ಕಾಳಗಿ | ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆ : ಗಂಗಾಣಿ

ಕಾಳಗಿ : ಪರಿಸರ ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ರೈತ ಸೇನೆ ತಾಲೂಕು ಅಧ್ಯಕ್ಷ ವೀರಣ್ಣ ಗಂಗಾಣಿ ಹೇಳಿದರು.
ತಾಲೂಕಿನ ರಟಕಲ್ ರೇವಗ್ಗಿ ರೇವಣಸಿದ್ದೇಶ್ವರ ಗುಡ್ಡದಲ್ಲಿ ಗುರುವಾರ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಟ್ಟು ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.
ಪರಿಸರವನ್ನು ನಾವು ರಕ್ಷಣೆ ಮಾಡಿದರೆ ಅದು ನಮ್ಮನ್ನು ಉಸಿರಿರುವರೆಗೂ ರಕ್ಷಣೆ ಮಾಡುತ್ತದೆ. ಪರಿಸರ ಸಂರಕ್ಷಣೆ ಸಸಿ ನೆಡುವ ವಿಷಯ ಕೇವಲ ಒಂದು ದಿನಕ್ಕೆ ಮಾತ್ರ ಸೀಮಿತವಾಗದೆ ನಿರಂತರವಾಗಿರಬೇಕು. ಸಸಿಗಳನ್ನು ನೆಟ್ಟು ಅವುಗಳನ್ನು ತಮ್ಮ ಸ್ವಂತ ಮಕ್ಕಳಂತೆ ಪೋಷಣೆ ಮಾಡಬೇಕು. ಮುಂದಿನ ದಿನಗಳಲ್ಲಿ ಗಿಡಗಳು ನಮಗೆ ಆಶ್ರಯ ನೀಡುತ್ತವೆ ಎಂದು ಹೇಳಿದರು.
ಗೌರಿ ಗುಡ್ಡದ ಪೂಜ್ಯ ರೇವಣಸಿದ್ಧ ಶರಣರು, ಪ್ರಾದೇಶಿಕ ವಲಯ ಅರಣ್ಯ ಅಧಿಕಾರಿ ಸುನೀಲ್ ಚವ್ಹಾಣ, ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶರಣಬಸಪ್ಪ ಮಮಶೆಟ್ಟಿ ಮಾತನಾಡಿದರು.
ಈ ಸಂದರ್ಭದಲ್ಲಿ ಅನೇಕರು ಇದ್ದರು.
Next Story




