Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೆಚ್ಚು...

ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೆಚ್ಚು ಮಂತ್ರಿ ಸ್ಥಾನ ನೀಡಬೇಕು: ಡಾ.ಲಕ್ಷ್ಮಣ ದಸ್ತಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ29 May 2026 6:35 PM IST
share
ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಹೆಚ್ಚು ಮಂತ್ರಿ ಸ್ಥಾನ ನೀಡಬೇಕು: ಡಾ.ಲಕ್ಷ್ಮಣ ದಸ್ತಿ ಒತ್ತಾಯ

ಕಲಬುರಗಿ: ನೂತನ ಮಂತ್ರಿಮಂಡಲದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಕನಿಷ್ಠ ಎಂಟಕ್ಕೂ ಮೇಲ್ಪಟ್ಟು ಮಂತ್ರಿ ಸ್ಥಾನಗಳು ನೀಡಬೇಕೆಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯ ಗೌರವಾಧ್ಯಕ್ಷರಾದ ಬಸವರಾಜ ದೇಶಮುಖ್‌ ಮತ್ತು ಸಂಸ್ಥಾಪಕ ಅಧ್ಯಕ್ಷರಾದ ಡಾ. ಲಕ್ಷ್ಮಣ ದಸ್ತಿ ಕಾಂಗ್ರೆಸ್ ಹೈಕಮಾಂಡಗೆ ಒತ್ತಾಯಿಸಿದ್ದಾರೆ.

ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ನೀರಾವರಿ, ಲೋಕೋಪಯೋಗಿ, ಕೈಗಾರಿಕೆ, ಪ್ರೌಢ ಶಿಕ್ಷಣ, ಯೋಜನಾ, ಆರೋಗ್ಯ ಮತ್ತು ವೈದ್ಯಕೀಯ, ಉನ್ನತ ಶಿಕ್ಷಣ, ಪ್ರವಾಸೋಧ್ಯಮ ಸೇರಿದಂತೆ ಅಭಿವೃದ್ಧಿಗೆ ಪೂರಕವಾದ ಸ್ಥಾನಗಳು ನೀಡಲು ಸಮಿತಿ ಆಗ್ರಹಿಸಿದೆ.

ಗೋವಿಂದರಾವ್‌ ಸಮಿತಿ ವರದಿಯನ್ನು ಆಧಾರವಾಗಿಟ್ಟುಕೊಂಡು ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಗೆ ಮತ್ತು 371ನೇ ಜೇ ಕಲಂ ಪರಿಣಾಮಕಾರಿ ಅನುಷ್ಠಾನಕ್ಕೆ ಈಗಾಗಲೇ ಸರಕಾರ ತೀರ್ಮಾನಿಸಿರುವಂತೆ ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ಪ್ರತ್ಯೇಕ ಸಚಿವಾಲಯ ಕಾಲಮಿತಿಯಲ್ಲಿ ಅನುಷ್ಠಾನಕ್ಕೆ ಕ್ರಮಕೈಗೊಳ್ಳವುದು ಅತಿ ಅವಶ್ಯಕವಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ಮತ್ತು ಅದರ ಉಸ್ತುವಾರಿಯನ್ನು ಕಲ್ಯಾಣ ಕರ್ನಾಟಕ ಭಾಗದ ಸಚಿವರಿಗೆ ಮಾತ್ರ ನೀಡಬೇಕು ಎಂದು ಆಗ್ರಹಿಸಿದೆ.

ಕಲ್ಯಾಣ ಕರ್ನಾಟಕ ಪ್ರದೇಶದ ರಚನಾತ್ಮಕ ಪ್ರಗತಿಯ ಬಗ್ಗೆ ಸಂಪೂರ್ಣ ಮಾಹಿತಿ ಇರುವ ಮತ್ತು ಅಭಿವೃದ್ಧಿಗೆ ಕೈಗೊಳ್ಳುಬೇಕಾದ ಕ್ರಮಗಳ ಬಗ್ಗೆ ಅರಿವು ಇರುವ ರಾಷ್ಟ್ರ ಮಟ್ಟದ ನಾಯಕರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸುವಂತೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಒತ್ತಾಯಿಸಿದೆ.

Tags

Kalyan KarnatakaBasavaraj Deshmukh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X