Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕೋಲಿ ಸಮಾಜವನ್ನು ಮುಖ್ಯವಾಹಿನಿಗೆ ತರಲು...

ಕೋಲಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಅಭಿವೃದ್ಧಿ ನಿಗಮ ಸ್ಥಾಪನೆ; ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ1 Nov 2026 7:20 PM IST
share
ಕೋಲಿ ಸಮಾಜವನ್ನು ಮುಖ್ಯವಾಹಿನಿಗೆ ತರಲು ಅಭಿವೃದ್ಧಿ ನಿಗಮ ಸ್ಥಾಪನೆ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕೋಲಿ, ಕಬ್ಬಲಿಗ, ಬೆಸ್ತ ಸೇರಿದಂತೆ 38 ಪರ್ಯಾಯ ಹೆಸರುಗಳನ್ನು ಹೊಂದಿರುವ ಸಮುದಾಯವನ್ನು ಒಗ್ಗೂಡಿಸುವಲ್ಲಿ ನಿಜಶರಣ ಅಂಬಿಗರ ಚೌಡಯ್ಯನವರ ಕೊಡುಗೆ ಮಹತ್ವದ್ದಾಗಿದೆ. ಕೋಲಿ ಸಮಾಜವನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಅಂಬಿಗರ ಚೌಡಯ್ಯನವರ ಅಭಿವೃದ್ಧಿ ನಿಗಮ ಸ್ಥಾಪಿಸಲಾಗಿದೆ ಎಂದು ಗೃಹ, ಐಟಿ-ಬಿಟಿ, ಇ-ಆಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದ ವೀರಶೈವ ಕಲ್ಯಾಣ ಮಂಟಪದಲ್ಲಿ ರವಿವಾರ ಜಿಲ್ಲಾ ಕೋಲಿ/ಕಬ್ಬಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಜಿಲ್ಲಾ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಅಂಬಿಗರ ಚೌಡಯ್ಯನವರ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ಹಲವು ಹೋರಾಟಗಳು ನಡೆದಿವೆ. ಸಮುದಾಯದ ಮುಖಂಡರು ನಿಗಮ ಸ್ಥಾಪನೆಗೆ ಒತ್ತಾಯಿಸಿದಾಗ ಈ ಕುರಿತು ಸರಕಾರದ ಗಮನ ಸೆಳೆಯಲಾಗಿತ್ತು ಎಂದರು.

ಕೋಲಿ ಸಮಾಜದಲ್ಲಿ ಅಕ್ಷರಜ್ಞಾನ, ಸಂಸ್ಕೃತಿ ಹಾಗೂ ತಿಳಿವಳಿಕೆಯ ಕೊರತೆಯನ್ನು ಮೇಲ್ವರ್ಗದವರು ದುರುಪಯೋಗಪಡಿಸಿಕೊಂಡಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಯಿತು ಎಂದು ತಿಳಿಸಿದರು.

ಕೋಲಿ ಇನ್ನಿತರ ಪಂಗಡದ ಸಮುದಾಯವನ್ನು ಪರಿಶಿಷ್ಟ ಪಂಗಡದ ಮೀಸಲಾತಿ ವಿಚಾರವಾಗಿ ಹೋರಾಟ ನಡೆಯುತ್ತಿದೆ. ಈ ಸಂಬಂಧ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಕಳುಹಿಸಲಾಗಿತ್ತು. ಆದರೆ, ಕೇಂದ್ರ ಸರಕಾರ ವರದಿಯನ್ನು ಹಿಂದಿರುಗಿಸಿದೆ. ಈ ಕುರಿತು ಅಧ್ಯಯನ ನಡೆಸುತ್ತಿರುವವರನ್ನು ಕರೆಸಿ ಚರ್ಚಿಸಿದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಕಾಂಗ್ರೆಸ್ ಮತ್ತು ಬಿಜೆಪಿ ಸರಕಾರಗಳು ಈ ಸಮಾಜದ ಅಭಿವೃದ್ಧಿಗೆ ಕೆಲಸ ಮಾಡಿವೆ. ತಾವು ಬಸವಣ್ಣನವರ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಅನುಯಾಯಿಯಾಗಿದ್ದು, ಅವರ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಬದ್ಧರಾಗಿದ್ದೇವೆ. ಮುಂದಿನ ಪೀಳಿಗೆಗಳೂ ಸಹ ಅವರ ವಿಚಾರಗಳನ್ನು ಅಳವಡಿಸಿಕೊಳ್ಳಲು ಪೋಷಕರು ಪ್ರೋತ್ಸಾಹಿಸಬೇಕು ಎಂದು ಹೇಳಿದರು.

