ಕಲಬುರಗಿ | ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ

ಕಲಬುರಗಿ: ನಗರದ ಹೊರವಲಯದ ವಾಜಪೇಯಿ ಬಡಾವಣೆಯಲ್ಲಿ ಸುಮಾರು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಐಎಎಸ್, ಐಪಿಎಸ್, ಕೆಎಎಸ್, ಬ್ಯಾಂಕಿಂಗ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆ ಎದುರಿಸುವ ವಿದ್ಯಾರ್ಥಿಗಳಿಗೆ ನೀಡುವ ತರಬೇತಿ ಕೇಂದ್ರವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ, ವೀಕ್ಷಿಸಿದರು.
ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಅಗತ್ಯ ತರಬೇತಿ ನೀಡುವುದರ ಜೊತೆಗೆ ಅವರಿಗೆ ಬೇಕಾಗುವ ಪುಸ್ತಕಗಳ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಈ ಕೇಂದ್ರ ಹೊಂದಿರುತ್ತದೆ.
ಈ ಸಂದರ್ಭದಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಸಂಸದ ರಾಧಾಕೃಷ್ಣ, ಶಾಸಕ ಅಲ್ಲಮಪ್ರಭು ಪಾಟೀಲ್, ಕನೀಝ್ ಫಾತೀಮಾ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಸಿಇಓ ಭವಾರ್ ಸಿಂಗ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಇದ್ದರು.
Next Story





