Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಲಂಡನ್ ಡೈರಿ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ನ.15ರಂದು ಕೆಪಿಎಸ್‌ಸಿ ಗೆಜೆಟೆಡ್...

ನ.15ರಂದು ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆ: ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಸೂಚನೆ

ವಾರ್ತಾಭಾರತಿವಾರ್ತಾಭಾರತಿ13 Nov 2026 8:15 PM IST
share
ನ.15ರಂದು ಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೇಷನರ್ ಪೂರ್ವಭಾವಿ ಪರೀಕ್ಷೆ: ಕಟ್ಟುನಿಟ್ಟಿನ ಕ್ರಮಕ್ಕೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಸೂಚನೆ

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ವತಿಯಿಂದ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ 'ಎ' ಮತ್ತು 'ಬಿ' ವೃಂದದ ಒಟ್ಟು 319 ಹುದ್ದೆಗಳ ಭರ್ತಿಗಾಗಿ ಇದೇ ನವೆಂಬರ್ 15ರಂದು ನಡೆಯಲಿರುವ ಪೂರ್ವಭಾವಿ ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ಚುನಾವಣಾ ಮಾದರಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಶುಕ್ರವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪರೀಕ್ಷಾ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆಯಲ್ಲಿ ಯಾವುದೇ ರೀತಿಯ ಅಕ್ರಮಗಳಿಗೆ ಅವಕಾಶ ನೀಡದಂತೆ ನಿಗಾ ವಹಿಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.

ಜಿಲ್ಲೆಯ ಒಟ್ಟು 29 ಪರೀಕ್ಷಾ ಕೇಂದ್ರಗಳಲ್ಲಿ 11,745 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಅಂಗವಿಕಲ ಅಭ್ಯರ್ಥಿಗಳಿಗಾಗಿ 1 ಪ್ರತ್ಯೇಕ ಪರೀಕ್ಷಾ ಕೇಂದ್ರವನ್ನು ಮೀಸಲಿರಿಸಲಾಗಿದ್ದು, ಒಟ್ಟು 240 ಅಂಗವಿಕಲ ಅಭ್ಯರ್ಥಿಗಳು (212 ಸಾಮಾನ್ಯ ಅಂಗವಿಕಲರು ಹಾಗೂ 28 ಲಿಪಿಕಾರರ ಸಹಾಯ ಪಡೆಯುವವರು) ಪರೀಕ್ಷೆ ಎದುರಿಸಲಿದ್ದಾರೆ. ಬೆಳಿಗ್ಗೆ 10 ರಿಂದ 12 ರವರೆಗೆ ಪತ್ರಿಕೆ-1 ಹಾಗೂ ಮಧ್ಯಾಹ್ನ 2 ರಿಂದ 4 ರವರೆಗೆ ಪತ್ರಿಕೆ-2 ಪರೀಕ್ಷೆ ನಡೆಯಲಿದೆ ಎಂದರು.

