ಕಲಬುರಗಿ | ಆರೆಸ್ಸೆಸ್, ಸಾವರ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಆರೋಪ: ಪ್ರಕರಣ ದಾಖಲು

ಕಲಬುರಗಿ: ಆರೆಸ್ಸೆಸ್ ಮತ್ತು ಸಾವರ್ಕರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪದಲ್ಲಿ ವ್ಯಕ್ತಿಯೊಬ್ಬರ ವಿರುದ್ಧ ನಗರದ ರಾಘವೇಂದ್ರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕುಸನೂರ ರಸ್ತೆಯ ಪೂಜಾ ಕಾಲೋನಿಯ ನಿವಾಸಿ ಸಾಗರ ರಾಠೋಡ್ ಸಲ್ಲಿಸಿದ ದೂರಿನ ಮೇರೆಗೆ ಮಹಮ್ಮದ್ ವಾಜೀದ್ ಅಹ್ಮದ್ ಎಂಬ ಸಾಮಾಜಿಕ ಜಾಲತಾಣ ಖಾತೆಯ ವಿರುದ್ಧ ಪ್ರಕರಣ ದಾಖಲಾಗಿದೆ.
ಸನಾತನ ಧರ್ಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಾರಿಯಾಗಿ ಬರೆದು ಕೋಮು ಸೌಹಾರ್ದತೆಗೆ ಧಕ್ಕೆ ತಂದಿರುತ್ತಾನೆ, ಕೂಡಲೇ ಆತನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಒತ್ತಾಯಿಸಲಾಗಿದೆ.
Next Story





