Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಮಲಾಪುರ | ಮೂಲಸೌಕರ್ಯ ಸಮಸ್ಯೆ ಖಂಡಿಸಿ...

ಕಮಲಾಪುರ | ಮೂಲಸೌಕರ್ಯ ಸಮಸ್ಯೆ ಖಂಡಿಸಿ ಪಟ್ಟಣ ಪಂಚಾಯತ್‌ಗೆ ಬೀಗ ಜಡಿದು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2026 8:28 PM IST
share
ಕಮಲಾಪುರ | ಮೂಲಸೌಕರ್ಯ ಸಮಸ್ಯೆ ಖಂಡಿಸಿ ಪಟ್ಟಣ ಪಂಚಾಯತ್‌ಗೆ ಬೀಗ ಜಡಿದು ಪ್ರತಿಭಟನೆ

ಕಮಲಾಪುರ : ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಲುಷಿತ ಕುಡಿಯುವ ನೀರು ಪೂರೈಕೆ, ಬೀದಿ ದೀಪಗಳ ದುರಸ್ತಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆಯನ್ನು ಖಂಡಿಸಿ ಸಾರ್ವಜನಿಕರು ಕಮಲಾಪುರ ಪಟ್ಟಣ ಪಂಚಾಯತ್ ಕಚೇರಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.

ಪ್ರತಿಭಟನಾಕಾರರು ಮಾತನಾಡಿ, ಹಲವು ವಾರ್ಡ್‌ಗಳಿಗೆ ಪೂರೈಕೆಯಾಗುತ್ತಿರುವ ಕುಡಿಯುವ ನೀರು ಕಲುಷಿತವಾಗಿದ್ದು, ದುರ್ವಾಸನೆ ಬರುತ್ತಿದೆ. ಸಮರ್ಪಕ ಶುದ್ಧೀಕರಣವಿಲ್ಲದೆ ನೀರು ಪೂರೈಕೆಯಾಗುತ್ತಿರುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಕಲುಷಿತ ನೀರು ಬಳಸಿದ ಪರಿಣಾಮ ಅನಾರೋಗ್ಯಕ್ಕೆ ಒಳಗಾಗಿ ಆಸ್ಪತ್ರೆಗಳಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಬೆಳಕೊಟ್ಟಾ ಡ್ಯಾಂನಿಂದ ಪಟ್ಟಣಕ್ಕೆ ಪೂರೈಕೆಯಾಗುವ ನೀರನ್ನು ಶುದ್ಧೀಕರಿಸುವ ಫಿಲ್ಟರ್ ಘಟಕ ಹಾಳಾಗಿದ್ದು, ಅದನ್ನು ದುರಸ್ತಿಪಡಿಸದ ಕಾರಣ ಶುದ್ಧೀಕರಣವಾಗದ ನೀರೇ ಮನೆಗಳಿಗೆ ತಲುಪುತ್ತಿದೆ. ಈ ಬಗ್ಗೆ ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಅನೇಕ ವಿದ್ಯುತ್ ಕಂಬಗಳಲ್ಲಿನ ಬೀದಿ ದೀಪಗಳು ಕೆಟ್ಟುಹೋಗಿದ್ದರೂ ಅವುಗಳನ್ನು ದುರಸ್ತಿಪಡಿಸಲಾಗಿಲ್ಲ. ರಾತ್ರಿ ವೇಳೆ ಸಾರ್ವಜನಿಕರು ಕತ್ತಲಲ್ಲಿ ಸಂಚರಿಸಬೇಕಾದ ಪರಿಸ್ಥಿತಿ ಎದುರಾಗಿದ್ದು, ತಕ್ಷಣ ಬೀದಿ ದೀಪಗಳನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಿ ಭಾನುವಾರ ನಡೆಯುವ ಕಮಲಾಪುರ ಸಂತೆಗೆ ಸಾವಿರಾರು ಜನರು ಆಗಮಿಸುತ್ತಾರೆ. ಸಂತೆ ವ್ಯಾಪಾರಿಗಳು ಹಾಗೂ ಗ್ರಾಹಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಕಳೆದ ಆರು ತಿಂಗಳಿಂದ ಮನವಿ ಸಲ್ಲಿಸಿದ್ದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ದೂರಿದರು.

ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸಾರ್ವಜನಿಕರ ಮೂಲಭೂತ ಸಮಸ್ಯೆಗಳತ್ತ ಗಮನ ಹರಿಸದೆ ಹೊಸ ಬಡಾವಣೆಗಳ ಕಾಮಗಾರಿ ಹಾಗೂ ಖಾತೆ ಬದಲಾವಣೆ ಸೇರಿದಂತೆ ಇತರೆ ಆಡಳಿತಾತ್ಮಕ ಕೆಲಸಗಳಿಗೆ ಮಾತ್ರ ಆದ್ಯತೆ ನೀಡುತ್ತಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ತಕ್ಷಣವೇ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ ರಾoಪೂರೆ, ದಾಸಿಮಯ್ಯ ವಡ್ಡಣಕೇರಿ, ಬಸವರಾಜ ಸೂಗುರ, ವಿಜಯಕುಮಾರ ಮಾಟೂರ, ಅಣ್ಣಪ್ಪ ಪೂಜಾರಿ, ಶರಣು ಕುಂಬಾರ, ಸಂತೋಷ ಪವಾರ, ಥಾವರ್ ಗಿರಿ ತಾಂಡಾ, ಸುಭಾಷ್ ಪಂಚಾಳ, ಸಂತೋಷ ಮುಗಳಿ ಸೇರಿದಂತೆ ಹಲವು ಮುಖಂಡರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Tags

protestKamalapura
share
ವಾರ್ತಾಭಾರತಿ
ವಾರ್ತಾಭಾರತಿ
Next Story
X