ಪರೀಕ್ಷಾ ಗೌಪ್ಯ ಸಾಮಗ್ರಿಗಳನ್ನು ಜಿಲ್ಲಾ ಖಜಾನೆಯಲ್ಲಿ ಇಡಲು ಮತ್ತು ವಿತರಿಸಲು ಅಪರ ಜಿಲ್ಲಾಧಿಕಾರಿಗಳು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಖಜಾನೆ ಉಪನಿರ್ದೇಶಕರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ರಚಿಸಲಾಗಿದೆ. 24x7 ಸಿಸಿಟಿವಿ ವೀಕ್ಷಣೆಗಾಗಿ 3 ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗೌಪ್ಯ ಸಾಮಗ್ರಿಗಳನ್ನು ಕೇಂದ್ರಗಳಿಗೆ ತಲುಪಿಸಲು 10 ಮಾರ್ಗಗಳನ್ನು (Route) ರಚಿಸಿ, ಪ್ರತಿ ಮಾರ್ಗಕ್ಕೆ ಒಬ್ಬ ಗ್ರೂಪ್ 'ಎ' ಮತ್ತು 'ಬಿ' ಮಾರ್ಗಾಧಿಕಾರಿಯನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಪ್ರತಿ ಪರೀಕ್ಷಾ ಕೇಂದ್ರಕ್ಕೆ ತಲಾ ಒಬ್ಬರಂತೆ ಉಪ ಅಧೀಕ್ಷಕರು (ಗ್ರೂಪ್ 'ಎ'), ಪ್ರಶ್ನೆಪತ್ರಿಕೆ ಪಾಲಕರು (ಗ್ರೂಪ್ 'ಬಿ'), ವಸ್ತ್ರ ಸಂಹಿತೆ ಅಧಿಕಾರಿ (Dress Code Officer - ಗ್ರೂಪ್ 'ಬಿ') ಹಾಗೂ ಸ್ಥಳೀಯ ನಿರೀಕ್ಷಣಾಧಿಕಾರಿಗಳನ್ನು (LIO) ನೇಮಿಸಲಾಗಿದೆ. ಅಲ್ಲದೆ, ಪ್ರತಿ 4 ರಿಂದ 5 ಕೇಂದ್ರಗಳಿಗೆ ಒಬ್ಬರಂತೆ ಸಹಾಯಕ ಆಯುಕ್ತರ ಶ್ರೇಣಿಗೆ ಕಡಿಮೆಯಿಲ್ಲದ ಒಟ್ಟು 6 ಗ್ರೂಪ್ 'ಎ' ಅಧಿಕಾರಿಗಳನ್ನು ಪರೀಕ್ಷಾ ವೀಕ್ಷಕರನ್ನಾಗಿ ನಿಯೋಜಿಸಲಾಗಿದ್ದು ಪ್ರತಿ ಕೊಠಡಿಗೆ ಇಬ್ಬರು ಮೇಲ್ವಿಚಾರಕರನ್ನು ನೇಮಿಸಲಾಗಿದೆ ಎಂದು ಹೇಳಿದರು.

ವೆಬ್ ಕಾಸ್ಟಿಂಗ್ ಮತ್ತು OMR ಸ್ಕ್ಯಾನಿಂಗ್ ವ್ಯವಸ್ಥೆ:

ಎಲ್ಲಾ ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವೆಬ್ ಕಾಸ್ಟಿಂಗ್ ವೀಕ್ಷಣಾ ಕೇಂದ್ರ ಸ್ಥಾಪಿಸಲಾಗಿದ್ದು, ಜಿಲ್ಲಾ ಪಂಚಾಯತ್ ಸಿಇಒ ಅಧೀನದಲ್ಲಿ ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕರನ್ನು ನೋಡಲ್ ಅಧಿಕಾರಿಯಾಗಿ ಹಾಗೂ ಪ್ರತಿ 5 ಕೇಂದ್ರಗಳಿಗೆ ಒಬ್ಬರಂತೆ 6 ಅಧಿಕಾರಿಗಳ ತಂಡವನ್ನು ನೇಮಿಸಿದೆ ಎಂದರು.

ಇನ್ನು, ಪರೀಕ್ಷಾ ನಂತರ OMR ಶೀಟ್‌ಗಳ ಸ್ಕ್ಯಾನಿಂಗ್‌ಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲೇ ಸ್ಕ್ಯಾನಿಂಗ್ ಸೆಂಟರ್ ಸ್ಥಾಪಿಸಿ, ಕಚೇರಿ ಸಹಾಯಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಇಲ್ಲಿ 2 ಸಶಸ್ತ್ರ ಪೊಲೀಸ್ ಸಿಬ್ಬಂದಿ, ಓರ್ವ ಪಿಎಸ್‌ಐ ಹಾಗೂ HHMD ಮತ್ತು DFMD ತಪಾಸಣಾ ಉಪಕರಣಗಳನ್ನು ಅಳವಡಿಸಲು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಲಾಗಿದೆ ಎಂದು‌ ತಿಳಿಸಿದರು.

ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆಗೆ ಉತ್ತೇಜನ ನೀಡುವ ವ್ಯಕ್ತಿಗಳ ವಿರುದ್ಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (BNSS) 2023ರ ಸೆಕ್ಷನ್ 126 ಮತ್ತು 129ರ ಅಡಿಯಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲು ನಗರ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಲಾಗಿದೆ.

