ಭೂ ಗ್ಯಾರಂಟಿ ಯೋಜನೆ: ಕಲಬುರಗಿ ಜಿಲ್ಲಾಧಿಕಾರಿಗಳಿಂದ ಜಮೀನು ವೀಕ್ಷಣೆ

ಕಲಬುರಗಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಭೂ ಗ್ಯಾರಂಟಿ ಯೋಜನೆಯಡಿ ಬಡವರು ಹಾಗೂ ಆರ್ಥಿಕವಾಗಿ ಹಿಂದುಳಿದ ಅರ್ಹ ಕುಟುಂಬಗಳಿಗೆ ಉಚಿತ ನಿವೇಶನ ಹಂಚಿಕೆ ಮಾಡುವ ಉದ್ದೇಶದಿಂದ ಜಿಲ್ಲಾಧಿಕಾರಿ ಇಕ್ರಂ ಶರೀಫ್ ಅವರು ಶುಕ್ರವಾರ ಕಲಬುರಗಿ ತಾಲ್ಲೂಕಿನ ಪಟ್ಟಣ ಗ್ರಾಮದಲ್ಲಿ ಜಮೀನಿನ ಸ್ಥಳ ಪರಿಶೀಲನೆ ನಡೆಸಿದರು.
ನಿವೇಶನ ಹಂಚಿಕೆಗಾಗಿ ಉದ್ದೇಶಿಸಿರುವ ಜಮೀನಿನ ಸಂಪೂರ್ಣ ಪರಿಶೀಲನೆ ನಡೆಸಿದ ಅವರು, ಅಳತೆ ಕಾರ್ಯದ ಪ್ರಗತಿ ಹಾಗೂ ಯೋಜನೆಯ ಅನುಷ್ಠಾನದ ಕುರಿತು ಕಂದಾಯ ಮತ್ತು ಸರ್ವೆ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಅರ್ಹ ಬಡ ಫಲಾನುಭವಿಗಳಿಗೆ ಶೀಘ್ರವಾಗಿ ನಿವೇಶನ ಹಂಚಿಕೆ ಮಾಡಬೇಕಿರುವ ಹಿನ್ನೆಲೆಯಲ್ಲಿ ಜಮೀನು ಗುರುತಿಸುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಅಧಿಕಾರಿಗಳಿಗೆ ಸೂಚಿಸಿದರು.
Next Story




