Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ ಕಸಾಪದಿಂದ ಕಿತ್ತೂರು ರಾಣಿ...

ಕಲಬುರಗಿ ಕಸಾಪದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ : ವೀರ ಸ್ತ್ರೀ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ26 Oct 2025 7:34 PM IST
share
ಕಲಬುರಗಿ ಕಸಾಪದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ : ವೀರ ಸ್ತ್ರೀ ಪ್ರಶಸ್ತಿ ಪ್ರದಾನ

ಕಲಬುರಗಿ: ಸ್ವಾತಂತ್ರ್ಯ ಚಳವಳಿಯ ಪ್ರಥಮ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮಳ ತ್ಯಾಗ, ಶೌರ್ಯ ಮತ್ತು ಜೀವನಾದರ್ಶಗಳನ್ನು ಇಂದಿನ ಮಹಿಳೆಯರು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಬೆಂಗಳೂರಿನ ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ತಹಾಶೀಲ್ದಾರ್ ಸಾವಿತ್ರಿ ಶರಣು ಸಲಗರ ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ರವಿವಾರ ಏರ್ಪಡಿಸಿದ ಕಿತ್ತೂರು ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಹಾಗೂ ವೀರ ಸ್ತ್ರೀ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ರಾಜ ಮನೆತನದ ಸಂರಕ್ಷಣೆ, ಸಂಸ್ಕಾರ, ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಚೆನ್ನಮ್ಮಳ ಹೋರಾಟದ ಬದುಕು ಇಂದಿಗೂ ಪ್ರಸ್ತುತವಾಗಿವೆ. ಇಂಥ ವೀರ ಮಹಿಳೆಯ ಹೆಸರಲ್ಲಿ ಪ್ರಶಸ್ತಿ ಕೊಡುತ್ತಿರುವ ಪರಿಷತ್ತಿನ ಕಾರ್ಯ ಸ್ವಾಗರ್ಹತವಾಗಿದೆ. ಮಹಿಳೆಯರು ಯಾವುದೇ ಸಂಕೋಚ ಪಡಬಾರದು. ಧೈರ್ಯದಿಂದ ಮುನ್ನಡೆ ಜೀವನ ಸಾಗಿಸುವಂತೆ ಸ್ತ್ರೀಯರಿಗೆ ಕರೆ ನೀಡಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಮಹಿಳೆಯರು ಕೇವಲ ನಾಲ್ಕು ಗೋಡೆಗಳ ಮಧ್ಯಕ್ಕೆ ಸೀಮಿತವಾಗಬಾರದು. ಮಹಿಳೆಯರ ಮೇಲೆ ಸಮಾಜದಲ್ಲಿ ಸಾಕಷ್ಟು ಹೊಣೆಗಾರಿಕೆಯಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸುವುದನ್ನು ರೂಢಿಸಿಕೊಂಡು ಸಮರ್ಥವಾಗಿ ಕುಟುಂಬಗಳ ನಿರ್ವಹಣೆ ಮಾಡಬೇಕು ಎಂದರು.

ಯಾದಗಿರಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಮಾಲತಿ ರೇಷ್ಮಿ, ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತೆ ಅನ್ನಪೂರ್ಣ ಸಂಗೋಳಗಿ, ಶಕುಂತಲಾ ಪಾಟೀಲ ಜಾವಳಿ, ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಮಾಲಾ ದಣ್ಣೂರ ಮಾತನಾಡಿದರು.

ಈ ವೇಳೆ ಜ್ಯೋತಿ ಕೋಟನೂರ, ಜಯಶ್ರೀ ಜಮಾದಾರ, ಮಾಣಿಕಮ್ಮಾ ಜಮಾದಾರ, ವಿಶಾಲಾಕ್ಷಿ ಮಾಯಣ್ಣವರ್, ಕವಿತಾ ಕಾವಳೆ, ಜಯಶ್ರೀ ಯಾದಗಿರಿ, ವೆಂಕುಬಾಯಿ ರಜಪೂತ, ಸುಕನ್ಯಾ ಕುಮಸಿ, ಕವಿತಾ ದೇಗಾಂವ, ಭಾಗ್ಯಶ್ರೀ ಮರಗೋಳ, ಜಿಲ್ಲಾ ಕಸಾಪ ದ ಶಿವರಾಜ ಅಂಡಗಿ, ಧರ್ಮಣ್ಣ ಎಚ್ ಧನ್ನಿ, ಶರಣರಾಜ ಛಪ್ಪರಬಂದಿ, ರಾಜೇಂದ್ರ ಮಾಡಬೂಳ, ಸಿದ್ಧಲಿಂಗ ಬಾಳಿ, ಎಂ.ಎನ್. ಸುಗಂಧಿ, ಧರ್ಮರಾಜ ಜವಳಿ, ರವಿಕುಮಾರ ಶಹಾಪೂರಕರ್, ಸಂತೋಷ ಕುಡಳ್ಳಿ, ರವೀಂದ್ರಕುಮಾರ ಭಂಟನಳ್ಳಿ, ದಿನೇಶ ಮದಕರಿ, ಜೆ.ಎಸ್. ವಿನೋದಕುಮಾರ, ಶಿವಾನಮದ ಸುರವಸೆ, ಡಾ. ಶ್ರೀಶೈಲ ನಾಗರಾಳ, ವೀರೇಂದ್ರಕುಮಾರ ಕೊಲ್ಲೂರ, ಸಂದೇಶ ಕಮಕನೂರ, ಸೇರಿದಂತೆ ಅನೆಕರು ಉಪಸ್ಥಿತರಿದ್ದರು.

ಸಾಮಾಜಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಮಾಜಿ ಉಪ ಮೇಯರ್ ನಾಗವೇಣಿ ತಿಪ್ಪಣಪ್ಪ ಕಮಕನೂರ, ಜೆಸ್ಕಾಂ ನ ಎಇಇ ಮಾಲಿನಿ ಸ್ವಾಮಿ, ಶರಣ ಚಿಂತಕಿ ಶಾರದಾ ಓಗಿ, ಕನ್ನಡಪರ ಚಿಂತಕಿ ಫಾತೀಮಾ ಶೇಖ್, ಎಂ.ಆರ್.ಎಂ.ಸಿ. ಪ್ರಾಧ್ಯಾಪಕಿ ಡಾ. ಶಾಂತಾ ಬಿ ಪಾಟೀಲ, ಚಿತ್ತಾಪೂರ ಪುರಸಭೆ ಸದಸ್ಯೆ ಶೀಲಾ ಬಾಬು ಕಾಶಿ, ಸಮಾಜ ಸೇವಕಿ ಸುಮಾ ಶರಣು ಪಪ್ಪಾ, ಜನಪರ ಹೋರಾಟಗಾರ್ತಿ ಚಂದಮ್ಮ ಗೋಳಾ ಅವರನ್ನು ವೀರ ಸ್ತ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X