ಕಲಬುರಗಿ| ವಿಧಾನ ಪರಿಷತ್ ಸದಸ್ಯ ಶಶಿಲ್ ನಮೋಶಿಗೆ ಬಿಜೆಪಿ ಪಾಲಿಕೆ ಸದಸ್ಯರಿಂದ ಸನ್ಮಾನ

ಕಲಬುರಗಿ: ಈಶಾನ್ಯ ಶಿಕ್ಷಕರ ಕ್ಷೇತ್ರದಿಂದ ಸತತ ಐದು ಬಾರಿ ಗೆಲುವು ಸಾಧಿಸಿರುವ ವಿಧಾನ ಪರಿಷತ್ ಸದಸ್ಯ ಶಶಿಲ್ ಜಿ. ನಮೋಶಿ ಅವರನ್ನು ಕಲಬುರಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಕೃಷ್ಣ ನಾಯಕ್ ಅವರ ನೇತೃತ್ವದಲ್ಲಿ ಬಿಜೆಪಿ ಮಹಾನಗರ ಪಾಲಿಕೆ ಸದಸ್ಯರು ಸನ್ಮಾನಿಸಿ, ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಲ್ಬುರ್ಗಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕ ಕೃಷ್ಣ ನಾಯಕ್, ಶಿಕ್ಷಕರ ಕ್ಷೇತ್ರದಲ್ಲಿ ಸತತ ಐದು ಬಾರಿ ಜಯ ಸಾಧಿಸಿರುವುದು ಶಶಿಲ್ ಜಿ. ನಮೋಶಿ ಅವರ ಜನಪ್ರಿಯತೆ ಹಾಗೂ ಶಿಕ್ಷಕರ ವಿಶ್ವಾಸಕ್ಕೆ ಸಾಕ್ಷಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಇನ್ನಷ್ಟು ಕೊಡುಗೆ ನೀಡಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಮಾಜಿ ಮೇಯರ್ ವಿಶಾಲ್ ದರ್ಗಿ, ಈರಣ್ಣ ಹೊನ್ನಳ್ಳಿ, ಮಲ್ಲು ಉದನೂರ್, ಶಂಭು ಬಳಬಟ್ಟಿ, ಬಸವರಾಜ್ ಮುನ್ನಳ್ಳಿ, ಚನ್ನವೀರ ಲಿಂಗನವಾಡಿ, ದಿಗಂಬರ್ ನಾಡಗೌಡ, ಬಸವರಾಜ್ ಬಿರಾಳ, ಜಗದೇವ್ ಗುತ್ತೇದಾರ್, ಗುರು ಪಟ್ಟಣ, ಶಾಂತಾಬಾಯಿ. ರವಿ ಹಾಗರಗಿ ಸೇರಿದಂತೆ ಬಿಜೆಪಿ ಪಾಲಿಕೆ ಸದಸ್ಯರು ಹಾಗೂ ಪಕ್ಷದ ಮುಖಂಡರು ಉಪಸ್ಥಿತರಿದ್ದರು.




