Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯಲ್ಲಿ...

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯಲ್ಲಿ ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿದೆ; ಸಚಿವ ಪ್ರಿಯಾಂಕ್ ಖರ್ಗೆ

"ಇದು ಟ್ರೈಲರ್ ಅಷ್ಟೇ, ಸಿನಿಮಾ ಇನ್ನೂ ಬಾಕಿಯಿದೆ"

ವಾರ್ತಾಭಾರತಿವಾರ್ತಾಭಾರತಿ1 Nov 2026 7:28 PM IST
share
ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯಲ್ಲಿ ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿದೆ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆ ಮುಂದುವರಿದಿದ್ದು, ಈಗಾಗಲೇ ಕೆಲವು ಮಹತ್ವದ ಅಂಶಗಳು ಬೆಳಕಿಗೆ ಬಂದಿವೆ. ಇನ್ನಷ್ಟು ತನಿಖೆ ನಡೆಸಿದ ಬಳಿಕ ಮತ್ತಷ್ಟು ಸತ್ಯಾಂಶಗಳು ಬಹಿರಂಗವಾಗಲಿವೆ. ತನಿಖೆಯಲ್ಲಿ ಯಾರ ಮೇಲಾದರೂ ಅನುಮಾನ ವ್ಯಕ್ತವಾದರೆ, ಅವರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ರವಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಜೀವನದಲ್ಲಿರುವವರು ತಮ್ಮ ಸ್ಥಾನಮಾನ ಹಾಗೂ ಕುರ್ಚಿಯ ಘನತೆಯನ್ನು ಕಾಪಾಡಿಕೊಳ್ಳಬೇಕು. ಪದೇಪದೇ ವೈಯಕ್ತಿಕ ಟೀಕೆ, ಜಾತಿ ಮತ್ತು ಕುಟುಂಬದ ಬಗ್ಗೆ ಅವಹೇಳನಕಾರಿ ಹೇಳಿಕೆಗಳು ಹಾಗೂ ಏಕವಚನದ ಬಳಕೆ ಮುಂದುವರಿದಿರುವುದು ಸರಿಯಲ್ಲ ಎಂದು ಎಚ್.ಡಿ ಕುಮಾರಸ್ವಾಮಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಸ್ಟಿಂಗ್ ಆಪರೇಷನ್ ಪ್ರಕರಣದ ತನಿಖೆಯಲ್ಲಿ ತಾಂತ್ರಿಕವಾಗಿ ಪರಿಶೀಲನೆ ನಡೆಸಿದಾಗ ಕೆಲವು ಮಹತ್ವದ ಅಂಶಗಳು ಪತ್ತೆಯಾಗಿವೆ. ಈ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತನಿಖೆಯ ವೇಳೆ ತಮ್ಮ ಹೆಸರು ಪ್ರಸ್ತಾಪವಾದ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ಕಚೇರಿಗೆ ಮುತ್ತಿಗೆ ಹಾಕಿದ್ದರು; ಇನ್ನೊಂದೆಡೆ ಡಿಜಿ ಕಚೇರಿವರೆಗೆ ಪಾದಯಾತ್ರೆ ನಡೆಸಿದ್ದರು ಎಂದರು.

ಪ್ರಕರಣದ ಮೂಲ ಎಲ್ಲಿದೆ, ಇದನ್ನು ಯಾರು ಮಾಡಿಸಿದ್ದಾರೆ ಎಂಬುದರ ಕುರಿತು ತನಿಖೆ ನಡೆಯುತ್ತಿದೆ. ಎಫ್‌ಐಆರ್‌ನಲ್ಲಿ ಈ ಪ್ರಕರಣದ ಪ್ರಚಾರ ಮತ್ತು ಅದರ ಹಿಂದೆ ಕೆಲಸ ಮಾಡಿದವರ ಕುರಿತು ಸ್ಪಷ್ಟ ಉಲ್ಲೇಖವಿದೆ. ಕುಮಾರಸ್ವಾಮಿ ಅವರೊಂದಿಗೆ ಕೆಲಸ ಮಾಡಿದ್ದವರು ಹಾಗೂ ಅವರ ಆಪ್ತರು ತನಿಖೆಗೆ ಹಾಜರಾಗುತ್ತಿಲ್ಲ. ತನಿಖೆಗೆ ಸಹಕರಿಸುವಂತೆ ಅವರೇ ಹೇಳಬೇಕಿತ್ತು. ಯಾಕೆ ಹೇಳುತ್ತಿಲ್ಲ ಎಂದು ಪ್ರಶ್ನಿಸಿದರು.

