Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಕಲಬುರಗಿ, ಬೀದರ್ ಜಿಲ್ಲೆಗಳ ಬಹುಗ್ರಾಮ...

ಕಲಬುರಗಿ, ಬೀದರ್ ಜಿಲ್ಲೆಗಳ ಬಹುಗ್ರಾಮ ಕುಡಿಯುವ ನೀರು ಯೋಜನೆ ಅನುಮೋದನೆಗಾಗಿ ಕೇಂದ್ರ ಸಚಿವರನ್ನು ಭೇಟಿಯಾದ ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ7 Jan 2025 7:20 PM IST
share
Photo of Metting

ಕಲಬುರಗಿ : ಜಲಜೀವನ ಮಿಷನ್ ಕಾರ್ಯಕ್ರಮದ ಅಡಿಯಲ್ಲಿ ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳ ಹಳ್ಳಿಗಳಿಗೆ ಕುಡಿಯುವ ನೀರು ಒದಗಿಸುವ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಸಂಬಂಧಿಸಿದಂತೆ ಅನುಮೋದನೆ ನೀಡುವಂತೆ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರಿಗೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

ನವದೆಹಲಿಯ ಜಲಶಕ್ತಿ ಸಚಿವಾಲಯದಲ್ಲಿ ನಡೆದ ಸಭೆಯಲ್ಲಿ ಯೋಜನೆಯ ಮಹತ್ವದ ಕುರಿತು ಕೇಂದ್ರ ಸಚಿವರಿಗೆ ಮನವರಿಕೆ ಮಾಡಿದ ಖರ್ಗೆ ಅವರು, ಎರಡು ಜಿಲ್ಲೆಗಳ 1,672 ಜನವಸತಿಗಳ ಸುಮಾರು 31.67 ಲಕ್ಷ ನಿವಾಸಿಗಳಿಗೆ ಶುದ್ದ ಕುಡಿಯುವ ನೀರು ಒದಗಿಸುವ ಗುರಿ ಹೊಂದಲಾಗಿದೆ. ಸದರಿ ಯೋಜನೆಯ ಮೂಲಕ ಕಲಬುರಗಿ ಜಿಲ್ಲೆಯ 3,95,858 ಹಾಗೂ ಬೀದರ್ ಜಿಲ್ಲೆಯ 1,74,838 ಮನೆಗಳಿಗೆ ನಳಗಳ ಮೂಲಕ ನಿರಂತರ ಕುಡಿಯುವ ನೀರು ಒದಗಿಸಬಹುದಾಗಿದೆ ಎಂದರು.

ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳು ಅಭಿವೃದ್ದಿಗೆ ಸಹಕಾರಿಯಾಗುವ ಅಂಶಗಳನ್ನು ಹೊಂದಿದೆ ಆದರೆ ಜನರಿಗೆ ಕುಡಿಯುವ ನೀರು ಒದಗಿಸುವುದು ಸವಾಲಾಗಿ ಪರಿಣಮಿಸಿದೆ. ಸಮಗ್ರ ಅಧ್ಯಯನ ಮಾಡಲಾಗಿ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಮೂಲಕ ಜನರಿಗೆ ಕುಡಿಯುವ ನೀರು ಒದಗಿಸುವುದು ಸೂಕ್ತ ಎಂದು ಮನಗಂಡು ಈ ಯೋಜನೆಯ ಕುರಿತು ಯೋಚಿಸಲಾಗಿದೆ ಎಂದು ಪ್ರಿಯಾಂಕ್ ಖರ್ಗೆ ಸಚಿವರಿಗೆ ವಿವರಿಸಿದರು.

ಅಂದಾಜು 7,200 ಕೋಟಿ ರೂ. ವೆಚ್ಚದ ಈ ಯೋಜನೆಯ ಮೂಲಕ ಕುಡಿಯುವ ನೀರು ಒದಗಿಸುವುದರ ಜೊತೆಗೆ ಈ ಎರಡೂ ಜಿಲ್ಲೆಗಳ ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ದಿಗೆ ಸಹಕಾರಿಯಾಗಲಿದೆ. ಹಾಗಾಗಿ, ಈ ಯೋಜನೆಯ ಜಾರಿಗೆ ತಮ್ಮ ಸಹಕಾರ ಹಾಗೂ ಸಲಹೆಗಳು ಅಗತ್ಯವಾಗಿದ್ದು, ಜಲಜೀವನ ಕಾರ್ಯಕ್ರಮದ ಮೂಲಕ ಗುರಿ ಸಾಧಿಸುವತ್ತ ನಾವು ಮುನ್ನಡೆಯಲಿದ್ದೇವೆ ಹಾಗೂ ಗ್ರಾಮೀಣ ಭಾಗದ ಜನರ ಜೀವನ ಮಟ್ಟ ಸುಧಾರಣೆಗೆ ದಿಟ್ಟ ಕ್ರಮ ವಹಿಸಲಾಗುವುದು ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಕೇಂದ್ರ ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರವೇಜ್, ಗ್ರಾಮೀಣ ನೀರು ಸರಬರಾಜು ಇಲಾಖೆಯ ನಿರ್ದೇಶಕ ಕೆ.ನಾಗೇಂದ್ರ ಪ್ರಸಾದ್ ಹಾಗೂ ಇನ್ನಿತರ ಅಧಿಕಾರಿಗಳು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X