Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಾಳಗಿ | ರೇವಣಸಿದ್ದೇಶ್ವರ ಅದ್ದೂರಿ...

ಕಾಳಗಿ | ರೇವಣಸಿದ್ದೇಶ್ವರ ಅದ್ದೂರಿ ಪಲ್ಲಕ್ಕಿ ಉತ್ಸವ

ವಾರ್ತಾಭಾರತಿವಾರ್ತಾಭಾರತಿ31 Aug 2026 8:50 PM IST
share
ಕಾಳಗಿ | ರೇವಣಸಿದ್ದೇಶ್ವರ ಅದ್ದೂರಿ ಪಲ್ಲಕ್ಕಿ ಉತ್ಸವ

ಕಾಳಗಿ : ಕಲ್ಯಾಣ ಕರ್ನಾಟಕ ಭಾಗದ ಆರಾಧ್ಯ ದೈವ ರೇವಗ್ಗಿ(ರಟಕಲ್‌) ರೇವಣಸಿದ್ದೇಶ್ವರ ಬೆಳ್ಳಿ ಪಲ್ಲಕ್ಕಿ ಉತ್ಸವವು ಶ್ರಾವಣ ಮಾಸದ ನಡುವಿನ ಸೋಮವಾರ ಸಂಜೆ ಸಂಭ್ರಮದಿಂದ ಜರುಗಿತು.

ಪ್ರತಿ ವರ್ಷದ ಸಾಂಪ್ರದಾಯದಂತೆ ಶ್ರಾವಣ ಮಾಸದ ನಡುವಿನ ಸೋಮವಾರದಂದು ನಸುಕಿನ ಜಾವ 3ಗಂಟೆಗೆ ರೇವಣಸಿದ್ದೇಶ್ವರ ಮೂರ್ತಿಗೆ ಕಾಕಡಾರತಿ, 4ಕ್ಕೆ ರೇವಣಸಿದ್ದೇಶ್ವರ ತಪೋ ಗದ್ದುಗೆಗೆ ಸಹಸ್ರ ಬಿಲ್ವಾರ್ಚನೆ, ಮಹಾಪೂಜೆ, ಮಹಾಮಂಗಳಾರುತಿ ಜರುಗಿದವು. ನಂತರ ಸುತ್ತಲಿನ ಗ್ರಾಮಗಳಾದ ಬೆಡಸೂರ, ರೇವಗ್ಗಿ, ರಟಕಲ, ಮುಕರಂಬಾ, ಕಂದಗೂಳ, ಮಾವಿನಸೂರ, ಗೊಣಗಿ ಭಕ್ತರು ಚನ್ನಬಸವ ದೇವರ ಮನೆಯಿಂದ ಉತ್ಸವ ಮೂರ್ತಿಯನ್ನು ಮೆರವಣಿಗೆಯ ಮೂಲಕ ದೇಸ್ಥಾನಕ್ಕೆ ಬಂದು ತಲುಪಿತು. ಬಳಿಕ ರಟಕಲ್ ಗ್ರಾಮದಿಂದ ಭಜನೆ ತಂಡ ಬರುತ್ತಿದ್ದಂತೆ ರೇವಣಸಿದ್ದನ ಉತ್ಸವ ಮೂರ್ತಿಗೆ ಮಹಾಮಂಗಳಾರತಿ ಸಲ್ಲಿಸಿ ಅಲಂಕೃತ ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಚಾಲನೆ ನೀಡಲಾಯಿತು.

ರೇವಣಸಿದ್ದೇಶ್ವರ ಗುಡ್ಡದಲ್ಲಿ ಅಲಂಕೃತ ಬೆಳ್ಳಿ ಪಲಕ್ಕಿ ಉತ್ಸವವು ಸಹಸ್ರಾರು ಭಕ್ತರ ಜಯಘೋಷಗಳ ಮಧ್ಯೆ ದೇವಸ್ಥಾನ ಪ್ರದಕ್ಷಿಣೆ ಹಾಕಿತು. ಭಕ್ತರು ಯಘೋಷಗಳನ್ನು ಕೂಗುತ್ತ ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ಉತ್ತುತ್ತಿ, ಬಾದಮಿ, ಬಾಳೆಹಣ್ಣು, ನಾಣ್ಯ, ತೆಂಗಿನಕಾಯಿ, ಫಲಪುಷ್ಪಗಳನ್ನು ಎಸೆದು ಭಕ್ತಿ ಮೆರೆದರು.

ಜಾತ್ರೆಗೆ ಬಂದ ಭಕ್ತರಿಗೆ ಸಾರಿಗೆ, ಕುಡಿಯುವ ನೀರು, ಆರೋಗ್ಯ, ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಕಂದಗೂಳ ಕ್ರಾಸ್, ಅರಣಕಲ್, ಭೆಡಸೂರ, ಮಾವಿನಸೂರ ರಸ್ತೆ ಮಾರ್ಗದಲ್ಲಿ ವಾಹನ ದಟ್ಟಣೆ ಹೆಚ್ಚಿತ್ತು.

ರಟಕಲ್‌ ಪೂಜ್ಯ ನೀಲಕಂಠ ಮಹಾಸ್ವಾಮಿಗಳು, ಸೇಡಂ ಸಹಾಯಕ ಆಯುಕ್ತ ಮತ್ತು ದೇವಾಸ್ಥಾನ ಸಮಿತಿ ಅಧ್ಯಕ್ಷ ಪ್ರಭುರೆಡ್ಡಿ, ಸೇಡಂ ತಹಶಿಲ್ದಾರ ನಾಗನಾಥ ತರಗೆ, ದೇವಸ್ಥಾನ ಕಾರ್ಯದರ್ಶಿ ಸದಾಶಿವ ವಗ್ಗೆ, ಚನ್ನಬಸಪ್ಪ ದೇವರಮನಿ, ಗಂಗಾಧರ ಸ್ವಾಮಿ, ಶಿವಾರಾಜ ಪಾಟೀಲ ಗೋಣಗಿ, ವೀರಣ್ಣ ಗಂಗಾಣಿ ಸೇರಿದಂತೆ ಸಹಸ್ರಾರು ಭಕ್ತರು ಇದ್ದರು.

ಶಹಾಬಾದ್‌ ಡಿವೈಎಸ್‌ಪಿ ಶಂಕರಗೌಡ ಪಾಟೀಲ, ಸಿಪಿಐ ಜಗದೇವಪ್ಪ ಪಾಳ, ಕಾಳಗಿ ಪಿಎಸ್ಐ ತಿಮ್ಮಯ್ಯ ಬಿ.ಕೆ ನೇತೃತ್ವದಲ್ಲಿ ಪೊಲಿಸ್ ಬಂದೋಬಸ್ತ್ ಕಲ್ಪಿಸಿದರು.




Tags

KalagiRevanasiddeshwara Pallaki Utsav
share
ವಾರ್ತಾಭಾರತಿ
ವಾರ್ತಾಭಾರತಿ
Next Story
X