ಮೂರನೇ ಬಾರಿ ವಿಧಾನ ಪರಿಷತ್ ಪ್ರವೇಶಿಸಿದ ತಿಪ್ಪಣ್ಣಪ್ಪ ಕಮಕನೂರಿಗೆ ಮಹಿಳಾ ಕಾಂಗ್ರೆಸ್ ಅಭಿನಂದನೆ

ಅಫಜಲಪುರ: ಕರ್ನಾಟಕ ವಿಧಾನ ಪರಿಷತ್‌ಗೆ ಮೂರನೇ ಬಾರಿಗೆ ಆಯ್ಕೆಯಾಗಿರುವ ತಿಪ್ಪಣ್ಣಪ್ಪ ಕಮಕನೂರ ಅವರನ್ನು ಅಫಜಲಪುರ ತಾಲೂಕು ಮಹಿಳಾ ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದಿಸಿ ಸನ್ಮಾನಿಸಲಾಯಿತು.
ಕಲಬುರಗಿ ನಗರದಲ್ಲಿರುವ ಕಮಕನೂರ ಅವರ ನಿವಾಸಕ್ಕೆ ಭೇಟಿ ನೀಡಿದ ಅಫಜಲಪುರ ತಾಲೂಕು ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಗಾಣೂರು ನೇತೃತ್ವದ ತಂಡ, ಕಲಬುರಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗೆ ಅವರ ಉಪಸ್ಥಿತಿಯಲ್ಲಿ ತಿಪ್ಪಣ್ಣಪ್ಪ ಕಮಕನೂರ ಅವರಿಗೆ ಭಾವಚಿತ್ರ ನೀಡಿ ಶುಭಾಶಯ ಕೋರಿತು.
ಈ ಸಂದರ್ಭದಲ್ಲಿ ಮಾತನಾಡಿದ ಮಂಜುಳಾ ಗಾಣೂರು, ತಿಪ್ಪಣ್ಣಪ್ಪ ಕಮಕನೂರ ಅವರು ಹಲವು ವರ್ಷಗಳಿಂದ ಪಕ್ಷ ಸಂಘಟನೆ, ಜನಸೇವೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ನಿರಂತರ ಪರಿಶ್ರಮ, ಜನಪರ ಕಾಳಜಿ ಮತ್ತು ಕಾರ್ಯಕರ್ತರೊಂದಿಗೆ ಹೊಂದಿರುವ ಆತ್ಮೀಯ ಬಾಂಧವ್ಯವೇ ಈ ಐತಿಹಾಸಿಕ ಗೆಲುವಿಗೆ ಕಾರಣವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ರೇಣುಕಾ ಸಿಂಗೆ, ಸಂಗೀತಾ ಪಾಟೀಲ್, ಜಯಶ್ರೀ ಸಿದ್ದು ತಳವಾರ ಸೇರಿದಂತೆ ಮಹಿಳಾ ಕಾಂಗ್ರೆಸ್‌ನ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






