ಸೆ.20ರಂದು ಕಲಬುರಗಿಯಲ್ಲಿ ‘ಕಲ್ಯಾಣ ಕರ್ನಾಟಕ ವಿದ್ಯಾರ್ಥಿರತ್ನ’ ಪ್ರಶಸ್ತಿ ಪ್ರದಾನ

ಕಲಬುರಗಿ: ಡಾ. ರಾಜಕುಮಾರ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಕಲಾ ಸಂಘದ ವತಿಯಿಂದ ರಾಷ್ಟ್ರೀಯ ಶಿಕ್ಷಕರ ದಿನಾಚರಣೆ ಹಾಗೂ 5ನೇ ವರ್ಷದ ಶಿಕ್ಷಕರ ಉತ್ಸವ–2026ರ ಅಂಗವಾಗಿ 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ‘ಕಲ್ಯಾಣ ಕರ್ನಾಟಕ ವಿದ್ಯಾರ್ಥಿರತ್ನ’ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಸೆಪ್ಟೆಂಬರ್ 20ರಂದು ಆಯೋಜಿಸಲಾಗಿದೆ.
ನಗರದ ಡಾ. ಎಸ್.ಎಂ. ಪಂಡಿತ ರಂಗಮಂದಿರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕಲ್ಯಾಣ ಕರ್ನಾಟಕದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾಗಿರುವ ಸುಮಾರು 22 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.
ಕಾರ್ಯಕ್ರಮವನ್ನು ಮಾಜಿ ಸಚಿವ ಸುನೀಲ್ ವಲ್ಯಾಪುರೆ ಹಾಗೂ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಉದ್ಘಾಟಿಸಲಿದ್ದಾರೆ. ಕೊಪ್ಪಳ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪೂರ ಅವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಗಣ್ಯರು, ಶಿಕ್ಷಣ ತಜ್ಞರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಲಿದ್ದಾರೆ.
ಪ್ರತಿವರ್ಷದಂತೆ ಈ ವರ್ಷವೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಯನ್ನು ಗುರುತಿಸಿ ಪ್ರತಿಭಾವಂತರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಪ್ರೊ. ರಮೇಶ ಯಾಳಗಿ, ಕಾರ್ಯದರ್ಶಿ ಯಲ್ಲಾಲಿಂಗ ದಂಡಿನ್ ಹಾಗೂ ಸಂಚಾಲಕ ಅಶೋಕಕುಮಾರ ಉಪ್ಪಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