ಅಂಬಿಗರ ಚೌಡಯ್ಯನವರ 273 ವಚನಗಳು ಮಾತ್ರ ಈವರೆಗೆ ಲಭ್ಯವಾಗಿವೆ. ಯುವಜನರು ಬುದ್ಧ, ಬಸವ, ಅಂಬೇಡ್ಕರ್ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ತತ್ವಗಳನ್ನು ಪಾಲಿಸಬೇಕು. ಕೇವಲ ಮೂರ್ತಿಗಳನ್ನು ಸ್ಥಾಪಿಸುವುದರಿಂದ ಮಹನೀಯರ ಆಶಯಗಳು ಈಡೇರುವುದಿಲ್ಲ. ಅವರ ಗುಣ, ಆದರ್ಶ ಹಾಗೂ ವಿಚಾರಧಾರೆಗಳು ಸಮಾಜದಲ್ಲಿ ನೆಲೆಗೊಳ್ಳಬೇಕು. ಜಯಂತಿ ಮತ್ತು ಚುನಾವಣೆಗಳ ಸಂದರ್ಭದಲ್ಲಿ ಮಾತ್ರ ಅವರನ್ನು ಸ್ಮರಿಸದೆ, ಪ್ರತಿನಿತ್ಯ ಅವರ ವಚನಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಯುವಜನರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಅಗತ್ಯ. ಮಕ್ಕಳಲ್ಲಿ ಸಹಜವಾಗಿ ಮೂಡುವ ಕುತೂಹಲವನ್ನು ಪ್ರೋತ್ಸಾಹಿಸಬೇಕು. ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಜವಾಬ್ದಾರಿ ಪೋಷಕರು ಹಾಗೂ ಸರ್ಕಾರದ ಮೇಲಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರಕಾರದ ಕರ್ತವ್ಯವಾಗಿದ್ದು, ಅದನ್ನು ಮುಂದುವರೆಸುತ್ತಿದೆ ಎಂದರು.

ಅಂಬಿಗರ ಚೌಡಯ್ಯನವರ ಇತಿಹಾಸ ಹಾಗೂ ಡಾ.ಬಿ.ಆರ್. ಅಂಬೇಡ್ಕರ್ ಅವರ ಹೋರಾಟಗಳನ್ನು ಯುವಜನರು ತಿಳಿದುಕೊಳ್ಳಬೇಕು. ಯಾವುದೇ ಸಮುದಾಯವನ್ನು ಕಡೆಗಣಿಸದೆ ಎಲ್ಲರೂ ಸಮಾಜದ ಮುಖ್ಯವಾಹಿನಿಗೆ ಬರಲು ಸಂವಿಧಾನದ ಮೂಲಕ ಅಂಬೇಡ್ಕರ್ ಅವರು ಅವಕಾಶ ಕಲ್ಪಿಸಿದ್ದಾರೆ ಎಂದು ಹೇಳಿದರು.

ತಮಗೆ ಹಾರ-ತುರಾಯಿಗಳ ಬದಲಿಗೆ ಪುಸ್ತಕಗಳನ್ನು ನೀಡುವಂತೆ ಮನವಿ ಮಾಡಿದ ಅವರು, ಪ್ರತಿ ತಿಂಗಳು ಸುಮಾರು ಎರಡು ಸಾವಿರ ಪುಸ್ತಕಗಳು ತಮ್ಮ ಬಳಿ ಬರುತ್ತವೆ. ಅವುಗಳನ್ನು ಅರಿವು ಕೇಂದ್ರಗಳಿಗೆ ಒದಗಿಸಲಾಗುವುದು ಎಂದರು.

