ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿ ಅಕ್ರಮ ಪ್ರಕರಣ: ಕಲಬುರಗಿಯಲ್ಲಿ ಸಿಐಡಿ ದಾಳಿ

ಕಲಬುರಗಿ : ಕೆಪಿಎಸ್‌ಸಿ ಪಶುವೈದ್ಯಕೀಯ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ಕಲಬುರಗಿ ನಗರದಲ್ಲಿ ದಾಳಿ ನಡೆಸಿದ್ದಾರೆ.
ನಗರದ ನ್ಯೂ ಓಜಾ ಲೇಔಟ್‌ನಲ್ಲಿರುವ ಪಶುವೈದ್ಯಕೀಯ ನೇಮಕಾತಿ ಅಭ್ಯರ್ಥಿಯೊಬ್ಬರ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸಿದೆ.
ಬೆಂಗಳೂರು ಸಿಐಡಿ ಡಿವೈಎಸ್‌ಪಿ ಹಾಗೂ ಕಲಬುರಗಿ ಡಿವೈಎಸ್‌ಪಿ ಅಸ್ಲಾಂ ಪಾಷಾ ಅವರ ನೇತೃತ್ವದಲ್ಲಿ ದಾಳಿ ನಡೆದಿದ್ದು, ಸುಮಾರು 20 ಅಧಿಕಾರಿಗಳ ತಂಡ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.
ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಮುಂದುವರಿಸಿದ್ದು, ದಾಳಿಯ ವೇಳೆ ಯಾವೆಲ್ಲ ದಾಖಲೆಗಳು ಹಾಗೂ ಸಾಕ್ಷ್ಯಗಳು ಲಭ್ಯವಾಗಿವೆ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಬೇಕಿದೆ.
Next Story




