Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ಜು.19ರಂದು ಎಂಎಲ್‌ಸಿ...

ಕಾಳಗಿ | ಜು.19ರಂದು ಎಂಎಲ್‌ಸಿ ತಿಪ್ಪಣಪ್ಪ ಕಮಕನೂರಗೆ ಅಭಿನಂದನಾ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ11 July 2026 7:01 PM IST
share
ಕಾಳಗಿ | ಜು.19ರಂದು ಎಂಎಲ್‌ಸಿ ತಿಪ್ಪಣಪ್ಪ ಕಮಕನೂರಗೆ ಅಭಿನಂದನಾ ಸಮಾರಂಭ

ಕಾಳಗಿ : ಪೂರ್ಣಾವಧಿಗೆ ನೂತನ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ ತಿಪ್ಪಣಪ್ಪ ಕಮಕನೂರ ಅವರಿಗೆ ಜುಲೈ 19ರಂದು ಕಾಳಗಿಯಲ್ಲಿ ಅದ್ದೂರಿ ಸಾರ್ವಜನಿಕ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಕೋಲಿ ಸಮಾಜದ ಅಧ್ಯಕ್ಷ ಜಗನ್ನಾಥ ತೇಲಿ ತಿಳಿಸಿದ್ದಾರೆ.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಳಗಿ ತಾಲೂಕಿನವರೇ ಆದ ತಿಪ್ಪಣಪ್ಪ ಕಮಕನೂರ ಅವರಿಗೆ ತವರೂರಿನ ಕೋಲಿ ಸಮಾಜದ ವತಿಯಿಂದ ಪಟ್ಟಣದ ನೀಲಕಂಠ ಕಾಳೇಶ್ವರ ಮಂಗಲ ಮಂಟಪದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.

ಅಂದು ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಿಂದ ನೀಲಕಂಠ ಕಾಳೇಶ್ವರ ದೇವಸ್ಥಾನದವರೆಗೆ ಡೊಳ್ಳು–ಹಲಗೆ ವಾದ್ಯಗಳೊಂದಿಗೆ ತೆರೆದ ವಾಹನದಲ್ಲಿ ಭವ್ಯ ಮೆರವಣಿಗೆ ನಡೆಯಲಿದೆ. ಬಳಿಕ ನೀಲಕಂಠ ಕಾಳೇಶ್ವರ ಮಂಗಲ ಮಂಟಪದಲ್ಲಿ ಅಭಿನಂದನಾ ಸಮಾರಂಭ ಜರುಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ರಟಕಲ್ ಗೌರಿಗುಡ್ಡದ ಸಿದ್ಧಶಿವಯೋಗಿ ಶರಣರು, ಭರತನೂರಿನ ಪೂಜ್ಯ ಚಿಕ್ಕಗುರುನಂಜೇಶ್ವರ ಮಹಾಸ್ವಾಮಿಗಳು, ರಟಕಲ್‌ನ ರೇವಣಸಿದ್ಧ ಶಿವಾಚಾರ್ಯರು, ನೀಲಕಂಠ ಮಹಾಸ್ವಾಮಿಗಳು ಹಾಗೂ ಕಾಳಗಿಯ ನೀಲಕಂಠ ಮರಿದೇವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಡಾ. ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ರವಿರಾಜ ಕೊರವಿ ಸೇರಿದಂತೆ ಹಲವು ಗಣ್ಯರು ಹಾಗೂ ಸಮಾಜದ ಮುಖಂಡರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.85 ಮತ್ತು ಅದಕ್ಕಿಂತ ಹೆಚ್ಚು ಅಂಕ ಗಳಿಸಿರುವ ತಾಲೂಕಿನ ಕೋಲಿ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ವಿಶೇಷವಾಗಿ ಸನ್ಮಾನಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಜುಲೈ 16ರೊಳಗೆ ಸಮಾಜದ ಮುಖಂಡರಾದ ಗುಂಡಪ್ಪ ಕರೆಮನೊರ (ಮೊ. 9741681146) ಅಥವಾ ರಾಘವೇಂದ್ರ ಹಲಚೇರಾ (ಮೊ. 9731155080) ಅವರನ್ನು ಸಂಪರ್ಕಿಸುವಂತೆ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಕೋಲಿ ಸಮಾಜದ ಯುವ ಘಟಕದ ತಾಲೂಕು ಅಧ್ಯಕ್ಷ ಪ್ರವೀಣ ನಾಮದಾರ, ಮುಖಂಡರಾದ ಭೀಮರಾವ ಮಾಲಿಪಾಟೀಲ, ಮಲ್ಲಪ್ಪ ದಿಗ್ಗಾಂವ, ಸಿದ್ದು ಕೇಶ್ವರ, ಮಾರುತಿ ನೈಕೋಡಿ, ಜಯರಾಜ ಮುದಿರಾಜ, ಶಿವಕುಮಾರ ಕಮಕನೂರ, ಮಲ್ಲಿಕಾರ್ಜುನ ಮರಗುತ್ತಿ, ಪ್ರಸಾದ ರಟಕಲ್, ರಾಹುಲ್ ಚಿತ್ತಾಪೂರ, ನೀಲಕಂಠಪ್ಪ ಮಾಸ್ತಾರ, ಮಹೇಶ ಗೋಟೂರ, ಶರಣು ಬಂಕಲಗಿ, ರಾಘವೇಂದ್ರ ಬೆಳಗುಂಪಿ, ಪವಾನ ನಾಮದಾರ, ದತ್ತು ಸಾವಳಗಿ, ಭಾಗೇಶ ಕೋಡ್ಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Tags

Kalagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X