Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮನಸ್ಸಿನ ತುಡಿತ ಕಲೆಯ ಮೂಲಕ ತಿಳಿಸಬಹುದು:...

ಮನಸ್ಸಿನ ತುಡಿತ ಕಲೆಯ ಮೂಲಕ ತಿಳಿಸಬಹುದು: ಡಾ.ನಾಗೇಂದ್ರ ಮಸೂತಿ

ವಾರ್ತಾಭಾರತಿವಾರ್ತಾಭಾರತಿ9 Jun 2026 8:41 PM IST
share
ಮನಸ್ಸಿನ ತುಡಿತ ಕಲೆಯ ಮೂಲಕ ತಿಳಿಸಬಹುದು: ಡಾ.ನಾಗೇಂದ್ರ ಮಸೂತಿ

ಕಲಬುರಗಿ: ಕಲೆ ಎಂಬುದು ಮಾನವನ ಅಭಿವ್ಯಕ್ತಿಗೆ ಇರುವ ಒಳ್ಳೆಯ ಸಾಧನ. ಕಲೆಯ ಮೂಲಕ ಮನಸ್ಸಿನ ತುಡಿತವನ್ನು ಸಮಾಜಕ್ಕೆ ತಿಳಿಸಬಹುದಾಗಿದೆ ಎಂದು ಹಿರಿಯ ಸಾಹಿತಿ ಡಾ.ನಾಗೇಂದ್ರ ಮಸೂತಿ ಅಭಿಪ್ರಾಯಪಟ್ಟರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕ್ರಿಯಾಶೀಲ ಗೆಳೆಯರ ಬಳಗದ ವತಿಯಿಂದ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ 47 ಜನ ಚಿತ್ರಕಲಾವಿದರಿಂದ ಎರಡು ದಿನಗಳ ಕಾಲ ಏರ್ಪಡಿಸಿರುವ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕಲೆ ಮನುಷ್ಯನ ಬದುಕಿಗೆ ಪೂರಕವಾಗುವುದರ ಜೊತೆಗೆ ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾಗಿದೆ. ಹಾಗಾಗಿ ಇಂಥ ಚಿತ್ರಕಲಾ ಪ್ರದರ್ಶನಗಳಿಗೆ ಇನ್ನಷ್ಟು ಅವಕಾಶಗಳು ದೊರಕಬೇಕಿದೆ. ಆಗ ಮತ್ತಷ್ಟು ಕಲಾವಿದರು ಬೆಳಕಿಗೆ ಬರಲು ಸಾಧ್ಯ. ಚಿತ್ರಕಲೆ ಮನುಷ್ಯನ ಕಲ್ಪನೆಯನ್ನು ವಿಸ್ತರಿಸುತ್ತದೆ ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಚಿತ್ರಕಲಾ ಪ್ರದರ್ಶನಗಳು ಈ ಸಮಾಜದ ನಿಜವಾದ ಕನ್ನಡಿಯಾಗಿವೆ. ಕಲೆ ಸಮಾಜದ ಆಲೋಚನಾ ಲಹರಿಯನ್ನು ಬದಲಾಯಿಸುವ, ಸಾಂಸ್ಕೃತಿಕ ಮೌಲ್ಯಗಳನ್ನು ಬಿಂಬಿಸುವ ಮತ್ತು ನಾಡಿನ ಜನರಲ್ಲಿ ಸೃಜನಶೀಲತೆಯನ್ನು ಜಾಗೃತಗೊಳಿಸುವ ಪ್ರಬಲ ಮಾಧ್ಯಮವಾಗಿದೆ ಎಂದರು.

ಕನ್ನಡ ಭೂಮಿ ಜಾಗೃತಿ ಸಮಿತಿ ಅಧ್ಯಕ್ಷ ಡಾ. ಲಿಂಗರಾಜ ಸಿರಗಾಪೂರ ಮಾತನಾಡಿ, ಚಿತ್ರಕಲಾವಿದರು ರಚಿಸುವ ಕಲಾಕೃತಿಗಳು ಪ್ರಕೃತಿಯ ಸೌಂದರ್ಯವನ್ನು ಜೀವಂತವಾಗಿರಿಸುವುದರ ಜೊತೆಗೆ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ಕಾರ್ಯವೂ ಮಾಡುತ್ತದೆ ಎಂದರು.

ನ್ಯಾಯವಾದಿ ಹುಲಿಗೆಪ್ಪಾ ಕನಕಗಿರಿ, ಜಿಲ್ಲಾ ಫೋಟೋಗ್ರಾರ‍್ಸ್ ಅಸೋಸಿಯಷನ್ ಅಧ್ಯಕ್ಷ ಬಸವರಾಜ ತೋಟದ, ಕಲಾ ಸೌಧ ಸಂಚಾಲಕ ಡಾ.ರೆಹಮಾನ್ ಪಟೇಲ್, ರವಿಕುಮಾರ ಶಹಾಪುರಕರ್ ಮಾತನಾಡಿದರು.

ಈ ವೇಳೆ ಪ್ರಮುಖರಾದ ಸೈಯ್ಯದ್ ನಜಿರುದ್ದಿನ್ ಮುತ್ತವಲ್ಲಿ, ಧರ್ಮರಾಜ ಜವಳಿ, ಗಣೇಶ ಚಿನ್ನಾಕಾರ, ರಾಜೇಂದ್ರ ಮಾಡಬೂಳ, ಮಹಮ್ಮದ್ ಅಯಾಝುದ್ದಿನ್ ಪಟೇಲ್, ಬಸವರಾಜ ಉಪ್ಪಿನ್, ರಾಜಶೇಖರ ಶಾಮಣ್ಣ, ಡಾ.ಎಸ್.ಎಂ. ನೀಲಾ, ಜ್ಯೋತಿ ಕೋಟನೂರ, ಶ್ವೇತಾ ಪಾಟೀಲ, ಅಮೃತಪ್ಪ ಅಣೂರ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

Nagendra Masoothi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X