Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ...

ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಖಂಡನೀಯ: ಮಾಜಿ ಸಂಸದ ಡಾ.ಉಮೇಶ್ ಜಾಧವ್

ವಾರ್ತಾಭಾರತಿವಾರ್ತಾಭಾರತಿ24 Aug 2026 7:56 PM IST
share
ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ಖಂಡನೀಯ: ಮಾಜಿ ಸಂಸದ ಡಾ.ಉಮೇಶ್ ಜಾಧವ್

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆನ್‌ಜಿ ಯುವಕರು ಅಟ್ಟಾಡಿಸಿ ಹೊಡೆಯುತ್ತಾರೆ ಎಂಬುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆ ಯುವಕರನ್ನು ಪ್ರಚೋದಿಸುವಂತಿದ್ದು, ಖಂಡನೀಯ ಎಂದು ಮಾಜಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್ ಆರೋಪಿಸಿದರು.

ಚಿತ್ತಾಪುರ ತಾಲೂಕಿನ ವಾಡಿಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಖರ್ಗೆ ಅವರು ಪ್ರಧಾನಿ ಹಾಗೂ ಗೃಹ ಸಚಿವರ ಕುರಿತು ಪ್ರಚೋದನಾತ್ಮಕ ಹೇಳಿಕೆ ನೀಡಿದ್ದಾರೆ. ಹಿರಿಯ ರಾಜಕಾರಣಿಯಾಗಿ ಇಂತಹ ಹೇಳಿಕೆ ನೀಡುವುದು ಅವರ ಘನತೆಗೆ ತಕ್ಕದ್ದಲ್ಲ ಎಂದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕವಾಗಿ ಮಾತನಾಡುವಾಗ ಸಂಯಮ ಕಾಯ್ದುಕೊಳ್ಳಬೇಕು. ಯುವಕರಿಗೆ ಸಂಘರ್ಷದ ಸಂದೇಶ ನೀಡುವಂತಹ ಹೇಳಿಕೆಗಳನ್ನು ನೀಡಬಾರದು. ಖರ್ಗೆ ಅವರು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ಜಾಧವ್ ಒತ್ತಾಯಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತದ ಸ್ಥಾನವನ್ನು ಬಲಪಡಿಸುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಕೈಗೊಂಡಿದ್ದಾರೆ. ಅಮಿತ್ ಶಾ ಅವರು ಭಯೋತ್ಪಾದನೆ ನಿರ್ಮೂಲನೆ ಸೇರಿದಂತೆ ದೇಶದ ಭದ್ರತೆಗೆ ಸಂಬಂಧಿಸಿದ ಹಲವು ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿದ್ದಾರೆ. ಇಂತಹ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಅವರು ಹೇಳಿದರು.

ಇದೇ ವೇಳೆ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ವಿಚಾರವನ್ನೂ ಪ್ರಸ್ತಾಪಿಸಿದ ಜಾಧವ್, ಕ್ಷೇತ್ರದಲ್ಲಿ ಸಮರ್ಪಕ ರಸ್ತೆಗಳಿಲ್ಲದೆ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಗಣಿಗಾರಿಕೆ ಚಟುವಟಿಕೆಗಳು ಸ್ಥಗಿತಗೊಂಡಿರುವುದರಿಂದ ಉದ್ಯೋಗಾವಕಾಶಗಳ ಕೊರತೆಯಿದ್ದು, ಜನರು ಉದ್ಯೋಗಕ್ಕಾಗಿ ವಲಸೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು.

ಚಿತ್ತಾಪುರ ಕ್ಷೇತ್ರದ ಶಾಸಕರು ಕ್ಷೇತ್ರದ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಾಸಕ ಪ್ರಿಯಾಂಕ್ ಖರ್ಗೆ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಖುದ್ದಾಗಿ ಆಲಿಸಿ ಪರಿಹಾರ ಕಲ್ಪಿಸಬೇಕು ಎಂದು ಡಾ. ಉಮೇಶ್ ಜಾಧವ್ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ,ಜಿಲ್ಲಾ ಎಸ್ ಸಿ. ಮೋರ್ಚಾ ಉಪಾಧ್ಯಕ್ಷ ರಾಜು ಮುಕ್ಕಣ್ಣ, ಪುರಸಭೆ ಮಾಜಿ ಅಧ್ಯಕ್ಷ ಭಗವತ್ ಸುಳೆ, ಯುವ ಮುಖಂಡ ವಿಠಲ ವಾಲ್ಮೀಕ ನಾಯಕ, ಯುವ ಮೋರ್ಚಾ ಅಧ್ಯಕ್ಷ ಭಾಗಣ್ಣ ದೊರೆ, ಮುಖಂಡರಾದ ಅಶೋಕ ಪವಾರ, ರವಿಕುಮಾರ ರಾಠೋಡ ಮಳಖೇಡ, ರಿಚರ್ಡ್ ಮಾರೆಡ್ಡಿ, ವಿನೋದ ಚವ್ಹಾಣ ಯಾಗಾಪುರ, ಮಲ್ಲಿಕಾರ್ಜುನ ಸಾತಖೇಡ ಮತ್ತಿತರರು ಇದ್ದರು.

Tags

Dr.Umesh JadhavMallikarjun Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X