ಮುಂಗಾರು ಹಂಗಾಮಿನ ಪೂರ್ವಸಿದ್ದತೆ ಕಾರ್ಯಾಗಾರ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ರಾಜ್ಯದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಐ.ಟಿ-ಬಿ.ಟಿ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸೋಮವಾರ ಕಲಬುರಗಿ ನಗರದ ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ 2025-26 ರ ಸಾಲಿನ ಮುಂಗಾರು ಹಂಗಾಮಿನ ಪೂರ್ವಸಿದ್ದತೆ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿದರು.
ಬೆಳೆ ವಿಮೆ ಹೆಚ್ಚಿಸುವ ನಿಟ್ಟಿನಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಿ ರೈತರಿಗೆ ಬೆಳೆ ವಿಮೆ ಅಗತ್ಯ ಹಾಗೂ ಅನುಕೂಲತೆಗಳ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ಸೂಚಿಸಿದರು.
ಇದಕ್ಕೂ ಮುನ್ನ ರೈತರಿಗೆ ವಿವಿಧ ಕೃಷಿ ಯೋಜನೆಗಳು ಕುರಿತು ಅರಿವು ಮೂಡಿಸುವ ಅಭಿಯಾನ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ನಗರ ಪೊಲೀಸ್ ಆಯುಕ್ತ ಡಾ.ಎಸ್.ಡಿ.ಶರಣಪ್ಪ, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಮಹಾನಗರ ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ, ಜಂಟಿ ಕೃಷಿ ನಿರ್ದೇಶಕ ಸಮದ್ ಪಟೇಲ್ ಸೇರಿದಂತೆ ಹಲವರಿದ್ದರು.





