ಜೂ.28 ರಂದು ಅಫಜಲಪುರದಲ್ಲಿ ಕಾನೂನು ಅರಿವು ಕಾರ್ಯಕ್ರಮ
ಕಲಬುರಗಿ: ಅಫಜಲಪುರ ತಾಲೂಕಾಡಳಿತ, ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ನ್ಯಾಯವಾದಿಗಳ ಸಂಘ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಸಂಸ್ಕಾರ ಪ್ರತಿಷ್ಠಾನ, ಮಾರ್ಗದರ್ಶಿ ಸಂಸ್ಥೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಜೂ.28 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಅಫಜಲಪುರ ತಾಲೂಕು ನ್ಯಾಯಾಲಯ ಆವರಣದಲ್ಲಿ ಕಾನೂನು ಅರಿವು ಕಾರ್ಯಕ್ರಮನ್ನು ಹಮ್ಮಿಕೊಳ್ಳಲಾಗಿದೆ.
ಅಫಜಲಪುರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷ ವಿನಾಯಕ ಮಾಯಣ್ಣವರ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ತಹಶೀಲ್ದಾರ್ ಸಂಜೀವಕುಮಾರ್ ದಾಸರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅನೀಲ ಅಮಾತೆ, ಸರ್ಕಾರಿ ಸಹಾಯಕ ಅಭಿಯೋಜಕರು ಮತ್ತು ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯನಿರ್ವಾಹಕ ಕಾರ್ಯದರ್ಶಿ ಜಯಶ್ರೀ ಪಿ., ತಾಲೂಕು ನ್ಯಾಯವಾದಿ ಸಂಘದ ಅಧ್ಯಕ್ಷ ಎಸ್.ಎಸ್. ಪಾಟೀಲ್, ಪೊಲೀಸ್ ಇಲಾಖೆಯ ಸೋಮಲಿಂಗ ವಡೆಯರ್, ಕ್ಷೇತ್ರ ಶಿಕ್ಷಣಾಧಿಕಾರಿ ಯುವರಾಜ ಗಾಡಿ, ಕಲಬುರಗಿ 2ನೇ ವೃತ್ತದ ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರಕುಮಾರ್ ಬಲ್ಲೂರ್, ಮಾರ್ಗದರ್ಶಿ ಸಂಸ್ಥೆಯ ನಿರ್ದೇಶಕ ಆನಂದರಾಜ, ಸಂಸ್ಕಾರ ಪ್ರತಿಷ್ಠಾನ ಸಂಸ್ಥೆಯ ನಿರ್ದೇಶಕ ವಿಠ್ಠಲ ಚಿಕಣಿ, ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಹೆಚ್.ಎಸ್. ಪಾಟೀಲ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.







