Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮನೆಗಳಲ್ಲಿ ಗ್ರಂಥಾಲಯವಿರಲಿ: ನಿರಗುಡಿ

ಮನೆಗಳಲ್ಲಿ ಗ್ರಂಥಾಲಯವಿರಲಿ: ನಿರಗುಡಿ

ವಾರ್ತಾಭಾರತಿವಾರ್ತಾಭಾರತಿ28 Oct 2026 11:39 AM IST
share
ಮನೆಗಳಲ್ಲಿ ಗ್ರಂಥಾಲಯವಿರಲಿ: ನಿರಗುಡಿ

ಕಲಬುರಗಿ : ಇಂದಿನ ಡಿಜಿಟಲ್ ಯುಗದಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವುದು ಅತ್ಯಗತ್ಯ. ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯ ಸ್ಥಾಪಿಸುವ ಮೂಲಕ ಮಕ್ಕಳಲ್ಲಿ ಓದುವ ಅಭಿರುಚಿ ಬೆಳೆಸಿ, ಜ್ಞಾನವಂತ, ವಿಚಾರವಂತ ಹಾಗೂ ಸಂಸ್ಕಾರಯುತ ಸಮಾಜ ನಿರ್ಮಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಬಿ. ಎಚ್. ನಿರಗುಡಿ ಹೇಳಿದರು.

ಕರ್ನಾಟಕ ಸರ್ಕಾರದ ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಹಾಗೂ ಜಿಲ್ಲಾ ಜಾಗೃತ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ನಗರದ ವಿವೇಕಾನಂದ ನಗರ, ಆಳಂದ ರಸ್ತೆಯಲ್ಲಿರುವ ಸಾಹಿತಿ ಹಾಗೂ ಪ್ರಾಧ್ಯಾಪಕ ಡಾ. ಶರಬಯ್ಯ ಸ್ವಾಮಿ ಅವರ ನಿವಾಸದಲ್ಲಿ ಆಯೋಜಿಸಿದ್ದ ‘ಮನೆಗೊಂದು ಗ್ರಂಥಾಲಯ’ ಅನುಷ್ಠಾನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಾ, ಮನೆಯಲ್ಲಿನ ದೇವರ ಕೋಣೆ ಹಾಗೂ ಮಲಗುವ ಕೋಣೆಗೆ ನೀಡುವಷ್ಟೇ ಮಹತ್ವವನ್ನು ಪುಸ್ತಕ ಕೋಣೆ ಅಥವಾ ಗ್ರಂಥಾಲಯಕ್ಕೂ ನೀಡಬೇಕು. ಪ್ರತ್ಯೇಕ ವಾಚನ ಸ್ಥಳವಿದ್ದರೆ ಕುಟುಂಬದ ಸದಸ್ಯರಲ್ಲಿ ಓದುವ ಹವ್ಯಾಸ ಬೆಳೆಸಲು ಹಾಗೂ ಮಕ್ಕಳಿಗೆ ಉತ್ತಮ ಓದುವ ವಾತಾವರಣ ಕಲ್ಪಿಸಲು ಸಾಧ್ಯ. ಪುಸ್ತಕಗಳು ಜ್ಞಾನ ನೀಡುವುದಷ್ಟೇ ಅಲ್ಲದೆ, ವ್ಯಕ್ತಿಯ ಆಲೋಚನೆ, ನಡವಳಿಕೆ ಮತ್ತು ಜೀವನದ ದೃಷ್ಟಿಕೋನವನ್ನು ರೂಪಿಸುತ್ತವೆ ಎಂದು ಹೇಳಿದರು.

ಮಕ್ಕಳು ಪಠ್ಯಪುಸ್ತಕಗಳ ಜೊತೆಗೆ ಕಥೆ, ಕಾದಂಬರಿ, ಜೀವನಚರಿತ್ರೆ, ಇತಿಹಾಸ, ವಿಜ್ಞಾನ ಹಾಗೂ ಸಾಹಿತ್ಯ ಕೃತಿಗಳನ್ನು ಓದಬೇಕು. ಇದರಿಂದ ಸೃಜನಶೀಲತೆ, ವಿಮರ್ಶಾತ್ಮಕ ಚಿಂತನೆ, ಭಾಷಾ ಕೌಶಲ್ಯ ಮತ್ತು ಆತ್ಮವಿಶ್ವಾಸ ವೃದ್ಧಿಯಾಗುತ್ತವೆ. ಮನೆಮನೆಗಳಲ್ಲಿ ಗ್ರಂಥಾಲಯ ಸ್ಥಾಪಿಸುವ ಮೂಲಕ ಓದುವ ಸಂಸ್ಕೃತಿಯನ್ನು ಬಲಪಡಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಸೇಡಂ ತಾಲೂಕು ಉಪಕಾರಾಗೃಹದ ಹೆಡ್ ವಾರ್ಡರ್ ಶ್ರೀಕಾಂತ ರಂಜೇರಿ, ಕಲಬುರಗಿಯ ಭೂಮಾಪಕ ಶ್ರೀ ನಿಜಲಿಂಗಪ್ಪ ನಿಗಡಿ ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಯಕ್ರಮದ ಆರಂಭದಲ್ಲಿ ಸಾಹಿತಿ ಹಾಗೂ ಪ್ರಾಧ್ಯಾಪಕ ಡಾ. ಶರಬಯ್ಯ ಸ್ವಾಮಿ ಅವರು ಅತಿಥಿಗಳನ್ನು ಸ್ವಾಗತಿಸಿದರು.

ಇದೇ ಸಂದರ್ಭದಲ್ಲಿ ಸಾಹಿತಿ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ. ಶರಬಯ್ಯ ಸ್ವಾಮಿ ಮತ್ತು ಅವರ ಪತ್ನಿ, ಸಹ ಶಿಕ್ಷಕಿ ಶ್ರೀಮತಿ ಸಂಗೀತಾ ಹಿರೇಮಠ್ ಅವರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಅಭಿನಂದನಾ ಪತ್ರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದ ನಿರೂಪಣೆಯನ್ನು ಪ್ರೌಢಶಾಲಾ ಶಿಕ್ಷಕರಾದ ಶ್ರೀ ತುಕಾರಾಂ ಗೌಳಿ ಹಾಗೂ ಶ್ರೀ ಶಿವಶರಣಪ್ಪ ಉದನೂರು ನಿರ್ವಹಿಸಿದರು.

ಈ ಸಂದರ್ಭದಲ್ಲಿ ಶ್ರೀ ಅಣವೀರಪ್ಪ ಯಾಕಾಪುರ, ಶ್ರೀ ರಾಜು ನೆಲೋಗಿ, ಶ್ರೀ ವಿಶ್ವನಾಥ ಕಂದಗುಳಿ, ಶ್ರೀ ರಾಜಶೇಖರ್ ಬಿ. ಜವಳಿ, ಶ್ರೀ ಚಂದ್ರಶೇಖರ್ ಕಲಶೆಟ್ಟಿ, ಶ್ರೀ ಚಂದ್ರಕಾಂತ ಪೂಜಾರಿ, ಶ್ರೀ ವಿವೇಕಾನಂದ ಹಾಗೂ ಶ್ರೀ ಮಹಾಂತೇಶ್ ದುತ್ತರಗಾವ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಸ್ಥಳೀಯ ಶ್ರೀ ಸಿದ್ಧಿ ವಿನಾಯಕ ಗೆಳೆಯರ ಬಳಗದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X