ಕಲಬುರಗಿ ನಗರದಲ್ಲಿ ಫುಟ್ಬಾಲ್ ಅಂಕಣ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ನಗರದ ವೀರೇಂದ್ರ ಪಾಟೀಲ ಬಡಾವಣೆಯಲ್ಲಿ 2020-21ನೇ ಸಾಲಿನ ಕೆ.ಕೆ.ಆರ್.ಡಿ.ಬಿ.ಯ 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಫುಟ್ಬಾಲ್ ಅಂಕಣವನ್ನು ಸಚಿವ ಪ್ರಿಯಾಂಕ್ ಖರ್ಗೆ ಶನಿವಾರ ಉದ್ಘಾಟಿಸಿದರು.
ಫುಟ್ಬಾಲ್ ಆಟಗಾರರೊಂದಿಗೆ ಮಾತನಾಡಿದ ಸಚಿವರು, ಕ್ರೀಡಾಪಟುಗಳಿಗೆ ಎಲ್ಲಾ ರೀತಿಯ ನೆರವು ನೀಡಲಾಗುವುದು ಮತ್ತು ನಗರದ ಉಳಿದ ಕಡೆ ಸಹ ಸಮುದಾಯ ಕ್ರೀಡಾ ಸಂಕೀರ್ಣ ನಿರ್ಮಿಸಬೇಕೆಂದು ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ ಅವರಿಗೆ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್, ಕಲಬುರಗಿ ಉತ್ತರ ಶಾಸಕಿ ಮತ್ತು ಕರ್ನಾಟಕ ರೇಷ್ಮೆ ಅಭಿವೃದ್ಧಿ ನಿಯಮಿತದ ಅಧ್ಯಕ್ಷೆ ಕನೀಜ್ ಫಾತಿಮಾ, ವಿಧಾನ ಪರಿಷತ್ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ, ಶಶೀಲ ನಮೋಶಿ, ಮಹಾನಗರ ಪಾಲಿಕೆ ಮೇಯರ್ ಯಲ್ಲಪ್ಪ ನಾಯ್ಕೋಡಿ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತೆ ಸಾಹಿತ್ಯ, ಲೋಕೋಪಯೋಗಿ ಇಲಾಖೆಯ ಇ.ಇ.ಸುಭಾಷ ಇದ್ದರು.







