Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಮಹಾರಾಷ್ಟ್ರದಲ್ಲಿ ಕೆಕೆಆರ್‌ಟಿಸಿ ಬಸ್...

ಮಹಾರಾಷ್ಟ್ರದಲ್ಲಿ ಕೆಕೆಆರ್‌ಟಿಸಿ ಬಸ್ ಚಾಲಕನ ಮುಖಕ್ಕೆ ಕಪ್ಪು ಮಸಿ ಬಳಿದ ದುಷ್ಕರ್ಮಿಗಳು

ವಾರ್ತಾಭಾರತಿವಾರ್ತಾಭಾರತಿ27 Feb 2025 9:29 PM IST
share
ಮಹಾರಾಷ್ಟ್ರದಲ್ಲಿ ಕೆಕೆಆರ್‌ಟಿಸಿ ಬಸ್ ಚಾಲಕನ ಮುಖಕ್ಕೆ ಕಪ್ಪು ಮಸಿ ಬಳಿದ ದುಷ್ಕರ್ಮಿಗಳು

ಕಲಬುರಗಿ : ಮಹಾರಾಷ್ಟ್ರದ ಪುಣೆಯಲ್ಲಿ ಸ್ವಾರ್ ಗೇಟ್‌ ಓವರ್ ಬ್ರಿಡ್ಜ್ ದಾಟುವ ಸಂದರ್ಭದಲ್ಲಿ ಆಳಂದ-ಸೋಲಾಪೂರ-ಪುಣೆ ಬಸ್ ಸೇರಿದಂತೆ ಬಸ್ ಚಾಲಕನ ಮುಖಕ್ಕೆ ಕೆಲ ಪುಂಡರು ಕಪ್ಪು ಮಸಿ ಬಳಿದು ಉದ್ದಟತನ ಮೆರೆದಿರುವ ಘಟನೆ (ಮಂಗಳವಾರ) ರಾತ್ರಿ ನಡೆದಿದೆ.

ಇತ್ತೀಚೆಗೆ ಬೆಳಗಾವಿಯ ಬಾಳೇಕುಂದ್ರಿಯ ಕೆ.ಎಚ್. ಗ್ರಾಮದ ಬಳಿ ಕರ್ನಾಟಕ ರಾಜ್ಯ ಸಾರಿಗೆ ಬಸ್ಸಿನ ಕಂಡಕ್ಟರ್‌ ಮೇಲೆ ಮರಾಠಿ ಪ್ರಯಾಣಿಕರೊಂದಿಗೆ ಮರಾಠಿಯಲ್ಲಿ ಮಾತನಾಡದ ಕಾರಣ ಹಲ್ಲೆ ನಡೆದಿತ್ತು. ಆದರೆ ಇದೀಗ ಮತ್ತೆ ಕೆಲ ಪುಂಡರು ಕರ್ನಾಟಕದ ಬಸ್ಸುಗಳನ್ನು ಗುರಿಯಾಗಿಸಿ ಪುಣೆಯ ಸ್ವಾರ್ ಗೇಟ್ ಬ್ರಿಡ್ಜ್ ದಾಟುವಾಗ ಬಸ್ ಅನ್ನು ನಿಲ್ಲಿಸಿ, ಚಾಲಕನನ್ನು ಕೆಳಗೆ ಇಳಿಸಿ ಬಸ್ಸಿಗೆ ಹಾಗೂ ಡ್ರೈವರ್ ಮುಖಕ್ಕೆ ಕಪ್ಪು ಮಸಿ ಬಳಿದು ಬಸ್ಸಿನ ಮೇಲೆ 'ಜೈ ಮಹಾರಾಷ್ಟ್ರ ', 'ಜೈ ಮರಾಠಿ' ಎಂದು ಬರೆದಿದ್ದಾರೆ.

ಅಲ್ಲದೇ ನೀವು(ಕರ್ನಾಟಕದವರು) ಮರಾಠಿಗರನ್ನು ಕೆಣಕಬೇಡಿ, ನಾವು ಪುಂಡರು ನಮ್ಮ ತಂಟೆಗೆ ಬಂದರೆ ನಾವು ಸುಮ್ಮನಿರಲ್ಲ ಹಾಗೂ ನಮ್ಮವರನ್ನು(ಮರಾಠಿಗರನ್ನು) ಕರ್ನಾಟಕದಲ್ಲಿ ಏನಾದರೂ ಮಾಡಿದರೆ ನಿಮ್ಮನ್ನು ಇಲ್ಲಿ ಬರಲು ಬಿಡುವುದಿಲ್ಲ, ನಿಮಗೆ ಉಳಿಗಾಲವಿಲ್ಲ ಎಂದು ಘೋಷಣೆಗಳನ್ನು ಕೂಗಿದ್ದಾರೆ.

ನಿಮ್ಮ ಸರಕಾರಕ್ಕೆ ಹೇಳಿ, ಬೇಷರತ್ತಾಗಿ ಮರಾಠಿಗರ ಬಳಿ ಕ್ಷಮೆ ಕೇಳಿ ಎಂದು ಬಸ್ ಚಾಲಕ ಸಾದೀಕ ಮುಲಗೆ ಪಡಸಾವಳಿ ಅವರಿಗೆ ಧಮ್ಕಿ ಹಾಕಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಪುಣೆಯ ಹೊರ ವಲಯದಲ್ಲಿ ಮರಾಠಿ ಕಿಡಿಗೇಡಿಗಳು ಈ ರೀತಿ ಘಟನೆ ಮಾಡಿದ್ದಾರೆಂದು ಚಾಲಕ ಸಾದೀಕ ಮುಲಗೆ ಪಡಸಾವಳಿ ಮತ್ತು ನಿರ್ವಾಹಕ ಪರಮೇಶ್ವರ್‌ ಅವರ ನನ್ನ ಗಮನಕ್ಕೆ ತಂದಿದ್ದಾರೆ. ಕೂಡಲೇ ಈ ವಿಷಯವನ್ನು ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿದ್ದೇನೆ. ಫೆ.27ರ ರಾತ್ರಿಯಿಂದಲೇ ಪುಣೆಗೆ ಹೋಗುವ ಆಳಂದ ಬಸ್ ರದ್ದುಪಡಿಸಲಾಗಿದೆ. ಈ ಪ್ರಕರಣ ಕುರಿತು ಘಟನೆ ನಡೆದ ಸ್ಥಳದ ಪೊಲೀಸ್‌ ಅಧಿಕಾರಿಗಳನ್ನು ಸಂಪರ್ಕಿಸಿ, ತಪ್ಪಿಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಪತ್ರ ಬರೆಯುತ್ತೇನೆ.

ಯೋಗಿರಾಜ ಸರಸಂಬಿ, ಘಟಕ ವ್ಯವಸ್ಥಾಪಕರು, ಬಸ್ ಡಿಪೋ, ಆಳಂದ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X