ಅಂಬೇಡ್ಕರ್ ಹಾಗೂ ಅಂಬಿಗರ ಚೌಡಯ್ಯನವರು ವ್ಯಕ್ತಿಪೂಜೆಯನ್ನು ವಿರೋಧಿಸಿದ್ದರು. ಭಕ್ತಿ ಮತ್ತು ಗೌರವ ಇರಬೇಕಾದದ್ದು ತತ್ವ ಹಾಗೂ ಆದರ್ಶಗಳ ಮೇಲೆಯೇ ಹೊರತು ವ್ಯಕ್ತಿಗಳ ಮೇಲಲ್ಲ. ಸಾರ್ವಜನಿಕ ಜೀವನದಲ್ಲಿ ಮಹನೀಯರ ತತ್ವಗಳನ್ನು ಅಳವಡಿಸಿಕೊಂಡಾಗ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯ. ಸಮಾಜದ ಪ್ರಗತಿಗಾಗಿ ಹಿರಿಯರು ತೋರಿದ ಮಾರ್ಗದಲ್ಲಿ ನಡೆದು, ಅವರ ಆದರ್ಶಗಳನ್ನು ನಿತ್ಯ ಜೀವನದಲ್ಲಿ ಪಾಲಿಸಬೇಕು ಎಂದು ಕರೆ ನೀಡಿದರು.

ಹಾವೇರಿ ಜಿಲ್ಲೆಯ ನರಸೀಪುರದ ಶಾಂತ ಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಮಾತನಾಡಿ, ಕೋಲಿ ಸಮುದಾಯದ ಅಭಿವೃದ್ಧಿಗೆ ಮಲ್ಲಿಕಾರ್ಜುನ ಖರ್ಗೆ ಹಾಗೂ ಪ್ರಿಯಾಂಕ್ ಖರ್ಗೆ ಅವರ ಕೊಡುಗೆ ಅಪಾರವಾಗಿದೆ. ತುಳಿತಕ್ಕೊಳಗಾದ ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ಖರ್ಗೆ ಕುಟುಂಬದ ಶ್ರಮ ಮಹತ್ವದ್ದಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ, ಮಾತಾ ಮಣಿಕೇಶ್ವರಿ ಹಾಗೂ ಹೋರಾಟಗಾರ ದಿವಂಗತ ವಿಠ್ಠಲ ಹೇರೂರ ಅವರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡು, ಗೌರವಿಸಲಾಯಿತು. ಇದೇ ಸಂದರ್ಭದಲ್ಲಿ ನೂತನ ಗುರುತಿನ ಚೀಟಿಗಳನ್ನು ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಶಾಸಕ ಎಂ.ವೈ. ಪಾಟೀಲ್, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಜೆಸ್ಕಾಂ ಅಧ್ಯಕ್ಷ ಪ್ರವೀಣ್ ಪಾಟೀಲ್ ಹರವಾಳ, ಮಾಲಾ ಬಿ. ನಾರಾಯಣರಾವ್, ಎಂ. ಶ್ರೀನಿವಾಸ, ಮಲ್ಲಿಕಾರ್ಜುನ ಮುಕ್ಕಾ, ಆನಂದ ರಟಕಲ್, ಸಂಘದ ಜಿಲ್ಲಾಧ್ಯಕ್ಷ ನೀಲಕಂಠ ಜಮಾದಾರ್, ಸಿದ್ದು ಬಾನರ್, ನಾಮದೇವ ಕಡಕೋಳ, ಧರ್ಮರಾಜ ಜವಳಿ, ಅನಿಲ್ ಜಮಾದಾರ್, ಸಿದ್ದಣ್ಣ ಮುಕರಂಬಿ, ರಾಜೇಂದ್ರ ಝಳಕಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags

DevelopmentCorporationKoli societyMinisterPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X