ಕರ್ನಾಟಕ ಪೊಲೀಸ್ ಅಧಿನಿಯಮ 1963ರ ಕಲಂ 35(ಸಿ) ಅಡಿಯಲ್ಲಿ, ನ.15ರಂದು ಬೆಳಿಗ್ಗೆ 9:00 ರಿಂದ ಸಂಜೆ 5:00 ಗಂಟೆಯವರೆಗೆ ಎಲ್ಲಾ 29 ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ವ್ಯಾಪ್ತಿಯಲ್ಲಿರುವ ಎಲ್ಲಾ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆ ಮತ್ತು ಪುಸ್ತಕದ ಅಂಗಡಿಗಳನ್ನು ಮುಚ್ಚಲು ಆದೇಶಿಸಲಾಗಿದ್ದು, ಮೊಬೈಲ್, ಪೇಜರ್, ಬ್ಲೂಟೂತ್, ಸ್ಮಾರ್ಟ್ ವಾಚ್ ಹಾಗೂ ಇನ್ನಿತರ ವೈರ್‌ಲೆಸ್ ಎಲೆಕ್ಟ್ರಾನಿಕ್ ಉಪಕರಣಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಅಭ್ಯರ್ಥಿಗಳನ್ನು ಮೆಟಲ್ ಡಿಟೆಕ್ಟರ್ ಮೂಲಕ ತಪಾಸಣೆಗೆ ಒಳಪಡಿಸಿ, ಮುಖ ಗುರುತು ಪರಿಶೀಲನೆ (Face Recognition) ನಡೆಸಿದ ನಂತರವೇ ಒಳಬಿಡಲಾಗುವುದು. ತಪಾಸಣೆ ವೇಳೆ ಪೊಲೀಸ್ ಸಿಬ್ಬಂದಿಯೊಂದಿಗೆ ಪ್ರತಿ ಕೇಂದ್ರಕ್ಕೆ ಪ್ಯಾರಾ ಮೆಡಿಕಲ್ ಮತ್ತು ಇಎನ್‌ಟಿ (ENT) ಸಿಬ್ಬಂದಿ ನಿಯೋಜಿಸಲು ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ವೀಲ್ ಚೇರ್ ವ್ಯವಸ್ಥೆ ಮಾಡಲು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (DHO) ಸೂಚಿಸಲಾಗಿದೆ. ಅಲ್ಲದೆ, ಪರೀಕ್ಷಾ ದಿನದಂದು ಬೆಳಿಗ್ಗೆ 8:00 ರಿಂದ ಸಂಜೆ 6:00 ಗಂಟೆಯವರೆಗೆ ನಿರಂತರ ವಿದ್ಯುತ್ ಪೂರೈಸಲು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಅಭ್ಯರ್ಥಿಗಳು ಪರೀಕ್ಷಾ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ, ನಿಗದಿತ ಸಮಯಕ್ಕಿಂತ ಕನಿಷ್ಠ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವಂತೆ ಜಿಲ್ಲಾಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ನಗರ ಪೊಲೀಸ್ ಆಯುಕ್ತ ಶರಣಬಸಪ್ಪ ಎಸ್.ಡಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಡಿಸಿಪಿ ಶಾಲು, ಮಹಾನಗರ ಪಾಲಿಕೆ ಆಯುಕ್ತ ಪಿ. ಶ್ರವಣಕುಮಾರ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಹೆಚ್ಚುವರಿ ಎಸ್ಪಿ ಮಹೇಶ್ ಮೇಘಣ್ಣನವರ, ಡಿಡಿಪಿಯು ದೇವನಗೌಡ ಪಾಟೀಲ್ ಸೇರಿದಂತೆ ವಿವಿಧ ಇಲಾಖೆಗಳ ನೋಡಲ್ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು, ಜೆಸ್ಕಾಂ ಅಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರು ಹಾಗೂ‌ ಪ್ರಾಂಶುಪಾಲರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags

KPSCGazettedPreliminary Exam
share
ವಾರ್ತಾಭಾರತಿ
ವಾರ್ತಾಭಾರತಿ
Next Story
X