Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮದಗುಣಕಿ: ಗುರುಪೂರ್ಣಿಮಾ ಮಹೋತ್ಸವ,...

ಮದಗುಣಕಿ: ಗುರುಪೂರ್ಣಿಮಾ ಮಹೋತ್ಸವ, ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ30 July 2026 8:10 PM IST
share
ಮದಗುಣಕಿ: ಗುರುಪೂರ್ಣಿಮಾ ಮಹೋತ್ಸವ, ಪುಸ್ತಕ ಬಿಡುಗಡೆ

ಆಳಂದ: ತಾಲೂಕಿನ ಮದಗುಣಕಿ ಗ್ರಾಮದ ಶ್ರೀ ಶಿವಲಿಂಗೇಶ್ವರ ವಿರಕ್ತ ಮಠದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ಮಾದನಹಿಪ್ಪರಗಾ ಹಾಗೂ ಶಾಖಾ ಮಠ ಮದಗುಣಕಿ ಮಠದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳಿಗೆ ಭಕ್ತಾದಿಗಳು ನೆರವೇರಿಸಿದ ಗುರುವಂದನೆ, ಪ್ರವಚನ ಹಾಗೂ ಮದಗುಣಕಿ ಇತಿಹಾಸ ಪುಸ್ತಕ ಬಿಡುಗಡೆ ಸಮಾರಂಭ ಜರುಗಿತು.

ಶ್ರೀ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ಶಿವಲಿಂಗ ಮಹಾಸ್ವಾಮಿಗಳವರಿಗೆ ಸದ್ಭಕ್ತರಿಂದ 'ಗುರುವಂದನಾ' ಕಾರ್ಯಕ್ರಮವನ್ನು ಭಕ್ತಿಪೂರ್ವಕವಾಗಿ ನೆರವೇರಿಸಲಾಯಿತು.

ಆರಂಭದಲ್ಲಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಕುಂಭಮೇಳದೊoದಿಗೆ ಶ್ರೀ ಶಿವಲಿಂಗೇಶ್ವರ ವಿರಕ್ತ ಮಠದವರೆಗೆ ನಡೆದ ಅದ್ಧೂರಿ ಮೆರವಣಿಗೆಯು ಭಕ್ತರ ಕಣ್ಮನ ಸೆಳೆಯಿತು.

ನಂತರ ‘ಗುರು ಕರುಣೆ’ ಪ್ರವಚನ ಕಾರ್ಯಕ್ರಮದಲ್ಲಿ ಗದುಗಿನ ನೂರೊಂದಯ್ಯ ಶಾಸ್ತ್ರಿ ಪ್ರವಚನ ನಡೆಸಿಕೊಟ್ಟರು. ಗವಾಯಿ ಅಪ್ಪಾಸಾಹೇಬ ಆರ್. ಪಾಟೀಲ, ಗುರುಶಾಂತ ಕುಂಬಾರಗೆ ಗಾಯನಕ್ಕೆ ಮಲ್ಲಯ್ಯಾ ಸ್ವಾಮಿ ತಬಲಾ ಸಾಥ್ ನೀಡಿದರು.

ಶಿಕ್ಷಕರಾದ ಅಂಬಾರಾಯ ಮಡ್ಡೆ ಮತ್ತು ಶಿವರಾಜ ಸಣಮನಿ ಅವರು ರಚಿಸಿರುವ 'ಮದಗುಣಕಿ ಗ್ರಾಮದ ಸಮಗ್ರ ಐತಿಹಾಸಿಕ ಮತ್ತು ಸಾಂಸ್ಕೃತಿಕ ದರ್ಶನ' ಎಂಬ ಮೌಲ್ಯಯುತ ಕೃತಿಯನ್ನು ಶ್ರೀಗಳು ಗಣ್ಯರ ಸಮ್ಮುಖದಲ್ಲಿ ಲೋಕಾರ್ಪಣೆ ಮಾಡಿದರು.

ಕಾರ್ಯಕ್ರಮದಲ್ಲಿ ಶರಣಿ ಶಿವದೇವಿ ತಾಯಿ ಸಮ್ಮುಖ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಪುಸ್ತಕ ಪ್ರಕಾಶನ ದಾನಿಗಳಾದ ರಾಜಶೇಖರ ಅಣ್ಣಾರಾಯ ಸಣಮನಿ, ಮಹೇಶ ನಾಗೇಂದ್ರಪ್ಪ ಪಾಟೀಲ ಸನ್ಮಾನಿಸಲಾಯಿತು.

ಗ್ರಾಮದ ಮಾಣಿಕ ಎಸ್. ಬರೂಡೆ ಅವರಿಂದ ಪುಷ್ಪ ಸೇವೆ ಹಾಗೂ ರಾಜಕುಮಾರ ಭಜಂತ್ರಿ ಅವರಿಂದ ನೆನಪಿನ ಕಾಣಿಕೆ ಸೇವೆ, ಭೀಮಸೇನ ಆಳಂದ ಪರಿವಾರದವರು ಶ್ರೀಗಳ ಪಾದಪೂಜೆ ಸೇವೆ ನೆರವೇರಿಸಿ, ಆಗಮಿಸಿದ ಭಕ್ತಾದಿಗಳಿಗೆ ಅನ್ನದಾಸೋಹದ ವ್ಯವಸ್ಥೆ ಕಲ್ಪಿಸಿದ್ದರು.

ಮದಗುಣಕಿಯ ಶಿವಲಿಂಗೇಶ್ವರ ವಿರಕ್ತ ಮಠದ ಸದ್ಭಕ್ತ ಮಂಡಳಿಯು ಈ ಸಂಪೂರ್ಣ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿತ್ತು. ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತಾದಿಗಳು ಗುರುಬೋಧೆ-ದರ್ಶನ-ಆಶೀರ್ವಾದ ಪಡೆದು ಕೃತಾರ್ಥರಾದರು. ಮಹಾಂತೇಶ ಸಣಮನಿ ನಿರೂಪಿಸಿದರು.

Tags

MadagunakiGuru Purnima
share
ವಾರ್ತಾಭಾರತಿ
ವಾರ್ತಾಭಾರತಿ
Next Story
X