ಕಲಬುರಗಿ | ಯಾದಗಿರಿಯ ಶಹಾಪುರ ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಶಹಾಪುರ ತಹಶೀಲ್ದಾರ್ ಉಮಾಕಾಂತ ಹಳ್ಳೆ
ಕಲಬುರಗಿ: ನಗರದ ಅಕ್ಕಮಹಾದೇವಿ ಬಡಾವಣೆಯಲ್ಲಿರುವ ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್ ಉಮಾಕಾಂತ ಹಳ್ಳೆಯವರ ಮನೆ ಮೇಲೆ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದೆ.
ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದ ಹಿನ್ನೆಲೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಯಾದಗಿರಿ ಜಿಲ್ಲೆಯ ಶಹಾಪುರ ತಹಶೀಲ್ದಾರ್ ಕಚೇರಿ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಲಾಗಿದೆ.
ಲೋಕಾಯುಕ್ತ ಡಿವೈಎಸ್ಪಿ ಜೆ.ಎಚ್.ಇನಾಂದಾರ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಇನ್ ಸ್ಪೆಕ್ಟರ್ ಗಳಾದ ಸಿದ್ದರಾಯ, ಸಂಗಮೇಶ, ಅರ್ಜುನಪ್ಪ, ಅಕ್ಕಮಹಾದೇವಿ, ಬಾಬಾ ಸಾಹೇಬ ಪಾಟೀಲ್ ತಂಡದಲ್ಲಿದ್ದರು.
Next Story