ದಸರಾ ಉತ್ಸವದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ : ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಶಾಸಕಿ ಕನೀಝ್ ಫಾತಿಮಾ ಆಗ್ರಹ

ಕಲಬುರಗಿ: ಮೈಸೂರು ದಸರಾ ಉತ್ಸವದಲ್ಲಿ ಬಲೂನ್ ಮಾರಲು ತೆರಳಿದ ಬಾಲಕಿಯನ್ನು ಅತ್ಯಾಚಾರ ಮಾಡಿ ಹತ್ಯೆ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನೀಝ್ ಫಾತಿಮಾ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಘಟನೆಯನ್ನು ಖಂಡಿಸಿದ ಅವರು ಈ ಸುದ್ದಿ ಕೇಳಿ ಮನಸಿಗೆ ತೀವ್ರ ನೋವಾಗಿದೆ. ಜೀವನ ನಡೆಸುವ ಸಲುವಾಗಿ ಪ್ರತಿ ವರ್ಷದಂತೆ ಈ ಬಾರಿ ದಸರಾ ಉತ್ಸವದಲ್ಲಿ ಬಲೂನ್ ಮಾರಲು ತೆರಳಿದ 9 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವುದು ಆಘಾತ ಉಂಟುಮಾಡಿದೆ ಎಂದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ ಎಂಬ ಆರೋಪಿಯನ್ನು ಬಂಧಿಸಲಾಗಿದೆ, ಆರೋಪಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದು, ಬಾಲಕಿಯ ಸಾವಿಗೆ ನ್ಯಾಯ ಸಿಗುವವರೆಗೆ ಕುಟುಂಬದ ಜೊತೆ ನಿಲ್ಲುತ್ತೇನೆ ಎಂದು ಹೇಳಿದರು.
Next Story





