ಸಚಿವ ಶರಣ ಪ್ರಕಾಶ್ ಪಾಟೀಲ್‌ರಿಂದ ಡಾ.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ
ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ

ಕಲಬುರಗಿ: ಭಾರತ ರತ್ನ, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಅಂಗವಾಗಿ ಜಗತ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪ್ರತಿಮೆಗೆ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಜಯಸಿಂಗ್, ದಕ್ಷಿಣ ಮತಕ್ಷೇತ್ರದ ಶಾಸಕರಾದ ಅಲ್ಲಮ ಪ್ರಭು ಪಾಟೀಲ, ವಿಧಾನ ಪರಿಷತ್ತ ಶಾಸಕರಾದ ತಿಪ್ಪಣ್ಣಪ್ಪ ಕಮಕನೂರ, ಜಗದೇವ ಗುತ್ತೇದಾರ ಮಹಾನಗರ ಪಾಲಿಕೆ ಮಹಾಪೌರರಾದ ಯಲ್ಲಪ್ಪ ನಾಯ್ಕೋಡಿ, ಗ್ಯಾರೆಂಟಿ ಯೋಜನಾ ಸಮಿತಿಯ ಅಧ್ಯಕ್ಷೆ ಚಂದ್ರಿಕಾ ಪರಮೆಶ್ವರ, ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಸುಂದರೇಶ ಬಾಬು, ಪೋಲಿಸ್ ಆಯುಕ್ತರ ಡಾ.ಶರಣಪ್ಪ ಎಸ್.ಡಿ, ಎಸ್.ಪಿ.ಅಡ್ಡೂರು ಶ್ರೀನಿವಾಸಲು, ಮಹಾನಗರ ಪಾಲಿಕೆಯ ಆಯುಕ್ತರಾದ ಅವಿನಾಶ ಶಿಂಧೆ, ಬೀದರ್ ಬುದ್ಧವಿಹಾರ ಪೂಜ್ಯ ಭಂತೆ ವರಜ್ಯೋತಿ ಸೇರಿದಂತೆ ಹಲವರು ಭಾಗವಹಿಸಿದ್ದರು.







