Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿಯಲ್ಲಿ ಕರ್ನಾಟಕ ಧಮ್ಮ ಜನಜಾಗೃತಿ...

ಕಲಬುರಗಿಯಲ್ಲಿ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆಗೆ ಶಾಸಕರಿಂದ ಚಾಲನೆ

ವಾರ್ತಾಭಾರತಿವಾರ್ತಾಭಾರತಿ6 Oct 2026 9:51 PM IST
share
ಕಲಬುರಗಿಯಲ್ಲಿ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆಗೆ ಶಾಸಕರಿಂದ ಚಾಲನೆ

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅವರ ಧಮ್ಮಚಕ್ರ ಪ್ರವರ್ತನ ದಿನದ ಅಂಗವಾಗಿ ಹಮ್ಮಿಕೊಂಡಿರುವ ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ-2026ಕ್ಕೆ ಸೋಮವಾರ ಕಲಬುರಗಿಯ ಜಗತ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ ನೀಡಿದರು.

ಪೂಜ್ಯ ಭಂತೆ ಬೋಧಿಧಮ್ಮ ಅವರ ನೇತೃತ್ವದಲ್ಲಿ ಆರಂಭಗೊಂಡಿರುವ ಈ ಯಾತ್ರೆಯು ಕಲಬುರಗಿಯಿಂದ ರಾಜ್ಯದ ವಿವಿಧ ಜಿಲ್ಲಾ ಕೇಂದ್ರಗಳು ಹಾಗೂ ತಾಲ್ಲೂಕುಗಳಲ್ಲಿ ಸಂಚರಿಸಲಿದೆ. ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಭಗವಾನ್ ಗೌತಮ ಬುದ್ಧರ ವಿಚಾರಧಾರೆ, ಸಮಾನತೆ, ಸ್ವಾತಂತ್ರ್ಯ, ನ್ಯಾಯ, ಬಂಧುತ್ವ ಮತ್ತು ಬೌದ್ಧ ಧಮ್ಮದ ಮಾನವೀಯ ಮೌಲ್ಯಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಯಾತ್ರೆಯ ಮುಖ್ಯ ಉದ್ದೇಶವಾಗಿದೆ ಎಂದು ಆಯೋಜಕರು ತಿಳಿಸಿದರು.

ಅಂತರಾಷ್ಟ್ರೀಯ ಬೌದ್ಧ ಯುವ ಸಂಘಟನೆ, ಭಾರತ, ಗ್ಲೋಬಲ್ ಡಾ. ಅಂಬೇಡ್ಕರ್ ಬೌದ್ಧ ಮಿಷನ್, ಯುಎಸ್‌ಎ, ಅಖಿಲ ಭಾರತ ಡಾ. ಅಂಬೇಡ್ಕರ್ ಭಿಕ್ಕು ಸಂಘ ಹಾಗೂ ಬೌದ್ಧ ಮಹಾಸ್ತೂಪ ಅಭಿವೃದ್ಧಿ ಸಂರಕ್ಷಣಾ ಸಂಸ್ಥೆ, ಸನ್ನತಿ (ಕನಗನಹಳ್ಳಿ) ಸೇರಿದಂತೆ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಯಾತ್ರೆ ನಡೆಯುತ್ತಿದೆ.

ಅಕ್ಟೋಬರ್ 5ರಂದು ಆರಂಭಗೊಂಡಿರುವ ಯಾತ್ರೆಯ ಸಮಾರೋಪ ಸಮಾರಂಭವು ನವೆಂಬರ್ 1ರಂದು ಚಿತ್ತಾಪುರ ತಾಲ್ಲೂಕಿನ ಸನ್ನತಿ (ಕನಗನಹಳ್ಳಿ)ಯಲ್ಲಿರುವ ಐತಿಹಾಸಿಕ ಬೌದ್ಧ ಸ್ತೂಪದ ಆವರಣದಲ್ಲಿ ನಡೆಯಲಿದೆ.

ಈ ಸಂದರ್ಭದಲ್ಲಿ ಮಹಾದೇವ ಧನ್ನಿ, ಪ್ರಕಾಶ ಮೂಲಭಾರತಿ, ಗುಂಡಪ್ಪ ಲಂಡಕರ್, ಡಾ. ವಿ.ಟಿ. ಕಾಂಬ್ಳೆ, ಅಂಬಣ್ಣ ಜೀವಣಗಿ, ಸೂರ್ಯಕಾಂತ ನಿಂಬಾಳ್ಕರ್, ಹಣಮಂತ ಬೋಧನಕರ್, ಸಂತೋಷ ಮೇಲ್ಮನಿ, ದಿನೇಶ ದೊಡ್ಮನಿ, ಜೈಭಾರತ್ ಕಾಂಬ್ಳೆ, ಸುರೇಶ ಕಾನೇಕರ್, ಸಚಿನ್ ಶಿರವಾಳ, ರಾಜೀವ್ ಜಾನೆ, ಸೋಮಶೇಖರ ಮೇಲಿನಮನಿ, ಪ್ರಕಾಶ ಔರಾದ್ಕರ್, ಅಶೋಕ ವೀರನಾಯಕ, ದೇವೇಂದ್ರ ಸೀನೂರ್, ಅಶೋಕ ಕಪನೂರ, ಹಣಮಂತ ಇಟಗಿ, ವಿಶ್ವನಾಥ ಕಾರ್ನಾಡ, ಶ್ರೀನಿವಾಸ ಲಾಖೆ, ಅರ್ಜುನ ಗೊಬ್ಬುರ, ಪ್ರಕಾಶ ಭಾಲೆ, ಮಹೇಶ ಬೆಡಜೇವರ್ಗಿ, ಶಿವಕುಮಾರ ನಂದಿ, ಪುಂಡಲಿಕ ಹೆರೂರ್ಕರ್ ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.

Tags

KalaburagiKarnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X