Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಹಿರಿಯ ಸಾಹಿತಿ ಚನ್ನವೀರ ಕಣವಿ, ಚಂಪಾರವರ...

ಹಿರಿಯ ಸಾಹಿತಿ ಚನ್ನವೀರ ಕಣವಿ, ಚಂಪಾರವರ ಸಮಗ್ರ ಸಂಪುಟಗಳ ಲೋಕಾರ್ಪಣೆ

ವಾರ್ತಾಭಾರತಿವಾರ್ತಾಭಾರತಿ23 Dec 2025 8:36 PM IST
share
ಹಿರಿಯ ಸಾಹಿತಿ ಚನ್ನವೀರ ಕಣವಿ, ಚಂಪಾರವರ ಸಮಗ್ರ ಸಂಪುಟಗಳ ಲೋಕಾರ್ಪಣೆ

ಕಲಬುರಗಿ: ಆಧುನಿಕ ತಂತ್ರಜ್ಞಾನದ ಬೆಳವಣಿಗೆಯಿಂದ ಮುದ್ರಣ ಕ್ಷೇತ್ರದಲ್ಲಿ ಬಹುದೊಡ್ಡ ಕ್ರಾಂತಿ ಸಾಧ್ಯವಾಗಿದೆ. ಇದರಿಂದ ಪುಸ್ತಕಗಳ ಆವೃತ್ತಿ, ಮರು ಮುದ್ರಣ, ಗ್ರಂಥಗಳ ಪುಟ ವಿನ್ಯಾಸ ಮತ್ತು ಆಕರ್ಷಕ ವ್ಯಂಗ್ಯ ಚಿತ್ರಗಳ ಬಳಕೆ ಸಾಧ್ಯವಾಗಿದೆ. ಆದರೆ, ಕನ್ನಡ ಭಾಷೆ ಮತ್ತು ಸಾಹಿತ್ಯ ಉಳಿಯಬೇಕಾದರೆ ಕನ್ನಡ ಪುಸ್ತಕಗಳನ್ನು ಹೆಚ್ಚು ಹೆಚ್ಚಾಗಿ ಓದುವ ಹವ್ಯಾಸ ಬೆಳೆಯಬೇಕು. ಜೊತೆಗೆ ಕನ್ನಡ ಓದಲು ಪ್ರೋತ್ಸಾಹಿಸಬೇಕಿದೆ ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶಶಿಕಾಂತ್‌ ಎಸ್. ಉಡಿಕೇರಿ ಅಭಿಪ್ರಾಯಪಟ್ಟರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಹಾಗೂ ಗುಲ್ಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ಹಿರಿಯ ಸಾಹಿತಿಗಳಾದ ಚನ್ನವೀರ ಕಣವಿ ಹಾಗೂ ಪ್ರೊ. ಚಂದ್ರಶೇಖರ ಪಾಟೀಲ್‌ ಅವರಚಾಮಗರ ಸಂಪುಟಗಳ ಲೋಕಾರ್ಪಣೆ ಹಾಗೂ ಉಚಿತ ಪುಸ್ತಕಗಳ ವಿತರಣಾ ಸಮಾರಂಭ ಮತ್ತು ಮನೆಗೊಂದು ಗ್ರಂಥಾಲಯ ಕಲಬುರಗಿ ಜಿಲ್ಲಾ ಜಾಗೃತ ಸಮಿತಿ ಸದಸ್ಯರಿಗೆ ಅರ್ಹತಾ ಪ್ರಮಾಣ ಪತ್ರ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಾಡಿನ ಸಾಕ್ಷಿಪ್ರಜ್ಞೆ, ಹಿರಿಯ ಸಾಹಿತಿಗಳಾದ ಚನ್ನವೀರ ಕಣವಿ ಮತ್ತು ಚಂಪಾ ಕನ್ನಡ ನಾಡು ಕಂಡ ಮೇರು ಕವಿಗಳಾಗಿದ್ದಾರೆ. ಅವರ ವೈಚಾರಿಕ ಸಾಹಿತ್ಯ, ಕಾವ್ಯ ಮತ್ತು ಕವಿತೆಗಳು ಸಮಗ್ರ ಸಂಪುಟಗಳಲ್ಲಿ ಲೋಕಾರ್ಪಣೆ ಆಗಿದ್ದು, ಓದುವ ಪರಿಪಾಟವನ್ನು ವಿದ್ಯಾರ್ಥಿಗಳಲ್ಲಿ ಬೆಳೆಯಬೇಕಿದೆ. ಪುಸ್ತಕ ಮುದ್ರಣ ವೇಗ ಬೆಳೆದಂತೆ ಮರು ಮುದ್ರಣ ಸಾಧ್ಯವಾಗುತ್ತಿದೆ ಎಂದು ಹೇಳಿದರು.

