Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಜೇವರ್ಗಿ ತಾಯಿ-ಮಕ್ಕಳ ಆಸ್ಪತ್ರೆಗೆ ಸಚಿವ...

ಜೇವರ್ಗಿ ತಾಯಿ-ಮಕ್ಕಳ ಆಸ್ಪತ್ರೆಗೆ ಸಚಿವ ಡಾ. ಅಜಯ್‌ ಸಿಂಗ್‌ ದಿಢೀರ್ ಭೇಟಿ

ವಾರ್ತಾಭಾರತಿವಾರ್ತಾಭಾರತಿ9 Oct 2026 9:25 PM IST
share
ಜೇವರ್ಗಿ ತಾಯಿ-ಮಕ್ಕಳ ಆಸ್ಪತ್ರೆಗೆ ಸಚಿವ ಡಾ. ಅಜಯ್‌ ಸಿಂಗ್‌ ದಿಢೀರ್ ಭೇಟಿ

ಜೇವರ್ಗಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್‌ ಸಿಂಗ್‌ ಅವರು ಜೇವರ್ಗಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿ, ಆಸ್ಪತ್ರೆಯಲ್ಲಿ ಲಭ್ಯವಿರುವ ವೈದ್ಯಕೀಯ ಸೌಲಭ್ಯಗಳು, ಚಿಕಿತ್ಸಾ ವ್ಯವಸ್ಥೆ ಹಾಗೂ ರೋಗಿಗಳಿಗೆ ಒದಗಿಸಲಾಗುತ್ತಿರುವ ಆರೋಗ್ಯ ಸೇವೆಗಳನ್ನು ಪರಿಶೀಲಿಸಿದರು.

ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಮಹಿಳೆಯರು ಮತ್ತು ಮಕ್ಕಳಿಗೆ ಗುಣಮಟ್ಟದ, ಸಮಯೋಚಿತ ಹಾಗೂ ಜನಸ್ನೇಹಿ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ವೈದ್ಯಕೀಯ ಸಿಬ್ಬಂದಿಯಿಂದ ಮಾಹಿತಿ ಪಡೆದರು. ಆಸ್ಪತ್ರೆಯ ಸ್ವಚ್ಛತೆ, ಮೂಲಸೌಕರ್ಯ, ಔಷಧಗಳ ಲಭ್ಯತೆ, ವೈದ್ಯರು ಹಾಗೂ ಇತರ ಸಿಬ್ಬಂದಿಯ ಕಾರ್ಯನಿರ್ವಹಣೆ ಮತ್ತು ರೋಗಿಗಳ ಆರೈಕೆ ವ್ಯವಸ್ಥೆಯ ಕುರಿತು ಪರಿಶೀಲನೆ ನಡೆಸಿ, ಅಗತ್ಯ ಸುಧಾರಣೆಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡುವುದು ಅತ್ಯಂತ ಮುಖ್ಯವಾಗಿದೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವ ಪ್ರತಿಯೊಬ್ಬರಿಗೂ ಯಾವುದೇ ತೊಂದರೆಯಾಗದಂತೆ ಉತ್ತಮ ಚಿಕಿತ್ಸೆ ದೊರೆಯಬೇಕು. ಈ ನಿಟ್ಟಿನಲ್ಲಿ ಆಸ್ಪತ್ರೆಯಲ್ಲಿನ ಸೌಲಭ್ಯಗಳನ್ನು ಮತ್ತಷ್ಟು ಬಲಪಡಿಸಿ, ಆರೋಗ್ಯ ಸೇವೆಗಳ ಗುಣಮಟ್ಟವನ್ನು ಹೆಚ್ಚಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವರು ತಿಳಿಸಿದರು.

ಜೇವರ್ಗಿ ವಿಧಾನಸಭಾ ಕ್ಷೇತ್ರದ ಜೇವರ್ಗಿ ಹಾಗೂ ಯಡ್ರಾಮಿ ಭಾಗಗಳಲ್ಲಿ ಮಹಿಳೆಯರು ಮತ್ತು ಮಕ್ಕಳಿಗೆ ಉತ್ತಮ ಆರೋಗ್ಯ ಸೌಲಭ್ಯಗಳನ್ನು ಒದಗಿಸುವುದು ತಮ್ಮ ಆದ್ಯತೆಯಾಗಿದೆ. ಪ್ರತಿಯೊಬ್ಬ ಮಹಿಳೆ ಮತ್ತು ಮಗುವಿಗೂ ಸುರಕ್ಷಿತ, ಗುಣಮಟ್ಟದ ಹಾಗೂ ಸುಲಭವಾಗಿ ಲಭ್ಯವಾಗುವ ಚಿಕಿತ್ಸಾ ಸೌಲಭ್ಯಗಳನ್ನು ತಲುಪಿಸುವ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ಬದ್ಧವಾಗಿದೆ ಎಂದು ಡಾ. ಅಜಯ್‌ ಸಿಂಗ್‌ ಹೇಳಿದರು.

ಸಾರ್ವಜನಿಕರಿಗೆ ಸರ್ಕಾರಿ ಆಸ್ಪತ್ರೆಗಳ ಮೂಲಕ ಉತ್ತಮ ಆರೋಗ್ಯ ಸೇವೆ ದೊರೆಯುವಂತೆ ಸೌಲಭ್ಯಗಳ ಅಭಿವೃದ್ಧಿ ಮತ್ತು ಸುಧಾರಣೆಗೆ ನಿರಂತರವಾಗಿ ಶ್ರಮಿಸಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Tags

JevargiDr. Ajay Singh
share
ವಾರ್ತಾಭಾರತಿ
ವಾರ್ತಾಭಾರತಿ
Next Story
X