Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಕಲಬುರಗಿ
  4. ಖರ್ಗೆ ಸಾಹೇಬರ ಪರಿವಾರಕ್ಕೆ ನಿಂದಿಸಿದರೆ...

ಖರ್ಗೆ ಸಾಹೇಬರ ಪರಿವಾರಕ್ಕೆ ನಿಂದಿಸಿದರೆ ನಮ್ಮ ಕುಟುಂಬಕ್ಕೆ ನಿಂದನೆ ಮಾಡಿದಂತೆ: ಶಾಸಕ ಡಾ. ಅಜಯ್‌ ಸಿಂಗ್‌

ವಾರ್ತಾಭಾರತಿವಾರ್ತಾಭಾರತಿ16 Oct 2025 11:40 PM IST
share
ಖರ್ಗೆ ಸಾಹೇಬರ ಪರಿವಾರಕ್ಕೆ ನಿಂದಿಸಿದರೆ ನಮ್ಮ ಕುಟುಂಬಕ್ಕೆ ನಿಂದನೆ ಮಾಡಿದಂತೆ: ಶಾಸಕ ಡಾ. ಅಜಯ್‌ ಸಿಂಗ್‌

ಕಲಬುರಗಿ: ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಮತ್ತು ಅವರ ಕುಟುಂಬಕ್ಕೆ ನಿಂದಿಸುವುದು ಹಾಗೂ ಬೆದರಿಕೆ ಕರೆ ಮಾಡಿರುದನ್ನು ಕೆಕೆಆರ್‌ಡಿಬಿ ಅಧ್ಯಕ್ಷ ಶಾಸಕ ಡಾ. ಅಜಯ್‌ ಧರ್ಮಸಿಂಗ್‌ ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಹಿರಿಯರು, ಮುತ್ಸದ್ದಿಗಳಾಗಿರುವ ಡಾ. ಮಲ್ಲಿಕಾರ್ಜುನ ಖರ್ಗೆ ಮತ್ತು ದಿ. ಧರ್ಮಸಿಂಗ್ ಕುಟುಂಬಗಳು ಒಂದೇ ಕುಟುಂಬ ಎನ್ನುವಂತೆ ಬದುಕುತ್ತಿದ್ದೇವೆ. ಖರ್ಗೆ ಕುಟುಂಬವನ್ನು ನಿಂದಿಸಿದರೆ ನಮ್ಮ ಕುಟುಂಬವನ್ನು ನಿಂದಿಸಿದಂತೆ ಎಂದು ಹೇಳಿದ್ದಾರೆ.

ಡಾ. ಬಿ.ಆರ್. ಅಂಬೇಡ್ಕರ್ ಅವರ ಚಿಂತನೆಗಳನ್ನು ದ್ವೇಷಿಸುವ ಮತ್ತು ಅಂಬೇಡ್ಕರ್ ವಾದಿಗಳನ್ನು ಕೆಣಕುವ ಕೀಳು ಮನಸ್ಥಿತಿಗಳನ್ನು ಸಾರ್ವಜನಿಕರು ಈಗಾಗಲೇ ತಿರಸ್ಕರಿಸಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ನೀಡಿರುವ ಇತಿಹಾಸ ಈ ರಾಜ್ಯದಲ್ಲಿ ಕಣ್ಮುಂದಿದೆ.

ಬುದ್ದ, ಬಸವ, ಅಂಬೇಡ್ಕರ್ ಪರಂಪರೆ ನಮ್ಮದು. ನಮಗೆ ಹೋರಾಟ ಹೊಸದಲ್ಲ. ಸೌಹಾರ್ದಯುತ ಮತ್ತು ಆರೋಗ್ಯಕರ ಸಂವಾದದ ಬದಲಿಗೆ ಈ ರೀತಿಯ ವೈಯಕ್ತಿಕ ನಿಂದನೆ ಅಸಬ್ಯ ಶಬ್ದಗಳ ಬಳಕೆಯನ್ನು ಎಲ್ಲರೂ ಖಂಡಿಸಲೇಬೇಕು ಎಂದು ಹೇಳಿದ್ದಾರೆ.

ಆರೋಗ್ಯಕರ ಚರ್ಚೆಯ ಬದಲಿಗೆ ವಯಕ್ತಿಕ ನಿಂದನೆ, ಟೀಕೆಗೆ ಡಾ. ಅಜಯ್‌ ಸಿಂಗ್‌ ಖಂಡಿಸಿದ್ದು, ವೈಯಕ್ತಿಕ ಅನಿಸಿಕೆಗಳು, ಅಭಿಪ್ರಾಯಗಳು ಮತ್ತು ಭಿನ್ನಾಭಿಪ್ರಾಯಗಳು ಏನೇ ಇರಲಿ, ಅವುಗಳನ್ನು ಸೌಹಾರ್ದಯುತವಾಗಿ ಮತ್ತು ಆರೋಗ್ಯಕರ ಸಂವಾದದ ಮೂಲಕ ಮಂಡಿಸುವುದು ಪ್ರಜಾಪ್ರಭುತ್ವದ ಮೂಲ ಆಶಯವಾಗಿದೆ. ಸಂಸ್ಕೃತಿ ಮತ್ತು ಸಂಪ್ರದಾಯದ ಮೌಲ್ಯಗಳ ಬಗ್ಗೆ ಮಾತನಾಡುವವರ ನಡೆನುಡಿಗಳಲ್ಲಿ ಸೌಜನ್ಯ ಮತ್ತು ಘನತೆ ಇರಬೇಕಾಗಿತ್ತು.

ಸಾರ್ವಜನಿಕ ಜೀವನದಲ್ಲಿರುವ ಸಚಿವರಾದ ಪ್ರಿಯಾಂಕ್ ಖರ್ಗೆಯವರ ತಾಯಿ ಮತ್ತು ಕುಟುಂಬದವರನ್ನು ಉದ್ದೇಶಿಸಿ ವೈಯಕ್ತಿಕ ನಿಂದನೆ, ಅವಾಚ್ಯ ಶಬ್ದಗಳ ಬಳಕೆ ಮತ್ತು ಬೆದರಿಕೆ ಹಾಕುವುದು ಅತ್ಯಂತ ಖಂಡನೀಯ. ಈ ಅಸಭ್ಯ ಕೃತ್ಯಗಳಲ್ಲಿ ತೊಡಗಿರುವವರು ಸಾಮಾಜಿಕ ಸಂವೇದನೆ ಮತ್ತು ವ್ಯಕ್ತಿಗೌರವದ ಪ್ರಜ್ಞೆಯನ್ನು ಸಂಪೂರ್ಣವಾಗಿ ಕಳೆದುಕೊಂಡಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ.

Tags

MLA Dr. Ajay SinghKharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X