ಯುವಕರಲ್ಲಿ ಮೊಬೈಲ್ ಬಳಕೆ ಕಡಿಮೆಯಾಗಬೇಕು. ಕನ್ನಡ ಭಾಷೆ, ವೈಚಾರಿಕ ಬರಹ, ಸಾಹಿತಿಗಳ ಬದುಕು ಮತ್ತು ಬರವಣಿಗೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಮೇರು ಕವಿಗಳಾದ ಕಣವಿ ಮತ್ತು ಚಂಪಾ ಅವರ ಕವಿತೆ, ಕಾವ್ಯ, ವಿಮರ್ಶೆ ಮತ್ತು ಕಾದಂಬರಿಗಳನ್ನು ಉತ್ಸುಕರಾಗಿ ಓದಬೇಕು. ಪುಸ್ತಕ ಕೊಂಡು ಓದುವ ಸಂಸ್ಕೃತಿ ರೂಢಿಸಿಕೊಳ್ಳಬೇಕು. ಅಂದಾಗ ಮಾತ್ರ ಕನ್ನಡ ಭಾಷೆ ಮತ್ತು ಸಾಹಿತ್ಯ ಬೆಳೆಯಲು ಸಾಧ್ಯವಾಗುತ್ತದೆ. ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿ ಪುಸ್ತಕ ಪ್ರಾಧಿಕಾರದ ಮಳಿಗೆ ಸ್ಥಾಪನೆಗೆ ಅಗತ್ಯ ಸ್ಥಳವನ್ನು ನೀಡಲು ವಿಶ್ವವಿದ್ಯಾಲಯ ಸಿದ್ಧವಿದೆ. ಅದಕ್ಕೆ ಬೇಕಾದ ಎಲ್ಲಾ ರೀತಿಯ ಸೌಲಭ್ಯಗಳನ್ನು ಪ್ರಾಧಿಕಾರದ ಅಧ್ಯಕ್ಷರು ನೀಡಬೇಕು ಎಂದು ಕುಲಪತಿಗಳು ಮನವಿ ಮಾಡಿದರು.

