ಆರೋಗ್ಯ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಬೀದರ್ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ಸುನಿಲ್ ಕುಮಾರ್ ಚಂದ್ರಪ್ರಭಾ ಅವರ ಮನೆ ಹಾಗೂ ಕಚೇರಿ ಮೇಲೆ ಇಂದು (ಬುಧವಾರ) ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸುನಿಲಕುಮಾರ್ ಚಂದ್ರಪ್ರಭಾ ಅವರು ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ್ (ಬಿ) ಗ್ರಾಮದವರಾಗಿದ್ದು, ಕಲಬುರಗಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೀದರ್ ನಲ್ಲಿದ್ದ ಅವರ ಮನೆ ಹಾಗೂ ಕಲಬುರಗಿಯ ಅವರ ಕಚೇರಿ ಮೇಲೆ ಲೋಕಾಯುಕ್ತ ದಾಳಿಯಾಗಿದ್ದು, ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ದಾಳಿಯ ಸಂದರ್ಭದಲ್ಲಿ ಏನೇನು ಪತ್ತೆಯಾಗಿದೆ ಎನ್ನುವುದು ಇನ್ನು ಮಾಹಿತಿ ಸಿಕ್ಕಿಲ್ಲ.
Next Story





