರಪ್ಪ ಅರನತ್ತಿ (30) ಗುರುವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಭೀಮಾಶಂಕರ ಅವರು ಎಂದಿನಂತೆ ಬೆಳಿಗ್ಗೆ ಕೃಷಿ ಕೆಲಸಕ್ಕಾಗಿ ಹೊಲಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಮನೆಗೆ ಮರಳುವ ವೇಳೆ ಹೊಲದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಗುಲಿ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.

ಘಟನೆಗೆ ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ ಗ್ರಾಮಸ್ಥರು ಮತ್ತು ರೈತರು, ಮೃತದೇಹವನ್ನು ಜೆಸ್ಕಾಂ ಕಚೇರಿ ಎದುರು ಇರಿಸಿ ನಾಲ್ಕೈದು ಗಂಟೆಗಳ ಕಾಲ ಪ್ರತಿಭಟನೆ ನಡೆಸಿದರು. ಮೂರು–ನಾಲ್ಕು ದಿನಗಳ ಹಿಂದೆಯೇ ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು.

ಪ್ರತಿಭಟನೆ ವೇಳೆ ಸ್ಥಳಕ್ಕೆ ಆಗಮಿಸಿದ ಜೆಸ್ಕಾಂ ಎಇಇ ಹಾಗೂ ಜೆಇ ಅವರನ್ನು ಗ್ರಾಮಸ್ಥರು ತೀವ್ರ ತರಾಟೆಗೆ ತೆಗೆದುಕೊಂಡರು. ಜೆಸ್ಕಾಂ ಸಿಬ್ಬಂದಿಯ ನಿರ್ಲಕ್ಷ್ಯದಿಂದಲೇ ರೈತ ಬಲಿಯಾಗಿದ್ದಾನೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಮೃತ ಭೀಮಾಶಂಕರ ಅವರು ಕುಟುಂಬದ ಆಧಾರಸ್ತಂಭವಾಗಿದ್ದು, ಪತ್ನಿ ಹಾಗೂ ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ. ಮೃತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಹಾಗೂ ಕರ್ತವ್ಯ ಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರೈತ ಮುಖಂಡರಾದ ವೀರಣ್ಣ ಗಂಗಾಣಿ, ಗ್ರಾಮಸ್ಥರಾದ ಶಿವಕುಮಾರ್ ಕಮಕನೂರ, ಮಲ್ಕಪ್ಪ‌‌ ಜಮಾದಾರ, ಮಹೇಶ ಸಾವಳಗಿ, ಪ್ರಕಾಶ ಮಡಿವಾಳ, ಬಾಬು ಬುಡನೂರ, ಶಿವಶರಣರೆಡ್ಡಿ‌ ಕಾಮರೆಡ್ಡಿ, ಮಲ್ಲಿಕಾರ್ಜುನ ಸಿಂಘೆ, ಅಮರ‌ ಗವ್ಹಾಂರ, ಅಮೀರಮಿಯ್ಯಾ ಸೇರಿದಂತೆ ಅನೇಕರು ಇದ್ದರು.

ಕಾಳಗಿ ಸಿಪಿಐ ಜಗದವೇಪ್ಪ‌ ಪಾಳ ಸ್ಥಳದಳಲ್ಲಿದ್ದರು.

Tags

Kalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X