ಗುಲ್ಬರ್ಗಾ ವಿಶ್ವವಿದ್ಯಾಲಯದ ಕಲಾ ನಿಕಾಯದ ಡೀನ್ ಹಾಗೂ ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕ ಪ್ರೊ. ಎಚ್.ಟಿ. ಪೋತೆ ಮುಖ್ಯ ಅತಿಥಿಯಾಗಿ ಮಾತನಾಡಿ, ಡಾ. ಬಿ ಆರ್ ಅಂಬೇಡ್ಕರ್ ಮಾತಿನಂತೆ ಎಲ್ಲರು ನಮ್ಮ ಕೈ ಬಿಟ್ಟರೂ ಪುಸ್ತಕಗಳು ನನ್ನ ಕೈ ಬಿಡಲಿಲ್ಲ. ಜಗತ್ತಿನಲ್ಲಿ ಅತಿ ಹೆಚ್ಚು ಪುಸ್ತಕ ಓದಿದವರು ಯಾರೆಂದು ನಡೆದ ಸಮೀಕ್ಷೆಯಲ್ಲಿ ಅತಿ ಹೆಚ್ಚಿನ ಪುಸ್ತಕಗಳನ್ನು ಓದಿದದವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಎಂಬುದನ್ನು ಜಾಗತಿಕ ತಜ್ಞರು ಒಪ್ಪಿದ್ದಾರೆ. ಡಾ.ಬಿ. ಆರ್. ಅಂಬೇಡ್ಕರ್ ಗ್ರಂಥಾಲಯದಲ್ಲಿ ಸುಮಾರು 50 ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಸಂಗ್ರಹಿಸಿದ್ದರು. ಅವರ ಸಾಧನೆ ಪ್ರತಿಯೊಬ್ಬ ವ್ಯಕ್ತಿಗೂ ಸ್ಫೂರ್ತಿಯಾಗಬೇಕು ಎಂದು ಹೇಳಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕನ್ನಡ ಕಟ್ಟಿದ ಮತ್ತು ಕನ್ನಡ ಸಾಹಿತ್ಯವನ್ನು ನದಿಯ ಹೊನಲಂತೆ ಹರಿಸಿದ ಕಣವಿ ಮತ್ತು ಚಂಪಾ ಅವರ ಸಾಹಿತ್ಯ ಪ್ರಜ್ಞೆ ಮತ್ತು ಸಾಂಸ್ಕೃತಿಕ ಪ್ರಜ್ಞೆಯನ್ನು ಈ ಕೃತಿಗಳ ಮೂಲಕ ಇಂದು ವಿಸ್ತಾರಗೊಂಡಿದೆ. ಹೃದಯ ಬೆಸೆಯುವ ಮತ್ತು ಸಹೃದಯ ಸಂಬಂಧಗಳು ಭಾಷೆ ಮತ್ತು ಸಾಹಿತ್ಯದಿಂದ ಬೆಳೆಯುತ್ತವೆ. ಬದುಕನ್ನು ಬದುಕುವಂತೆ ಕಲಿಸುವುದು ಕಲೆ ಅದ್ದರಿಂದ ಕಲೆ, ಸಾಹಿತ್ಯ, ಸಂಗೀತ ಮತ್ತು ಬಂಡಾಯ ಸಾಹಿತ್ಯ ಪ್ರತಿಯೊಬ್ಬರಿಗೂ ಜ್ಞಾನವನ್ನು ನೀಡುತ್ತವೆ ಎಂದು ಅಭಿಪ್ರಾಯಪಟ್ಟರು.

ಹಿರಿಯ ಸಾಹಿತಿಗಳು ಹಾಗೂ ಪ್ರೊ. ಚಂದ್ರಕಾಂತ ಪಾಟೀಲ್ ಸಮಗ್ರ ಸಾಹಿತ್ಯ ಸಂಪುಟಗಳನ್ನು ಸಂಪಾದಿಸಿರುವ ಪ್ರೊ. ಎಸ್. ಜಿ ಸಿದ್ದರಾಮಯ್ಯ ಅವರು ಮಾತನಾಡಿ, ಕನ್ನಡ ದಿಗ್ಗಜರ ಬರಹಗಳನ್ನು ಸಂಪುಟ ಕೆಲಸದಲ್ಲಿ ಭಾಗವಹಿಸಿರುವುದು ನನ್ನ ಸೌಭಾಗ್ಯ. ಚಂಪಾ ಅವರು ಕೇವಲ ಸಾಹಿತ್ಯದಲ್ಲಷ್ಟೇ ಬೆಳೆಯಲಿಲ್ಲ. ಇಂಗ್ಲೀಷ್ ಪ್ರಾಧ್ಯಾಪಕರಾಗಿ ಕನ್ನಡ ನಾಡು, ನುಡಿ, ಭಾಷೆ ಸಿದ್ಧಾಂತಗಳಂತೆ ಬದುಕಿದರು. ಸಂಕ್ರಮಣ ಪ್ರಕಾಶನ ಆರಂಭಿಸಿ ಸುಮಾರು ನಾಲ್ಕು ದಶಕಗಳ ಕಾಲ ಸಾಹಿತ್ಯ ಸುಧೆಯನ್ನು ಎಲ್ಲಡೆ ಪಸರಿಸುವಂತೆ ಮಾಡಿದರು. ದೇಶ ವಿದೇಶಗಳ ಬರಹಗಾರರು ಮತ್ತು ಓದುಗರ ಬರಹಗಳು ಸಾಹಿತ್ಯಕ ಮೌಲ್ಯಗಳನ್ನು ಬಿತ್ತರಿಸಿದರು. ಸಂಸ್ಕೃತಿ ಮತ್ತು ಸಾಹಿತ್ಯವನ್ನು ಗಟ್ಟಿಯಾಗಿ ನೆಲೆಸುವಂತೆ ಮಾಡಿದರು, ಸಮಕಾಲೀನ ಚಿಂತನೆ ಮತ್ತು ಸಾಹಿತ್ಯದ ಮೌಲಿಕ ಸಂಪುಟಗಳು ಇಂದು ಹೊರಬಂದಿವೆ. ಓದುವ ಮೂಲಕ ಸಾಹಿತ್ಯವನ್ನು ಬೆಳೆಸಬೇಕು ಎಂದು ಹೇಳಿದರು.