ಪ್ರಕರಣದಲ್ಲಿ ವ್ಯಕ್ತಿಯೊಬ್ಬ ಸಿಕ್ಕಿಬಿದ್ದ ಬಳಿಕ ದಿಲ್ಲಿಯಲ್ಲಿ ಮತ್ತೊಬ್ಬ ವ್ಯಕ್ತಿ ಪತ್ತೆಯಾಗಿದ್ದಾನೆ. ಈ ಸಂಬಂಧ ಸಿಸಿಟಿವಿ ದೃಶ್ಯಗಳು ಲಭ್ಯವಿವೆ. ಉಪಕರಣಗಳನ್ನು ಎಲ್ಲಿಂದ ಖರೀದಿಸಲಾಗಿದೆ, ಯಾರ ಸೂಚನೆಯ ಮೇರೆಗೆ ಈ ಕಾರ್ಯ ನಡೆದಿದೆ ಎಂಬುದರ ಕುರಿತು ಪರಿಶೀಲಿಸಲಾಗುತ್ತಿದೆ. ದಿಲ್ಲಿ ಮೂಲದ ಇಬ್ಬರು ಸೇರಿದಂತೆ ಒಟ್ಟು ಮೂವರು ವ್ಯಕ್ತಿಗಳು ಕುಮಾರಸ್ವಾಮಿ ಅವರೊಂದಿಗೆ ಅಧಿಕೃತವಾಗಿ ಕೆಲಸ ಮಾಡಿದ್ದವರು ಎಂಬ ಮಾಹಿತಿ ಇದೆ. ಈ ಪ್ರಕರಣದಲ್ಲಿ ಹಾರ್ಡ್‌ವೇರ್ ಹಾಗೂ ತಾಂತ್ರಿಕ ಸಾಕ್ಷ್ಯಗಳು ಲಭ್ಯವಾಗಿವೆ ಎಂದು ತಿಳಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕುಮಾರಸ್ವಾಮಿ ಅವರು ಕೊಳಕು ರಾಜಕೀಯ ಮಾಡುತ್ತಿದ್ದಾರೆ ಎಂದು ಟೀಕಿಸಿದ ಅವರು, ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. "ಇದು ಕೇವಲ ಟ್ರೈಲರ್ ಅಷ್ಟೇ, ಸಿನಿಮಾ ಇನ್ನೂ ಬಾಕಿ ಇದೆ" ಎಂದು ಹೇಳಿದರು.

ತಮ್ಮ ಜಾತಿ ಹಾಗೂ ತಂದೆಯವರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡಲಾಗಿದೆ. ಈಗಲೂ ಯಾರಿಗೆ ಏನು ಹೇಳಬೇಕೋ ಹೇಳಲಿ. ಎಲ್ಲರ ವಿರುದ್ಧವೂ ಮುಗಿಬಿದ್ದು ಮಾತನಾಡುವ ಕುಮಾರಸ್ವಾಮಿ ಅವರಿಗೆ ಕನಿಷ್ಠ ಸಾಮಾನ್ಯ ಜ್ಞಾನ ಇರಬೇಕಲ್ಲವೇ ಎಂದು ಪ್ರಶ್ನಿಸಿದರು.

ತನಿಖೆಯಲ್ಲಿ ಲಭ್ಯವಾಗಿರುವ ದಾಖಲೆಗಳು ಹಾಗೂ ಸಾಕ್ಷ್ಯಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕುಮಾರಸ್ವಾಮಿ ಅವರ ಸಹವರ್ತಿಗಳು, ಬೆಂಬಲಿಗರು ಸೇರಿದಂತೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರ ವಿರುದ್ಧ ಕ್ರಮ ಜರುಗಿಸಲಾಗುವುದು. ಇದೆಲ್ಲವನ್ನೂ ಪ್ರಿಯಾಂಕ್ ಖರ್ಗೆ ಮಾಡಿಸಿದ್ದಾರೆ ಎಂದು ಆರೋಪಿಸುವವರು ಅದಕ್ಕೆ ಸಾಕ್ಷ್ಯ ನೀಡಲಿ ಎಂದು ಸವಾಲು ಹಾಕಿದರು.

ತಾವು ತನಿಖೆಯ ಗೌಪ್ಯತೆಯನ್ನು ಕಾಪಾಡುವ ಉದ್ದೇಶದಿಂದ ಎಲ್ಲ ಮಾಹಿತಿಯನ್ನೂ ಬಹಿರಂಗಪಡಿಸುತ್ತಿಲ್ಲ. ಇನ್ನೂ ಕೆಲವು ದಾಖಲೆಗಳು ಲಭ್ಯವಾಗಬೇಕಿವೆ. ಸತ್ಯವನ್ನು ಸೂರ್ಯ, ಚಂದ್ರರಂತೆ ಹೆಚ್ಚು ಕಾಲ ಮುಚ್ಚಿಡಲು ಸಾಧ್ಯವಿಲ್ಲ. ಇಂದಲ್ಲ ನಾಳೆ ಅದು ಬಹಿರಂಗವಾಗಲೇಬೇಕು. ತನಿಖೆಯಲ್ಲಿ ಬಲವಾದ ಮೂಲ ಸಾಕ್ಷ್ಯಗಳಿವೆ. ತನಿಖೆಯ ಬಗ್ಗೆ ಕಾಳಜಿ ಇರುವವರು ಸಾಕ್ಷ್ಯಾಧಾರಗಳ ಕುರಿತು ಮಾತನಾಡಬೇಕು ಎಂದರು.

ಯಾರ ವಿರುದ್ಧ ಅನುಮಾನ ವ್ಯಕ್ತವಾಗಿದೆಯೋ ಅವರ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ. ಮುಂದಿನ ಹಂತದ ತನಿಖೆಯ ಬಳಿಕ ಇನ್ನಷ್ಟು ಅಂಶಗಳು ಹೊರಬರಲಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Tags

Technicalevidencesting operationMinisterPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X