ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಮೇಲೆ ಲೋಕಾಯುಕ್ತ ದಾಳಿ

ಕಲಬುರಗಿ: ಗುಲ್ಬರ್ಗಾ ವಿಶ್ವವಿದ್ಯಾನಿಲಯದ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ್ದಾರೆ.
ವಿದ್ಯಾರ್ಥಿಗಳಿಗೆ ಅಂಕಪಟ್ಟಿ ವಿಳಂಬ, ನಕಲಿ ಪದವಿ ಪ್ರಮಾಣ ಪತ್ರ, ಅಂಕಪಟ್ಟಿ ಮತ್ತು ಲಂಚದ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳ ಐದು ತಂಡಗಳು ಏಕಕಾಲಕ್ಕೆ ದಾಳಿ ನಡೆಸಿವೆ.
ಲೋಕಾಯುಕ್ತ ಎಸ್ಪಿ ಉಮೇಶ್ ನೇತೃತ್ವದಲ್ಲಿ ಡಿವೈಎಸ್ಪಿ ಗೀತಾ ಬೇನಾಳ, ಡಿವೈಎಸ್ಪಿ ಹನುಮಂತ್ ರಾಯ, ಇನ್ ಸ್ಪೆಕ್ಟರ್ ಸಂತೋಷ್, ಅರುಣ್ ಕುಮಾರ್, ಸಿದ್ದರಾಯ ರಾಜಶೇಖರ್ ಹಾಗೂ ಪೊಲೀಸ್ ಸಿಬ್ಬಂದಿಯಾದ ಬಸವರಾಜ್, ಪ್ರದೀಪ್ ಕುಮಾರ್, ರೇಣುಕಾ, ಜಯಶ್ರೀ, ಮಸೂದ್, ಗುಂಡುರಾವ್ ಸಿಬ್ಬಂದಿ ಈ ದಾಳಿ ನಡೆಸಿದೆ.
ಲೋಕಾಯುಕ್ತ ಅಧಿಕಾರಿಗಳು ವಿಶ್ವವಿದ್ಯಾನಿಲಯದ ಹಾಜರಿ ಪುಸ್ತಕ, ಚಲನವಲನ ರಿಜಿಸ್ಟರ್, ಕ್ಯಾಸಿಸ್ಟರ್, ಸಿಸಿಟಿವಿ ಕ್ಯಾಮರಾ ಸೇರಿದಂತೆ ಹಲವು ರೀತಿಯಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
Next Story





