ಕಲಬುರಗಿಯಲ್ಲಿ ಫೆ.17 ರಂದು “ಕಲ್ಯಾಣ ಕರ್ನಾಟಕ ಮೀಡಿಯಾ ಹಬ್ಬ-2025” ಕಾರ್ಯಕ್ರಮ
ಕಲಬುರಗಿ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಮಾಧ್ಯಮ ಅಕಾಡೆಮಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ “ಕಲ್ಯಾಣ ಕರ್ನಾಟಕ ಮೀಡಿಯಾ ಹಬ್ಬ-2025” ಕಾರ್ಯಕ್ರಮವನ್ನು ಇದೇ ಫೆ.17 ಹಾಗೂ 18 ರಂದು ಎರಡು ದಿನಗಳ ಕಾಲ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ.
ಫೆ.17 ರಂದು ಸೋಮವಾರ ಬೆಳಿಗ್ಗೆ 10 ಗಂಟೆಗೆ ಜೇವರ್ಗಿ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ.ಅಜಯ್ ಧರ್ಮಸಿಂಗ್ ಅವರು “ಕಲ್ಯಾಣ ಕರ್ನಾಟಕ ಮೀಡಿಯಾ ಹಬ್ಬ-2025” ಕಾರ್ಯಕ್ರಮವನ್ನು ಉದ್ಘಾಟಿಸುವರು. ಕಲಬುರಗಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಪೂಜ್ಯ ಮಾತೋಶ್ರೀ ಡಾ.ದಾಕ್ಷಾಯಿಣಿ ಅವ್ವಾಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯವಹಿಸುವರು.
ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಅವರು ಆಶಯ ಭಾಷಣ ಮಾಡುವರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ ಎಂ.ನಿಂಬಾಳ್ಕರ್, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಅನಿಲಕುಮಾರ ಬಿಡವೆ, ಕೊಪ್ಪಳ ವಿಶ್ವವಿದ್ಯಾಲಯದ ಉಪ ಕುಲಪತಿ ಬಿ.ಕೆ.ರವಿ ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿ ಡಾ.ಜಿ.ಶ್ರೀರಾಮುಲು ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಕಲಬುರಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.
ಸಮಾರೋಪ ಸಮಾರಂಭ :
“ಕಲ್ಯಾಣ ಕರ್ನಾಟಕ ಮೀಡಿಯಾ ಹಬ್ಬ-2025” ಕಾರ್ಯಕ್ರಮದ ಸಮಾರೋಪ ಸಮಾರಂಭವು ಫೆ.18 ರಂದು ಮಂಗಳವಾರ ಸಂಜೆ 5 ಗಂಟೆಗೆ ಶರಣಬಸವ ಕಾಲೇಜಿನಲ್ಲಿ ಜರುಗಲಿದೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ಆರ್.ಪಾಟೀಲ್ ಅವರು ಸಮಾರೋಪ ಭಾಷಣ ಮಾಡುವರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಅವರು ಅಭಿನಂದನಾ ಭಾಷಣ ಮಾಡುವರು.
ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಸಚಿವ ಡಾ.ಎಸ್.ಜಿ.ಡೊಳ್ಳೆಗೌಡರ್ ಅವರು ಬಹುಮಾನ ವಿತರಿಸುವರು.
ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಮಂಜುನಾಥ ಡೊಳ್ಳಿನ, ಕಲಬುರಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ, ಶರಣಬಸವ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಟಿ.ವಿ.ಶಿವಾನಂದನ್ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್ ಹಾಗೂ ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಸಹನಾ ಮಾಜಿ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.







