Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ...

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ ದುರ್ಬಳಕೆ ಆರೋಪ; ಕಾಂಗ್ರೆಸ್ ಮುಖಂಡನ 5.87 ಕೋಟಿ ರೂ. ಆಸ್ತಿ ಜಪ್ತಿ ಮಾಡಿಕೊಂಡ ಈಡಿ

ವಾರ್ತಾಭಾರತಿವಾರ್ತಾಭಾರತಿ23 July 2025 6:52 PM IST
share
ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ ದುರ್ಬಳಕೆ ಆರೋಪ; ಕಾಂಗ್ರೆಸ್ ಮುಖಂಡನ 5.87 ಕೋಟಿ ರೂ. ಆಸ್ತಿ ಜಪ್ತಿ ಮಾಡಿಕೊಂಡ ಈಡಿ

ಕಲಬುರಗಿ: ಹೈದರಾಬಾದ್ ಶಿಕ್ಷಣ ಸಂಸ್ಥೆಯ (ಎಚ್‌ಕೆಇ) ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ (ಎಂಆರ್‌ಎಂಸಿ) ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನವನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಭೀಮಾಶಂಕರ ಬಿಲಗುಂದಿ ಅವರ 5.87 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯವು (ಈಡಿ) ಪಿಎಂಎಲ್‌ಎ ನಿಬಂಧನೆಗಳ ಅಡಿಯಲ್ಲಿ ಜಪ್ತಿ ಮಾಡಿಕೊಂಡಿದೆ.

ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನ ದುರ್ಬಳಕೆ ಆರೋಪದಡಿ ನಗರದ 'ಸೆನ್' ಠಾಣೆಯಲ್ಲಿ ಭೀಮಾಶಂಕರ ಬಿಲಗುಂದಿ, ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ಎಂ.ಪಾಟೀಲ, ಕಾಲೇಜಿನ ಅಕೌಂಟೆಂಟ್ ಸುಭಾಷ ಜಗನ್ನಾಥ ಮತ್ತು ಕೆನರಾ ಬ್ಯಾಂಕ್ ಎಂಆರ್‌ಎಂಸಿ ಶಾಖೆಯ ವ್ಯವಸ್ಥಾಪಕರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ 2025ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ದಾಳಿ ಮಾಡಿದ್ದ ಈಡಿ ಅಧಿಕಾರಿಗಳು, ಹಲವೆಡೆ ಶೋಧಕಾರ್ಯ ನಡೆಸಿದ್ದರು. ಆರೋಪಿಗಳ ವಿಚಾರಣೆ ಸಹ ಮಾಡಿದ್ದರು. ಕರಣ ದಾಖಲಾದ ನಾಲ್ವರು ಆರೋಪಿಗಳು 2018ರಿಂದ 2024ರವರೆಗೆ ವೈದ್ಯಕೀಯ ವಿದ್ಯಾರ್ಥಿಗಳಿಂದ ಖಾಲಿ ಚೆಕ್‌ಗಳಿಗೆ ಸಹಿ ಪಡೆದುಕೊಂಡು, ವಿದ್ಯಾರ್ಥಿಗಳಿಗೆ ಸೇರಬೇಕಿದ್ದ 33.34 ಕೋಟಿ ರೂ. ಶಿಷ್ಯ ವೇತನ ಹಣವನ್ನು ತಾವೇ ಪಡೆದು ವಂಚಿಸಿದ್ದಾರೆ ಎಂದು ಈಡಿ ಹೇಳಿದೆ.

ಅದೇ ಅವಧಿಯಲ್ಲಿ ಭೀಮಾಶಂಕರ ಅವರು ತಮ್ಮ ಪುತ್ರರಾದ ರಾಜಕುಮಾರ ಬಿಲಗುಂದಿ ಹಾಗೂ ಸಂತೋಷ ಅವರ ಹೆಸರಿನಲ್ಲಿ ಎರಡು ಸ್ಥಿರ ಆಸ್ತಿಗಳನ್ನು ಖರೀದಿಸಿದ್ದರು. ಶಾಂತಪ್ಪ ಪಾಟೀಲ ಎಂಬ ಮಧ್ಯವರ್ತಿಯ ಮೂಲಕ ಮಧುಸೂದನ್ ಮಾಲು ಅವರಿಗೆ ಯಾವುದೇ ಕಾನೂನುಬದ್ಧ ಆದಾಯದ ಮೂಲ ಇಲ್ಲದೆ 5.87 ಕೋಟಿ ರೂ. ನಗದು ಪಾವತಿ ಮಾಡಿದ್ದರು. ಈ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಈಡಿ ತಿಳಿಸಿದೆ.

ಅವರ ಇಬ್ಬರು ಪುತ್ರರ ಹೆಸರಿನಲ್ಲಿನ ಎರಡು ಸ್ಥಿರ ಹಾಗೂ ಹಲವು ಚರ ಆಸ್ತಿಗಳನ್ನು ಈಡಿ ವಶಕ್ಕೆ ಪಡೆದಿದೆ ಎಂದು ಈಡಿ ಪ್ರಕಟಣೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X