ಯುವ ಸಮೂಹ ಉದ್ಯೋಗ ಮೇಳಗಳ ಪ್ರಯೋಜನ ಪಡೆದುಕೊಳ್ಳಲಿ: ಬಿ.ವೈ. ವಿಜಯೇಂದ್ರ

ಕಲಬುರಗಿ: ಯುವ ಸಮೂಹ ಉದ್ಯೋಗ ಮೇಳಗಳ ಸದುಪಯೋಗ ಪಡೆದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಕಲಬುರ್ಗಿಯಲ್ಲಿ ಇಂದು ಪಕ್ಷದ ನಗರ ಜಿಲ್ಲಾಧ್ಯಕ್ಷ ಚಂದು ಪಾಟೀಲ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ 75@ಉದ್ಯೋಗ ಮಹೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ಅವರು ದೇಶದಲ್ಲಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಮಹತ್ವದ ಗುರಿ ತಲುಪಿ ಮುನ್ನಡೆಯುತ್ತಿದ್ದಾರೆ. ಯುವಕರು ಉದ್ಯೋಗದಾತರಾಗಬೇಕೆಂದು ಹಲವು ಯೋಜನೆಗಳು ಹಾಗೂ ವಿಫುಲ ಅವಕಾಶಗಳನ್ನು ಕಲ್ಪಿಸಿದ್ದಾರೆ, ನಮ್ಮ ಯುವ ಸಮುದಾಯ ಸದುಪಯೋಗ ಪಡಿಸಿಕೊಂಡು ರಾಷ್ಟ್ರಕ್ಕೆ ಕೊಡುಗೆ ನೀಡಬೇಕೆಂಬ ಕರೆ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ನಿರುದ್ಯೋಗಿ ಯುವ ಸಮೂಹಕ್ಕೆ ಉದ್ಯೋಗ ನೀಡುವ ಮಹತ್ವದ ಉದ್ದೇಶದಿಂದ ಆಯೋಜಿಸಿರುವ ಇಂದಿನ ಉದ್ಯೋಗ ಮೇಳ ಹೆಚ್ಚಿನ ಉದ್ಯೋಗ ಅವಕಾಶ ಒದಗಿಸುವ ನಿಟ್ಟಿನಲ್ಲಿ ಯಶಸ್ವಿಯಾಗಲೆಂದು ಶುಭ ಹಾರೈಸಿದರು.
ಡಾ.ರಾಜಶೇಖರ ಶಿವಾಚಾರ್ಯ ಶ್ರೀಗಳು, ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಬಸವರಾಜ ಮತ್ತಿಮಡು, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಶಾಸಕ ಡಾ ಅವಿನಾಶ್ ಜಾದವ್, ಮಾಜಿ ಸಚಿವ ಬಾಬುರಾವ್ ಚೌಹಾಣ್, ಕಲ್ಬುರ್ಗಿ ಗ್ರಾಮೀಣ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಮಾಜಿ ಶಾಸಕರಾದ ಅಮರನಾಥ್ ಪಾಟೀಲ್, ದತ್ತಾತ್ರೇಯ ಪಾಟೀಲ್ ರೇವೂರ್, ಮುಖಂಡ ಶಿವರಾಜ್ ಪಾಟೀಲ್ ರದ್ದೇವಾಡಿ, ಕೈಲಾಸ್ ಬಿ.ಪಾಟೀಲ್, ನಿತಿನ್ ಗುತ್ತೇದಾರ್, ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