ಹಿರಿಯ ಸಾಹಿತಿಗಳಾದ ಡಾ. ಬಸವರಾಜ ಸಬರದ ಚೆನ್ನವೀರ ಕಣವಿ ಮತ್ತು ಪ್ರೊ.ಚಂದ್ರಕಾಂತ ಪಾಟೀಲ್ ಅವರ ಸಂಪುಟಗಳನ್ನು ಪರಿಚಯಿಸಿದರು. ಪ್ರೊ. ಎಸ್. ಜಿ ಸಿದ್ದರಾಮಯ್ಯ ಅವರು 25 ಶಾಲಾ ಕಾಲೇಜಿನ ಮುಖ್ಯಸ್ಥರಿಗೆ 15 ಸಾವಿರ ಮೌಲ್ಯದ ಚೆನ್ನವೀರ ಕಣವಿ, ಪ್ರೊ. ಚಂದ್ರಶೇಖರ್ ಪಾಟೀಲ್ ಅವರ ಕೃತಿಗಳನ್ನು ಒಳಗೊಂಡಂತೆ ಸಾಹಿತ್ಯ ಪುಸ್ತಕಗಳನ್ನು ವಿತರಿಸಿದರೆ, ಚೆನ್ನವೀರ ಕಣವಿ ಸಮಗ್ರ ಸಂಪುಟಗಳ ಸಂಪಾದಾಕರಾದ ಡಾ. ಜಿ. ಎಂ ಹೆಗಡೆಯವರು ಮನೆಗೊಂದು ಗ್ರಂಥಾಲಯ ಕಲಬುರಗಿ ಜಿಲ್ಲಾ ಜಾಗೃತಿ ಸಮಿತಿ ಸದಸ್ಯರಿಗೆ ಅರ್ಹತಾ ಪತ್ರವನ್ನು ವಿತರಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರ ವಿಶೇಷ ಅಧಿಕಾರಿ ಮತ್ತು ಆಡಳಿತ ಅಧಿಕಾರಿ ಕೆ. ಬಿ. ಕಿರಣಸಿಂಗ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ರಮೇಶ ಲಂಡನಕರ್, ಸಿಂಡಿಕೇಟ್ ಸದಸ್ಯ ಉದಯ ಬಿ. ಪಾಟೀಲ್, ಪ್ರೊ. ಚಂದ್ರಶೇಖರ್ ಪಾಟೀಲ್, ಸಮಗ್ರ ಸಾಹಿತ್ಯ ಸಂಪುಟಗಳ ಸಹ ಸಂಪಾದಕ ಡಾ. ಮಂಜುನಾಥ ಟಿ, ಸಮಗ್ರ ಸಾಹಿತ್ಯ ಸಂಪುಟಗಳ ಹಕ್ಕುದಾರರಾದ ನೀಲಾ ಪಾಟೀಲ್, ಚೆನ್ನವೀರ ಕಣವಿ ಸಮಗ್ರ ಸಾಹಿತ್ಯ ಸಂಪುಟಗಳ ಹಕ್ಕುದಾರರಾದ ಪ್ರಿಯದರ್ಶಿ ಕಣವಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಖ್ಯಾತ ಬರಹಗಾರರು, ಸಾಹಿತಿಗಳು, ಲೇಖಕರು, ಪ್ರಕಾಶಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಹಿರಿಯ ಪತ್ರಕರ್ತರು, ಅತಿಥಿ ಉಪನ್ಯಾಸಕರು, ನಗರದ ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X